• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಚಿವ ಪ್ರಿಯಾಂಕ್ ಖರ್ಗೆ ಎಚ್‌ಡಿ ಕುಮಾರಸ್ವಾಮಿಗೆ ಬರೆದ ಪತ್ರದಲ್ಲೇನಿದೆ?

|

ಬೆಂಗಳೂರು, ನವೆಂಬರ್ 17: ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆಯುತ್ತಿರುವ ನೇಮಕಾತಿ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಬ್ರಿಟಿಷರ ವಿರುದ್ಧ ನಾಲ್ಕು ಯುದ್ಧ ಮಾಡಿದ ಏಕೈಕ ಅರಸು ಟಿಪ್ಪು: ಖರ್ಗೆ

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆಯುತ್ತಿರುವ ನೇಮಕಾತಿಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಹುದ್ದೆಗಳಲ್ಲಿ ಮೆರಿಟ್​ ಆಧಾರದಲ್ಲಿ ಪರಿಶಿಷ್ಟ ಜಾತಿ/ಪಂಗಡಗಳ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಬಗ್ಗೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಉದ್ಯೋಗ ನೀಡಲು ಸಮೃದ್ಧಿ ಯೋಜನೆ

ಈ ಕುರಿತು ನಾಲ್ಕು ಪುಟಗಳ ಪತ್ರ ಬರೆದಿರುವ ಪ್ರಿಯಾಂಕ್​ ಖರ್ಗೆ, ಅನುಸೂಚಿತ ಜಾತಿಗಳ ಮೀಸಲನ್ನು ಶೇ. 50ಕ್ಕೇ ಮಿತಿಗೊಳಿಸುತ್ತಿರುವ ಬಗ್ಗೆ ಮತ್ತು ಮೆರಿಟ್​ ಹೊಂದಿರುವ ಪರಿಶಿಷ್ಟ ಜಾತಿ / ಪಂಗಡಗಳ ಅಭ್ಯರ್ಥಿಗಳಿಗೆ ಸಾಮಾನ್ಯ ವರ್ಗಕ್ಕೆ ಮೀಸಲಾದ ಹುದ್ದೆಗಳಲ್ಲಿ ಅವಕಾಶ ನೀಡದೆ ಇರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ಕೂಡಲೇ ಈ ವಿಚಾರವಾಗಿ ಮಧ್ಯಪ್ರವೇಶ ಮಾಡಬೇಕಾಗಿ ಅವರು ಕೋರಿದ್ದಾರೆ.

ಮೈತ್ರಿ ಸರಕಾರ ಆಡಳಿತಕ್ಕೆ ರಾಮಾಯಣವೇ ಸ್ಫೂರ್ತಿ: ಸಚಿವ ಪ್ರಿಯಾಂಕ್ ಖರ್ಗೆ

ಪತ್ರದಲ್ಲೇನಿದೆ? ಪರಿಶಿಷ್ಟ ಜಾತಿ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 16(4)ರಲ್ಲಿ ಸಾಮಾಜಿಕ ಮೀಸಲಾತಿ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಅನುಸರಿಸಬೇಕಾದ ನೇರ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿ(ಶೇ.15), ಪರಿಶಿಷ್ಟ ಪಂಗಡ(ಶೇ.3) ಪ್ರವರ್ಗ 1(ಶೇ.4) ಪ್ರವರ್ಗ 2 ಎ(ಶೇ.15) ರಂತೆ ಸರ್ಕಾರ ನಿಗದಿಪಡಿಸಿದೆ ಎಂದು ತಿಳಿಸಿದ್ದಾರೆ.

English summary
minister Priyank kharge wrote a letter chief minister HD Kumaraswamy about KPSC recruitment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X