ಮೇ.11ರಂದು ಹೈಕೋರ್ಟ್ ಸುತ್ತ-ಮುತ್ತ ನಿಷೇಧಾಜ್ಞೆ

ಬೆಂಗಳೂರು, ಮೇ 09 : ಕರ್ನಾಟಕ ಹೈಕೋರ್ಟ್ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ಮೇಲ್ಮನವಿ ತೀರ್ಪನ್ನು ಸೋಮವಾರ ಪ್ರಕಟಿಸಲಿದೆ. ಮುಂಜಾಗ್ರತಾ ಕ್ರಮವಾಗಿ ಹೈಕೋರ್ಟ್ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಈ ಕುರಿತು ಶನಿವಾರ ಆದೇಶ ಹೊರಡಿಸಿದ್ದಾರೆ. ತಮಿಳುನಾಡಿನ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಬಗ್ಗೆ ಗುಪ್ತಚರ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. [ಮೇ 11ಕ್ಕೆ ಜಯಲಲಿತಾ ತೀರ್ಪು]

High Court

ಮೇ 11ರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಶಸ್ತ್ರಾಸ್ತ್ರಗಳನ್ನು ಹಿಡಿದು ಓಡಾಡುವುದು, ಕಲ್ಲು ಎಸೆಯುವುದು, ಸ್ಫೋಟಕ ಸಿಡಿಸುವುದನ್ನು ನಿಷೇಧಿಸಲಾಗಿದೆ. [ಅಕ್ರಮ ಆಸ್ತಿಗಳಿಕೆ ಪ್ರಕರಣದ Timeline]

ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿಯ ವಿಚಾರಣೆಯನ್ನು ಮಾ.11ರಂದು ಮುಕ್ತಾಯಗೊಳಿಸಿದ್ದಾರೆ. ಮೇ 11ರ ಸೋಮವಾರ ಬೆಳಗ್ಗೆ 11 ಗಂಟೆಗೆ ತೀರ್ಪು ಪ್ರಕಟಗೊಳ್ಳಲಿದೆ.

2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲ­ಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದರು.

ಈ ತೀರ್ಪನ್ನು ಪ್ರಶ್ನಿಸಿ ಜಯಲಲಿತಾ ಅವರು ಮೇಲ್ಮನವಿ ಸಲ್ಲಿಸಿದ್ದರು. ಸುಮಾರು ಮೂರು ತಿಂಗಳ ವಿಚಾರಣೆ ಬಳಿಕ ಮೇಲ್ಮನವಿ ಅರ್ಜಿಯ ತೀರ್ಪು ಪ್ರಕಟಗೊಳ್ಳಲಿದೆ. ತೀರ್ಪು ಪ್ರಕಟಗೊಳ್ಳುವ ದಿನ ಜಯಲಲಿತಾ ಅವರು ಕೋರ್ಟ್‌ಗೆ ಆಗಮಿಸುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+