Property: ಜಿಎಸ್‌ಟಿ ಪರಿಷ್ಕರಣೆ: ರಿಯಲ್ ಎಸ್ಟೇಟ್‌ಗೆ ಬೂಸ್ಟ್‌, ಮನೆ ಖರೀದಿಗೆ ಬೆಸ್ಟ್‌ ಟೈಮ್‌!

Property: ಕೇಂದ್ರ ಸರ್ಕಾರವು ಜಿಎಸ್‌ಟಿ ಪರಿಷ್ಕರಣೆಯಲ್ಲಿ ತೆಗೆದುಕೊಂಡಿರುವ ಕೆಲವೊಂದು ಪರಿಣಾಮಕಾರಿ ಕ್ರಮಗಳಿಂದಾಗಿ ರಿಯಲ್ ಎಸ್ಟೇಟ್‌ಗೆ ಬೂಸ್ಟ್‌ ಬಂದಂತೆ ಆಗಿದೆ. ದೇಶದಾದ್ಯಂತ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಮನೆಗಳ ನಿರ್ಮಾಣ ಮತ್ತು ಖರೀದಿಯ ಮೇಲೆ ಜಿಎಸ್‌ಟಿ ಪರಿಣಾಮ ಬೀರಲಿದೆ ಎಂದು ರಿಯಲ್ ಎಸ್ಟೇಟ್ ತಜ್ಞರು ಹೇಳಿದ್ದಾರೆ. ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪ್ರಕ್ರಿಯೆಯನ್ನು ವೇಗಗೊಳಿಸುವ ನಿಟ್ಟಿನಲ್ಲಿ ಹಾಗೂ ರಿಯಲ್ ಎಸ್ಟೇಟ್ ವಲಯವನ್ನು ಉತ್ತೇಜಿಸುವ ಉದ್ದೇಶದಿಂದ ಜಿಎಸ್‌ಟಿ ಕೌನ್ಸಿಲ್ ಸಭೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಸಿಮೆಂಟ್ ಮೇಲಿನ ಜಿಎಸ್‌ಟಿ ದರವನ್ನು ಶೇ. 28 ರಿಂದ ಶೇ. 18 ಕ್ಕೆ ಇಳಿಸಲಾಗಿದೆ.

ರಿಯಲ್‌ ಎಸ್ಟೇಟ್ ಕ್ಷೇತ್ರದಲ್ಲಿ ಜಿಎಸ್‌ಟಿಗೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಭಾರತದಲ್ಲಿ ಪ್ರಸ್ತುತ ನಗರ ಪ್ರದೇಶದಲ್ಲಿ ಸುಮಾರು 1 ಕೋಟಿ ಬಜೆಟ್ ಮನೆಗಳ ಕೊರತೆಯಿದೆ. 2030ರ ವೇಳೆಗೆ ಇದು 2.5 ಕೋಟಿಗೆ ಏರಬಹುದು ಎಂದು ಅಂದಾಜಿಸಲಾಗಿದೆ. ಈ ಜಿಎಸ್‌ಟಿ ಸುಧಾರಣೆಗಳು ಕಡಿಮೆ ನಿರ್ಮಾಣ ವೆಚ್ಚ ಹಾಗೂ ಸುಧಾರಣೆಯನ್ನು ತರಲಿದೆ. ಮಧ್ಯಮ ವರ್ಗದವರು ಮನೆ ಪಡೆಯಬೇಕು ಎನ್ನುವ ಆಸೆಗೆ ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Property GST revision Boost for real estate and best time to buy house

56 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಭಾರತದ ಮೂಲಸೌಕರ್ಯ ಮತ್ತು ರಿಯಲ್ ಎಸ್ಟೇಟ್ ವಲಯಕ್ಕೆ ಅತ್ಯಂತ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಜಿಎಸ್‌ಟಿ ಸ್ಲ್ಯಾಬ್‌ಗಳ ಇಳಿಕೆಯಿಂದಾಗಿ ಹೂಡಿಕೆ ಹಾಗೂ ವಸತಿ, ವಾಣಿಜ್ಯ ಮತ್ತು ಚಿಲ್ಲರೆ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ವೇಗ ಪಡೆದುಕೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. ಮೂಲಸೌಕರ್ಯ ಹಾಗೂ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಸಿಮೆಂಟ್ ಬೆಲೆಯು ಮಹತ್ವವಾದ ಪಾತ್ರವನ್ನು ವಹಿಸುತ್ತದೆ. ಇದೀಗ ಸಿಮೆಂಟ್ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 28 ರಿಂದ 18 ಕ್ಕೆ ಇಳಿಸುವ ಮೂಲಕ ದೇಶಾದ್ಯಂತ ಮೂಲಸೌಕರ್ಯ ಅಭಿವೃದ್ಧಿಯನ್ನು ವೇಗ ಹಾಗೂ ರಿಯಲ್ ಎಸ್ಟೇಟ್ ವಲಯಕ್ಕೆ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ಸಿಮೆಂಟ್‌ನಂತಹ ನಿರ್ಮಾಣ ಸಾಮಗ್ರಿಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವುದರಿಂದ ನಿರ್ಮಾಣ ವೆಚ್ಚವು ಶೇಕಡಾ 3-5 ರಷ್ಟು ಕಡಿಮೆಯಾಗುತ್ತದೆ ಎಂದು ರಿಯಲ್‌ ಎಸ್ಟೇಟ್ ತಜ್ಞರು ಹೇಳಿದ್ದಾರೆ. ಇದು ಕಟ್ಟಡ ನಿರ್ಮಾಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು ಒಟ್ಟಾರೆ ನಿರ್ಮಾಣ ಕ್ಷೇತ್ರಕ್ಕೆ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+