Bengaluru Airport: ಬೆಂಗಳೂರಿನ ಈ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ, ಎಲ್ಲೆಲ್ಲಿ ಆಸ್ತಿ ಬೆಲೆ ಹೆಚ್ಚಳ ಮಾಹಿತಿ ತಿಳಿಯಿರಿ!
Bengaluru Airport: ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಬೆಳವಣಿಗೆಯು ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ರಿಯಲ್ ಎಸ್ಟೇಟ್‌ಗೆ ಭಾರೀ ಲಾಭವಾಗುತ್ತಿದೆ. 2019ರ ನಂತರ ಬೆಂಗಳೂರಿನ ರಿಯಲ್ ಎಸ್ಟೇಟ್ ಭಾರೀ ಲಾಭದ ಹಾದಿಯಲ್ಲಿ ಸಾಗಿದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಬೆಂಗಳೂರಿನಲ್ಲಿ ಭೂಮಿ ಹಾಗೂ ಆಸ್ತಿಗಳ ಬೆಲೆಯು ಭಾರೀ ಹೆಚ್ಚಳವಾಗುತ್ತಿದೆ. ಇದೀಗ Square Yards ವರದಿಯ ಪ್ರಕಾರ, ಬೆಂಗಳೂರಿನಲ್ಲಿ ಭೂಮಿಯ ಬೆಲೆಯು ಭಾರೀ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ ಭೂಮಿಯನ್ನು ರಿಯಲ್ ಎಸ್ಟೇಟ್ ಪರಿಭಾಷೆಯಲ್ಲಿ ಚಿನ್ನದ ಮೊಟ್ಟೆಯನ್ನು ಇರಿಸುವ ಕೋಳಿಗೆ ಹೋಲಿಕೆ ಮಾಡಲಾಗುತ್ತದೆ. ಅದೇ ರೀತಿ ಕಳೆದ ಐದು ವರ್ಷದ ಅವಧಿಯಲ್ಲಿ ಬೆಂಗಳೂರಿನಲ್ಲಿ ಭೂಮಿ ಹಾಗೂ ಪ್ರಾಪರ್ಟಿಯ ಬೆಲೆಯು ಭಾರೀ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಜಾರಿಯಾಗಿರುವ ವಿವಿಧ ಯೋಜನೆ ಹಾಗೂ ಸಾರಿಗೆ ಸಂಪರ್ಕ ಅಭಿವೃದ್ಧಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾರ್ಗ ಸೇರಿದಂತೆ ವಿವಿಧ ಕಾರಣಗಳಿಗೆ ಬೆಂಗಳೂರಿನಲ್ಲಿ ಅದರಲ್ಲೂ ನಿರ್ದಿಷ್ಟವಾಗಿ ಬೆಂಗಳೂರು ಉತ್ತರ ಭಾಗದಲ್ಲಿ ಪ್ರಾಪರ್ಟಿ ಬೆಲೆಯು ಭಾರೀ ಹೆಚ್ಚಳವಾಗಿದೆ. ಈ ಭಾಗದಲ್ಲಿ ಆಸ್ತಿಗಳ ಬೆಲೆಯು ಕಳೆದ ಐದು ವರ್ಷದ ಅವಧಿಯಲ್ಲಿ ಬರೋಬ್ಬರಿ ಶೇ 69% ರಿಂದ 118% ರವರೆಗೆ ತೀವ್ರ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಬೆಂಗಳೂರಿನ ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳ: ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಭೂಮಿಯ ಬೆಲೆ ಹೆಚ್ಚಳವಾಗಿದೆ. ಆದರೆ, ನಿರ್ದಿಷ್ಟವಾಗಿ ಥಣಿಸಂದ್ರ, ಯಲಹಂಕ, ದೇವನಹಳ್ಳಿ ಹಾಗೂ ಬಾಗಲೂರು ಭಾಗದಲ್ಲಿ ಭೂಮಿಯ ಬೆಲೆ ಭಾರೀ ಹೆಚ್ಚಳವಾಗಿದೆ. ಬೆಂಗಳೂರು ಉತ್ತರ ಭಾಗದ ವಸತಿ ಪ್ರದೇಶಗಳಲ್ಲಿನ ಅಪಾರ್ಟ್ಮೆಂಟ್‌ಗಳ ಸರಾಸರಿ ಬೆಲೆಯು ಶೇ 69% ರಷ್ಟು ಹೆಚ್ಚಳವಾಗಿದೆ. ಅಂದಾಜು 11,000 ರಿಂದ 13,000 ರೂ.ಗಳಿಗೆ ಹೆಚ್ಚಳವಾಗಿದೆ. ವಸತಿ ಪ್ಲಾಟ್‌ಗಳ ಬೆಲೆಗಳು ಶೇ 118% ರಷ್ಟು ಹೆಚ್ಚಳವಾಗಿದೆ. 7,500 ರಿಂದ 8,000 ರೂಪಾಯಿಯ ವರೆಗೆ ಬೆಲೆ ಏರಿಕೆ ಆಗಿದೆ.
