ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಮಸ್ಯೆ, ರೇಬೀಸ್ ಹೆಚ್ಚಳ: ಜಿಬಿಎ ಮಹತ್ವದ ಆದೇಶ
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹಾಗೂ ರೇಬೀಸ್ ಸಮಸ್ಯೆ ಹೆಚ್ಚಾಗುತ್ತಿದ್ದು ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಈ ನಿಟ್ಟಿನಲ್ಲಿ ಮಹತ್ವದ ಕ್ರಮ ತೆಗೆದುಕೊಳ್ಳುವುದಕ್ಕೆ ಮುಂದಾಗಿದೆ. ಅಲ್ಲದೇ ಇದೇ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಬೀದಿ ನಾಯಿಗಳ ಮಾಹಿತಿ ಸಂಗ್ರಹಿಸಲು ವಿವಿಧ ಇಲಾಖೆ/ಸಂಸ್ಥೆಗಳಿಗೆ 5 ನಗರ ಪಾಲಿಕೆಗಳಿಂದ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳ / ತಾಣಗಳನ್ನು ನಗರ ಪಾಲಿಕೆಗಳ ಪಶುಪಾಲನಾ ವಿಭಾಗದ ಅಧಿಕಾರಿಗಳು ಗುರುತಿಸಲಿದ್ದಾರೆ. ಆ ತಾಣಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಆಹಾರ ನೀಡುವುದನ್ನು ನಿಷೇಧಿಸಲಾಗಿದೆ.

ಇದನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಆಹಾರ ನೀಡುವುದು ಕಂಡುಬಂದಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆಯಾಗುತ್ತದೆ. ಈ ಆದೇಶವನ್ನು ಉಲ್ಲಂಘಿಸುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರತೀಯ ಪ್ರಾಣಿಕಲ್ಯಾಣ ಮಂಡಳಿ ಮಾರ್ಗಸೂಚಿ ಮತ್ತು ಎಬಿಸಿ ನಿಯಮಗಳು 2023ರ ಮಾರ್ಗಸೂಚಿಗಳಂತೆ ಸಾರ್ವಜನಿಕರು ಬೀದಿನಾಯಿಗಳನ್ನು ದತ್ತು ಪಡೆದು ಅವುಗಳಿಗೆ ಆಹಾರ, ಆರೋಗ್ಯ, ಭದ್ರತೆ ಮತ್ತು ಸುರಕ್ಷಿತ ಆಶ್ರಯ ನೀಡಿ ಬೀದಿನಾಯಿಗಳ ಸಮಸ್ಯೆ ಪರಿಹರಿಸಲು ಸಹಕರಿಸವುದು. ಬೀದಿನಾಯಿಗಳನ್ನು ದತ್ತು ಪಡೆಯಲು 5 ನಗರ ಪಾಲಿಕೆಗಳ ಪಶುಪಾಲನಾ ವಿಭಾಗದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು, ನಗರ ಪಾಲಿಕೆಯು ಬೀದಿನಾಯಿಗಳಿಗೆ ಆಹಾರನೀಡಲು ನಿಗದಿಪಡಿಸಿದ ತಾಣಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಆಹಾರ ನೀಡುವುದು ಕಂಡುಬಂದಲ್ಲಿ, ಬೀದಿನಾಯಿ ಕಡಿತ ಹಾಗೂ ಬೀದಿನಾಯಿ ಉಪಟಳ ಸೇರಿದಂತೆ ಇತರ ಸಂಬಂಧಿತ ದೂರುಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ವ್ಯಾಪ್ತಿಯ 5 ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆ(1533) ಮತ್ತು ರೇಬೀಸ್ ಸಹಾಯವಾಣಿ ಸಂಖ್ಯೆ 6364893322 ಗೆ ಕರೆ ಮಾಡಬಹುದು.
ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಮಾಡಿ ಬೀದಿ ನಾಯಿಗಳನ್ನು ನಾಯಿ ಆಶ್ರಯತಾಣದಲ್ಲಿ ಆಶ್ರಯ ನೀಡಿ ಪೋಷಿಸಲು ಆಸಕ್ತ ಪ್ರಾಣಿಕಲ್ಯಾಣ ಸಂಸ್ಥೆಗಳು ಭಾಗವಹಿಸಲು ತಿಳಿಸುತ್ತ ನಗರ ಪಾಲಿಕೆ ವತಿಯಿಂದ ಅಗತ್ಯ ಸವಲತ್ತುಗಳನ್ನು ಒದಗಿಸಲಾಗುವುದು. ಪೂರ್ವ ನಗರ ಪಾಲಿಕೆಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳ/ತಾಣಗಳನ್ನು ಗುರುತಿಸುವ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದು, ಕನಿಷ್ಠ 150 ಸ್ಥಳಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸುರಕ್ಷಿತ ಜಾಗಗಳನ್ನು ಗುರುತಿಸುವ ಗುರಿ ಹೊಂದಿದೆ. ಇದೇ ರೀತಿ ಉಳಿದ ನಗರ ಪಾಲಿಕೆಗಳಲ್ಲಿಯೂ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಗಳನ್ನು ಗುರುತಿಸಲಾಗುವುದು ಎಂದು ಹೇಳಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಪಾಲನೆ
ಸುಪ್ರೀಂ ಕೋರ್ಟ್‌ನ ಸ್ವಯಂಪ್ರೇರಿತ ರಿಟ್‌ಅರ್ಜಿ(ಸಿವಿಲ್) ಸಂಖ್ಯೆ 5 ಆಫ್ 2025 ಆದೇಶದ ಅನ್ವಯ ಕೆಲವೊಂದು ಪ್ರಮುಖ ನಿರ್ದೇಶನಗಳನ್ನು ನೀಡಲಾಗಿದೆ. ಆದೇಶ ಪಾಲನೆ ಮಾಡಿರುವ ಬಗ್ಗೆ ಸರ್ವೊಚ್ಚ ನ್ಯಾಯಾಲಯಕ್ಕೆ 8 ವಾರಗಳೊಳಗೆ ಅಫಿಡವಿಟ್ ಸಲ್ಲಿಸಲು ನಿರ್ದೇಶನ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ವಿವಿಧ ಇಲಾಖೆ/ಸಂಸ್ಥೆಗಳನ್ನು ಗುರುತಿಸಿ, ಆವರಣದಲ್ಲಿರುವ ಬೀದಿ ನಾಯಿಗಳ ಸಂಖ್ಯೆ ಮಾಹಿತಿಯನ್ನು ಪಡೆದು, ಇರುವ ಬೀದಿ ನಾಯಿಗಳನ್ನು ತೆರವುಗೊಳಿಸಿ, ಅವುಗಳನ್ನು ನಾಯಿ ಆಶ್ರಯತಾಣದಲ್ಲಿ ಆಶ್ರಯ ನೀಡಿ ಪೋಷಿಸಲು ಮಹತ್ವದ ಕ್ರಮ ತೆಗೆದುಕೊಂಡಿರುವುದಾಗಿ ಜಿಬಿಎ ಹೇಳಿದೆ.
ನಗರ ಪಾಲಿಕೆಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು-ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಕೋಚಿಂಗ್ ಕೇಂದ್ರಗಳು (ಹಾಸ್ಟೆಲ್‌ಸಹಿತ / ರಹಿತ), ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು / ಆರೋಗ್ಯ ಕೇಂದ್ರಗಳು -ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು, ಕ್ರೀಡಾ ಸಂಕೀರ್ಣಗಳು ಮತ್ತು ಕ್ರೀಡಾಂಗಣಗಳು(ಸಾರ್ವಜನಿಕ ಅಥವಾ ಖಾಸಗಿ), ಬಸ್ ನಿಲ್ದಾಣಗಳು / ಡಿಪೋಗಳು ಇಂಟರ್ ಸ್ಟೇಟ್ ಬಸ್ ಟರ್ಮಿನಲ್ ಮತ್ತು ರೈಲು ನಿಲ್ದಾಣ ಸೇರಿದಂತೆ ಇತರೆ ಇಲಾಖೆ/ಸಂಸ್ಥೆಗಳಿಗೆ ನೋಟಿಸ್ ನೀಡಿ ಕೆಲವೊಂದು ಸೂಚನೆಗಳನ್ನು ಸಹ ಕೊಡಲಾಗಿದೆ.
