ಬೆಂಗ್ಳೂರಿನ ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಬೆಂಗಳೂರು, ಮಾರ್ಚ್. 05 : ಇದೇ ಮಾರ್ಚ್ 09ರಿಂದ 27ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಶಾಂತಿ ಮತ್ತು ಸುವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲ 147 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಎಲ್ಲಾ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕೆಂದು ಅವರು ಆದೇಶಿಸಿದ್ದಾರೆ. [ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ]

ಜತೆಗೆ ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಭದ್ರತೆ ಒದಗಿಸಲಾಗುವುದು. ಬೆಂಗಳೂರು ಅಪರ ಜಿಲ್ಲಾಧಿಕಾರಿಗಳ ಮನವಿಯ ಮೇರೆಗೆ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಕಳೆದ ವರ್ಷ ಎರಡು ಬಾರಿ ರಾಸಾಯಾನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಇಡೀ ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿತ್ತು. ಇದರಿಂದ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳ ಮೇಲೆ ಭಾರೀ ಕಟ್ಟೆಚ್ಚೆರ ವಹಿಸಲಾಗಿದೆ.












Click it and Unblock the Notifications