ಬೆಂಗಳೂರಿನ ಉಳಿದ ಭಾಗದಲ್ಲಿ ಅಪಾರ್ಟ್ಮೆಂಟ್‌ಗಳ ಬೆಲೆಯು ಆರ್ಥಿಕ ವರ್ಷ 2021 ರಿಂದ ಪ್ರಾರಂಭಿಸಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪ್ರತಿ ಚದರ ಅಡಿಗೆ 13,000 ರಿಂದ 15,000 ರೂಪಾಯಿ ಹೆಚ್ಚಳವಾಗುವ ಮೂಲಕ ಶೇ. 48% ರಷ್ಟು ಬೆಳವಣಿಗೆ ಕಂಡಿವೆ. ನಗರದ ಇನ್ನುಳಿದ ಭಾಗಗಳಲ್ಲಿ ವಸತಿ ಪ್ಲಾಟ್‌ಗಳ ಬೆಲೆಗಳು ಇದೇ ಅವಧಿಯಲ್ಲಿ ಸರಾಸರಿ ಶೇ. 93 ರಷ್ಟು ಏರಿಕೆಯಾಗಿವೆ ಎಂದು ವರದಿ ಉಲ್ಲೇಖಿಸಿದೆ.
ವಿಮಾನ ನಿಲ್ದಾಣ ಕಾರಣ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ (ದೇವನಹಳ್ಳಿ) ಸಹ ಬೆಂಗಳೂರಿನಲ್ಲಿ ಪ್ರಾಪರ್ಟಿ ಹೆಚ್ಚಳಕ್ಕೆ ಕಾರಣವಾಗಿದೆ. ವಿವಿಧ ನಗರಗಳಲ್ಲಿ ವಿಮಾನ ನಿಲ್ದಾಣ ಇರುವ ಕಾರಣ ಭೂಮಿಯ ಬೆಲೆ ಹೆಚ್ಚಳವಾಗಿರುವುದು ಇದೆ. ವಿಮಾನ ನಿಲ್ದಾಣಗಳು ನಗರಗಳ ಆರ್ಥಿಕ ಬೆಳವಣಿಗೆ ಸಹಕಾರಿಯಾಗಿದೆ ಎಂದು ಹೇಳಲಾಗಿದೆ. ದೆಹಲಿ, ಮುಂಬೈ, ಬೆಂಗಳೂರು ಹಾಗೂ ಹೈದರಾಬಾದ್‌ನಂತಹ ಪ್ರಮುಖ ವಿಮಾನ ನಿಲ್ದಾಣಗಳಿರುವ ಪ್ರದೇಶಗಳಲ್ಲಿ ಮೂಲಸೌಕರ್ಯ ಹಾಗೂ ಉದ್ಯೋಗ ಸೃಷ್ಟಿ ಹೆಚ್ಚಾಗಿದೆ. ಹೂಡಿಕೆಯು ಹೆಚ್ಚಾಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಭೂಮಿಯ ಬೆಲೆ ಹೆಚ್ಚಳವಾಗಿದೆ.












Click it and Unblock the Notifications