Property in Bengaluru: ಬೆಂಗಳೂರಿನಲ್ಲಿ ಭೂಮಿ, ಮನೆಗಳ ಬೆಲೆ 4 ಪಟ್ಟು ಭರ್ಜರಿ ಏರಿಕೆ, ಯಾವ ಅವಧಿಯಲ್ಲಿ?!

Property in Bengaluru: ಬೆಂಗಳೂರಿನಲ್ಲಿ ಭೂಮಿಗೆ ಚಿನ್ನದ ಬೆಲೆ ಇದೆ. ಈ ಭಾಗದಲ್ಲಿ ಐಟಿ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಹಾಗೂ ಕಂಪನಿಗಳು ಅಭಿವೃದ್ಧಿಯಾದ ನಂತರ ಭೂಮಿ, ಜಾಗ ಮತ್ತು ಮನೆಗಳ ಬೆಲೆ ಸಿಕ್ಕಾಪಟ್ಟೆ ಹೆಚ್ಚಳವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೂಮಿಯ ಬೆಲೆಯನ್ನು ಚಿನ್ನದ ಮೊಟ್ಟೆಗೆ ಹೋಲಿಕೆ ಮಾಡುವುದೂ ಸಹ ಇದೆ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನಲ್ಲಿ ಭೂಮಿಯ ಬೆಲೆ ಕಳೆದ ಎರಡರಿಂದ ಮೂರು ದಶಕಗಳ (20ರಿಂದ 30 ವರ್ಷಗಳ) ಅವಧಿಯಲ್ಲಿ ಭರ್ಜರಿ ಏರಿಕೆ ಕಂಡಿದೆ. ಈ ಅವಧಿಯಲ್ಲಿ ರಿಯಲ್‌ ಎಸ್ಟೇಟ್‌ ಎಷ್ಟು ಅಭಿವೃದ್ಧಿಯಾಗಿದೆ ಹಾಗೂ ಬೆಂಗಳೂರಿನಲ್ಲಿ ಸರ್ಕಾರ ಈ ಕೆಲಸ ಮಾಡದೆ ಇದ್ದರೂ ಲಾಭವಾಗಿದೆ. ಒಂದೊಮ್ಮೆ ಏನಾದರೂ ಮಾಡಿದ್ದರೆ ಮುಂಬೈಗೆ ನಾವು ಪೈಪೋಟಿ ಕೊಡಬಹುದಿತ್ತು ಎನ್ನುವ ಚರ್ಚೆ ಶುರುವಾಗಿದೆ. ಈ ಬೆಳವಣಿಗೆ ಬೆಂಗಳೂರು ಭೂಮಿಗೆ ಯಾವಾಗಲೂ ಲಾಭವಿದೆ ಎನ್ನುವುದನ್ನು ತೋರಿಸಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಶಕಗಳ ಅವಧಿಯಲ್ಲಿ ರಿಯಲ್‌ ಎಸ್ಟೇಟ್‌ಗೆ ಬಂಪರ್ ಬಂದಿದೆ. ಇದಕ್ಕೆ ಹಲವು ಕಾರಣಗಳನ್ನು ಪಟ್ಟಿ ಮಾಡಲಾಗಿದೆ. ಆದರೆ, ಸರ್ಕಾರವು ಮಾಡುತ್ತಿರುವ ಒಂದು ತಪ್ಪು ಅಥವಾ ಮುಂದಾಲೋಚನೆ ಇಲ್ಲದೆ ಇರುವುದು ಮುಂದಿನ ದಿನಗಳಲ್ಲಿ ಸಮಸ್ಯೆಗೆ ಕಾರಣವಾಗಬಹುದು ಎಂದು ಹೇಳಲಾಗಿದೆ. ಇನ್ನು ಬೆಂಗಳೂರಿನಲ್ಲಿ ರಿಯಲ್‌ ಎಸ್ಟೇಟ್‌ ಯಾವ ಕಾರಣಕ್ಕೆ ಭಾರೀ ಅಭಿವೃದ್ಧಿಯಾಗಿದೆ ಮುಂದಿನ ದಿನಗಳಲ್ಲಿ ಏನಾಗಬಹುದು ಎನ್ನುವ ಬಗ್ಗೆಯೂ ಚರ್ಚೆಗಳು ಶುರುವಾಗಿದೆ.