1. ಬೀದಿನಾಯಿಗಳ ಸಂಖ್ಯೆ ಮಾಹಿತಿಯನ್ನು ನೀಡುವುದು.
2. ಸಂಸ್ಥೆಗಳ ಆವರಣದೊಳಗೆ ಬೀದಿ ನಾಯಿಗಳ ಮರು ಪ್ರವೇಶವನ್ನು ತಡೆಗಟ್ಟಲು ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಆರೋಗ್ಯರಕ್ಷಣಾ ಸಂಸ್ಥೆಗಳು, ಬಸ್ ನಿಲ್ದಾಣಗಳು/ಡಿಪೋಗಳು (ಅಂತರರಾಜ್ಯ ಬಸ್ ಟರ್ಮಿನಲ್ಗಳು ಸೇರಿದಂತೆ) ಮತ್ತುರೈಲ್ವೆ ನಿಲ್ದಾಣಗಳು, ಕ್ರೀಡಾ ಸಂಕೀರ್ಣ ಸಂಸ್ಥೆಗಳ ಆವರಣವನ್ನು ತಡೆಗೊಡೆ/ Fencing ಹಾಕಿಸುವುದು.
3. ಸಂಸ್ಥೆಯಲ್ಲಿ ಬೀದಿನಾಯಿಗಳ ಮರುಪ್ರವೇಶ ತಡೆಗಟ್ಟುವಿಕೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛತೆಯನ್ನು ಕಾಪಾಡುವಿಕೆ ಹಾಗು ಪಾಲಿಕೆಯೊಂದಿಗೆ ಸಮನ್ವಯ ಸಾಧಿಸಲು ಒಬ್ಬರು ಜವಾಬ್ದಾರಿಯುತ ಅಧಿಕಾರಿಯನ್ನು ನಾಮ ನಿರ್ದೇಶನ ಮಾಡುವುದು. ಸದರಿ ನೋಡಲ್ ಅಧಿಕಾರಿಯ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನು ಸಂಸ್ಥೆಯ ಆವರಣದಲ್ಲಿ ಪ್ರದರ್ಶಿಸುವುದು ಹಾಗು ಪಾಲಿಕೆಗೆ ನೋಡಲ್ ಅಧಿಕಾರಿಯ ಮಾಹಿತಿ ನೀಡುವುದು.
4. ಕ್ರೀಡಾ ಸಂಕೀರ್ಣಗಳು ಮತ್ತು ಕ್ರೀಡಾಂಗಣಗಳು ಆವರಣದಲ್ಲಿ ಬೀದಿನಾಯಿಗಳ ಪ್ರವೇಶ ತಡೆಗಟ್ಟಲು 24X7 ನಿಗಾ ವಹಿಸಲು ಭದ್ರತಾ ಸಿಬ್ಬಂದಿ ನೇಮಿಸುವುದು.
ಈ ಮಾಹಿತಿ ನೀಡಲು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಿಂದ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಸ್ವೀಕೃತವಾಗದಿದ್ದಲ್ಲಿ, ಸದರಿ ಪ್ರಕಟಣೆಯನ್ನು ಆಧರಿಸಿ ಸಂಸ್ಥೆಗಳ ಮುಖ್ಯಸ್ಥರು ಇದರೊಂದಿಗೆ ಲಗತ್ತಿಸಿರುವ Google ಫಾರಂ: 👇
https://docs.google.com/forms/d/e/1FAIpQLSd5PjP941lPNjML_K8TjDwFkC_bixgr9SXvspJmZKFAfZ4W_Q/viewform?usp=dialog ನಲ್ಲಿ ಮಾಹಿತಿ ದಾಖಲಿಸಿ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಗತ್ಯಕ್ರಮ ವಹಿಸಿ ಅನುಪಾಲನಾ ವರದಿ ನೀಡಬೇಕು ಎಂದು ಹೇಳಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications