ಎರಡನೇ ರಾಜಧಾನಿಯ ಸಿಎಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಅಸಮಾಧಾನ
ಬೆಂಗಳೂರು, ಆಗಸ್ಟ್ 01: ಉತ್ತರ ಕರ್ನಾಟಕಕ್ಕೆ ಪ್ರಾಧಾನ್ಯತೆ ನೀಡುವ ದೃಷ್ಟಿಯಿಂದ ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದ ಕುಮಾರಸ್ವಾಮಿ ಅವರ ಮಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಅಭಿವೃದ್ಧಿಯ ದೃಷ್ಟಿ ಹೊಂದಿದ ಮೇಲೆ ಎರೆರಡು ರಾಜಾನಿಗಳ ಅವಶ್ಯಕತೆ ಏನಿದೆ ಎಂದು ಅವರು ಪ್ರಶ್ನೆ ಮಾಡಿದರು.
ಎರಡು ಮೂರು ರಾಜಧಾನಿಗಳನ್ನು ಮಾಡಿಕೊಳ್ಳುವುದರಿಂದ ಅಭಿವೃದ್ಧಿ ಆಗಿಬಿಡುತ್ತದೆ ಎಂಬುದು ಭ್ರಮೆ ಎಂದ ಅವರು, ಕುಮಾರಸ್ವಾಮಿ ಅವರು ಯಾವ ದೃಷ್ಟಿಕೋನ ಇಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೋ ನನಗೆ ತಿಳಿಯದು ಎಂದಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಬಗ್ಗೆ ಮಾತನಾಡಿದ ಅವರು, ಉಮೇಶ್ ಕತ್ತಿ, ಶ್ರೀರಾಮುಲು ಸೇರಿದಂತೆ ಬಿಜೆಪಿ ಶಾಸಕರು ರಾಜ್ಯವನ್ನು ಒಡೆಯಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿ ಪೊಲಿಟಿಕಲ್ ಗಿಮಿಕ್ ಮಾಡುತ್ತಿದೆ ಎಂದಿದ್ದಾರೆ.
ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುತ್ತಿರುವವರು ಮೊದಲಿಗೆ ಕರ್ನಾಟಕ ಏಕೀಕರಣದ ಇತಿಹಾಸ ತಿಳಿದುಕೊಳ್ಳಬೇಕು ಎಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಅಭಿವೃದ್ಧಿಗಾಗಿ ಹೋರಾಟ ಮಾಡಿದರೆ ಅಡ್ಡಿಯಿಲ್ಲ ಆದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುವುದು ತಪ್ಪು ಎಂದರು.











Click it and Unblock the Notifications