Property Boom Land and House Prices in Bengaluru Have Increased by 4 Times During This Time

ಭೂಮಿ ಬೆಲೆ ನಾಲ್ಕು ಪಟ್ಟು ಹೆಚ್ಚಳ: ಬೆಂಗಳೂರಿನಲ್ಲಿ ಕಳೆದ 30 ವರ್ಷಗಳ ಅವಧಿಯಲ್ಲಿ ರಿಯಲ್‌ ಎಸ್ಟೇಟ್‌ ಬರೋಬ್ಬರಿ 4 ಪಟ್ಟು ಅಭಿವೃದ್ಧಿಯಾಗಿದೆ. ಇದಕ್ಕೆ ಹಲವು ಕಾರಣಗಳಿವೆ. ಬೆಂಗಳೂರಿನಲ್ಲಿ ಮೆಟ್ರೋ ಸೇವೆ ವಿಸ್ತರಣೆ, ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಹಾಗೂ ಫ್ಲೈಓವರ್, ಹೆದ್ದಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಂಪನಿಗಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಕಾರಣಗಳಿಗೆ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಆದರೆ, ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನೀರಿನ ಸಮಸ್ಯೆ ಆಗಿದೆ. ಇನ್ನು ರಿಯಲ್‌ ಎಸ್ಟೇಟ್‌ಗೆ ಪೂರಕವಾಗಿ ರಾಜ್ಯ ಸರ್ಕಾರವು ಯಾವುದೇ ಹೆಚ್ಚಿನ ಕ್ರಮಗಳನ್ನು ಅನುಸರಿಸಿಲ್ಲ. ಒಂದೊಮ್ಮೆ ಇದನ್ನು ಅನುಸರಿಸಿದ್ದರೆ ಇನ್ನಷ್ಟು ಲಾಭವಾಗುತ್ತಿತ್ತು ಎನ್ನುವ ವಿಚಾರವು ಇದೀಗ ಚರ್ಚೆಯಾಗುತ್ತಿದೆ.

Take a Poll

ಬೆಂಗಳೂರಿನಲ್ಲಿ ರಿಯಲ್‌ ಎಸ್ಟೇಟ್‌ಗೆ ಪೂರಕವಾಗಿ ರಾಜ್ಯ ಸರ್ಕಾರವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರ ಹೊರತಾಗಿಯೂ ಭಾರೀ ಅಭಿವೃದ್ಧಿಯಾಗಿದೆ. ಇನ್ನೇನಾದರೂ ಕ್ರಮ ತೆಗೆದುಕೊಂಡಿದ್ದರೆ ಬೆಂಗಳೂರು ರಿಯಲ್‌ ಎಸ್ಟೇಟ್‌ನಲ್ಲಿ ಇನ್ನಷ್ಟು ಅಭಿವೃದ್ಧಿ ಆಗುತ್ತಿತ್ತು ಎಂದು ಸೋಷಿಯಲ್‌ ಮೀಡಿಯಾದಲ್ಲಿ ರೂಪಾಯಿ ರಾಜ ಎನ್ನುವ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಭೂಮಿಗೆ ಯಾವಾಗಲೂ ಬೆಲೆ ಇರಲಿದೆ. ಆದರೆ ರಾಜ್ಯ ಸರ್ಕಾರ ರಿಯಲ್‌ ಎಸ್ಟೇಟ್‌ಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಅಭಿಪ್ರಾಯಪಡಲಾಗಿದೆ.

Property Boom Land and House Prices in Bengaluru Have Increased by 4 Times During This Time

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಇನ್ನು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿರುವ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಗಳು ನಡೆದಿವೆ. ಇನ್ನು ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜಿಗೆ ಸಂಬಂಧಿಸಿದಂತೆ 2010ರ ನಂತರ ಯಾವುದೇ ಹೊಸ ಯೋಜನೆಗಳನ್ನು ರೂಪಿಸಿಕೊಂಡಿಲ್ಲ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಆಸ್ತಿ ದುಬಾರಿ: ಇನ್ನು ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಆಸ್ತಿ ಇನ್ನಷ್ಟು ದುಬಾರಿಯಾಗಲಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರವು ವೇಗ ಪಡೆದುಕೊಂಡಿದೆ. ಇದರಿಂದ ಈ ಭಾಗದಲ್ಲಿ ರಿಯಲ್‌ ಎಸ್ಟೇಟ್‌ ಬೂಮ್‌ ಆಗುವ ನಿರೀಕ್ಷೆ ಮೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+