ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾಷಾ ಸಮರ: ಏ.28ರಂದು ಅಜಯ್ ದೇವಗನ್ ವಿರುದ್ಧ ಕನ್ನಡಪರ ಸಂಘಟನೆಗಳ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 27: ಹಿಂದಿ ರಾಷ್ಟ್ರೀಯ ಭಾಷೆಯ ವಿಚಾರವಾಗಿ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವಿಟ್ ಸಮರ ನಡೆದಿತ್ತು.

ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಸುದೀಪ್ ಹೇಳಿದ್ದಕ್ಕೆ, ನೀವೇಕೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಬಿಡುತ್ತೀರಿ ಎಂದು ಅಜಯ್ ದೇವಗನ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದರು. ಇದರಿಂದಾಗಿ ಇಬ್ಬರು ಸ್ಟಾರ್‌ಗಳ ನಡುವೆ ಟ್ವಿಟ್ಟರ್‌ನಲ್ಲೇ ಪ್ರಶ್ನೋತ್ತರ ನಡೆದಿತ್ತು.

ಭಾಷಾ ಸಮರ: ಸುದೀಪ್ ಹೇಳಿದ್ದು ಸರಿ ಇದೆ, ಅಜಯ್ ದೇವಗನ್‌ದು ಅಧಿಕ ಪ್ರಸಂಗತನ: ಎಚ್‌ಡಿಕೆಭಾಷಾ ಸಮರ: ಸುದೀಪ್ ಹೇಳಿದ್ದು ಸರಿ ಇದೆ, ಅಜಯ್ ದೇವಗನ್‌ದು ಅಧಿಕ ಪ್ರಸಂಗತನ: ಎಚ್‌ಡಿಕೆ

ಇದೀಗ ಕಿಚ್ಚ ಸುದೀಪ್ ಅವರ ಪ್ಯಾನ್ ಇಂಡಿಯಾ ಸಿನಿಮಾ ಹೇಳಿಕೆ ಬೆಂಬಲವಾಗಿ ಹಾಗೂ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧವಾಗಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಏಪ್ರಿಲ್ 28ರ ಗುರುವಾರ ಬೆಳಿಗ್ಗೆ 11:30ಕ್ಕೆ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

Pro-Kannada Organizations To Protest Against Ajay Devgn On April 28 In Bengaluru

ನೀವೇಕೆ ಹಿಂದಿಯಲ್ಲಿ ಸಿನಿಮಾಗಳನ್ನು ಡಬ್ ಮಾಡುತ್ತೀರಿ ಎಂದ ಅಜಯ್ ದೇವಗನ್
ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಸುದೀಪ್ ಹೇಳಿದ್ದಕ್ಕೆ, ನೀವೇಕೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಬಿಡುತ್ತೀರಿ ಎಂದು ಅಜಯ್ ದೇವಗನ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದರು. ಇದರಿಂದಾಗಿ ಇಬ್ಬರು ಸ್ಟಾರ್‌ಗಳ ನಡುವೆ ಟ್ವಿಟ್ಟರ್‌ನಲ್ಲೇ ಪ್ರಶ್ನೋತ್ತರ ನಡೆದಿತ್ತು.

ತಪ್ಪು ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್
ಇನ್ನು ಅಜಯ್ ದೇವಗನ್ ಪ್ರಶ್ನೆಗೆ ಉತ್ತರಿಸಿದ್ದ ಸುದೀಪ್, ನಾನು ಯಾವ ಅರ್ಥದಲ್ಲಿ ಆ ಮಾತನ್ನು ಹೇಳಿದ್ದೇನೆ ಎನ್ನುವುದನ್ನು ಖುದ್ದಾಗಿ ತಮ್ಮನ್ನು ಭೇಟಿಯಾದ ನಂತರ ವಿವರಿಸುವೆ. ನನ್ನ ಹೇಳಿಕೆ ಸಂಪೂರ್ಣ ವಿಭಿನ್ನವಾದದ್ದು. ಯಾರನ್ನೂ ನೋಯಿಸಲು, ಪ್ರಚೋದಿಸಲು ಮತ್ತು ಚರ್ಚೆ ಮಾಡಲು ಅದನ್ನು ಹೇಳಿದ್ದಂತೂ ಅಲ್ಲ ಎಂದು ಕಿಚ್ಚ ಸುದೀಪ್ ಮತ್ತೊಂದು ಟ್ವೀಟ್ ಮಾಡಿದ್ದರು.

ಈ ಟ್ವಿಟ್‌ಗೆ ಉತ್ತರಿಸಿದ ಅಜಯ್ ದೇವಗನ್, ತಪ್ಪು ತಿಳುವಳಿಕೆಯಿಂದಾಗಿ ಇಷ್ಟೆಲ್ಲ ಆಯಿತು. ಈ ವಿಷಯವನ್ನು ತಿಳಿಗೊಳಿಸಿದ್ದಕ್ಕೆ ಧನ್ಯವಾದಗಳು ಸ್ನೇಹಿತ ಸುದೀಪ್. ನಾವು ಎಲ್ಲ ಭಾಷೆಗಳನ್ನೂ ಗೌರವಿಸುತ್ತೇವೆ. ಮತ್ತು ಪ್ರತಿಯೊಬ್ಬರೂ ನಮ್ಮ ಭಾಷೆಯನ್ನು ಗೌರವಿಸಬೇಕು ಎಂದು ನಿರೀಕ್ಷಿಸುತ್ತೇವೆ. ಬಹುಶಃ ಅನುವಾದದಲ್ಲಿ ಏನೋ ಮಿಸ್ ಆಗಿರಬಹುದು ಎಂದು ಅಜಯ್ ದೇವಗನ್ ಟ್ವಿಟ್ ಮಾಡುವ ಮೂಲಕ ಈ ಪ್ರಕರಣಕ್ಕೆ ಅಂತ್ಯ ಹಾಡಲು ಪ್ರಯತ್ನಿಸಿದ್ದಾರೆ.

English summary
Pro-Kannada organizations to protest against Ajay Devgan on April 28, at Mysuru Bank circle in Bengaluru at 11:30am. This is in support of Kichcha Sudeep for his hindi no more national Language statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X