Property: ಸೆಟ್‌ ಬ್ಯಾಕ್ ಬಿಡದೆ ನಿರ್ಮಿಸುತ್ತಿರುವ ಕಟ್ಟಡಕ್ಕೆ ನೋಟೀಸ್ ನೀಡಿ: ಮಹೇಶ್ವರ್ ರಾವ್

ಬೆಂಗಳೂರು: ದೊಮ್ಮಲೂರು ಬಳಿ ಸೆಟ್‌ಬ್ಯಾಕ್ ಬಿಡದೆ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ನೋಟೀಸ್ ಜಾರಿಗೊಳಿಸಿ, ತೆರವು ಕಾರ್ಯಾಚರಣೆ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ದೊಮ್ಮಲೂರು ಬಳಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆ, ಕಟ್ಟಡದ ನಾಲ್ಕೂ ಬದಿಗಳಲ್ಲಿ ಸೆಟ್‌ ಬ್ಯಾಕ್ ಬಿಡದೆ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಕಟ್ಟಡ ಮಾಲೀಕರಿಗೆ ಕೂಡಲೇ ನೋಟೀಸ್ ಜಾರಿಗೊಳಿಸಿ, ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Property Maheshwar Rao Said That Notice to Buildings Constructed Without Leaving Mandatory Setback

ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಚನೆ

ಇದೇ ಸ್ಥಳದಲ್ಲಿ ಸೆಟ್‌ ಬ್ಯಾಕ್ ಇಲ್ಲದೆ ವಾಣಿಜ್ಯ ಕಟ್ಟಡ ನಿರ್ಮಿಸಿರುವುದನ್ನು ಗಮನಿಸಿ, ಸದರಿ ಕಟ್ಟಡಕ್ಕೆ ನೀಡಿರುವ ವಿದ್ಯುತ್ ಸಂಪರ್ಕವನ್ನು ಕೂಡಲೇ ಕಡಿತಗೊಳಿಸುವಂತೆ ಸೂಚಿಸಿದರು.

ದೊಮ್ಮಲೂರು ಮುಖ್ಯ ರಸ್ತೆಯ ಬದಿಯಲ್ಲಿ ಪಾದಚಾರಿ ಮಾರ್ಗ ಸಾಕಷ್ಟು ವಿಸ್ತಾರವಾಗಿದ್ದು, ಸದರಿ ಜಾಗದಲ್ಲಿ ವೆಂಡಿಂಗ್‌ ಜೋನ್ ಅಥವಾ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದೇ ಸ್ಥಳದಲ್ಲಿ ಪಾದಚಾರಿ ಮಾರ್ಗದಲ್ಲಿರುವ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಗೋಡೆಗಳನ್ನು ತೆರವುಗೊಳಿಸಿ, ಸುಗಮ ಪಾದಚಾರಿ ಮಾರ್ಗ ನಿರ್ಮಿಸುವಂತೆ ನಿರ್ದೇಶನ ನೀಡಿದರು.

ಸದರಿ ರಸ್ತೆಗೆ ಡಾಂಬರೀಕರಣ ಕಾರ್ಯ

ದೊಮ್ಮಲೂರು ಜಂಕ್ಷನ್‌ ಅನ್ನು ಅಭಿವೃದ್ಧಿಪಡಿಸುವ ಕಾರ್ಯ ಕೈಗೊಳ್ಳಬೇಕು. ಜೊತೆಗೆ, ರಸ್ತೆ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಸಾಯಿಬಾಬಾ ಟೆಂಪಲ್ ರಸ್ತೆ ಹದಗೆಟ್ಟಿದ್ದು, ಸದರಿ ರಸ್ತೆಗೆ ಡಾಂಬರೀಕರಣ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.

ದೊಮ್ಮಲೂರು ಭಾಗದ ರಸ್ತೆಗಳಲ್ಲಿ ಜಲಮಂಡಳಿ ವತಿಯಿಂದ ಕೈಗೊಂಡಿರುವ ಸ್ಯಾನಿಟರಿ ಲೈನ್ ಕಾಮಗಾರಿ ಪೂರ್ಣಗೊಂಡಿದ್ದರೂ ರಸ್ತೆ ಪುನಶ್ಚೇತನ ಕಾರ್ಯ ಕೈಗೊಳ್ಳದಿರುವುದನ್ನು ಗಮನಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ರಸ್ತೆ ದುರಸ್ತಿ ಹಾಗೂ ಪುನಶ್ಚೇತನ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು. ರಸ್ತೆಯ ಮೇಲೆ ಬೀಳುವ ಮಳೆ ನೀರು ಚರಂಡಿಗೆ ಸರಾಗವಾಗಿ ಹರಿದುಹೋಗುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆಸ್ಪತ್ರೆಗೆ ಕ್ಯಾಮೆರಾ ಅಳವಡಿಸಲು ಆಯುಕ್ತರ ಸೂಚನೆ

ಕೋಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ಬಯೋಮೆಡಿಕಲ್ ತ್ಯಾಜ್ಯಕ್ಕೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಆಸ್ಪತ್ರೆಯ ಭದ್ರತೆಯ ದೃಷ್ಟಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಹಾಗೂ ಆಸ್ಪತ್ರೆಗೆ ಅಗತ್ಯ ಔಷಧಿಗಳನ್ನು ಪೂರೈಕೆ ಮಾಡಲು ಅರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

Property: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ ಶೇ. 80ರಷ್ಟು ಪೂರ್ಣಗೊಂಡಿದ್ದು, ಬಾಕ್ಸ್ ಪುಶಿಂಗ್ ಕಾರ್ಯ ಕೈಗೊಳ್ಳಬೇಕಿದೆ. ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನವೆಂಬರ್ ಅಂತ್ಯದೊಳಗೆ ಕೆಳಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

Property: ಮರದ ರೆಂಬೆ ಕೊಂಬೆ ತೆರವುಗೊಳಿಸಲು ಸೂಚನೆ

ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ಮಾತನಾಡಿ ಮಳೆ- ಗಾಳಿಗೆ ಬಿದ್ದಿರುವ ರೆಂಬೆ ಕೊಂಬೆಗಳನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದರು. ಹಾಗೂ ಶೋಲ್ಡರ್ ಡ್ರೈನ್ ಗಳನ್ನು ಸ್ವಚ್ಛವಾಗಿಡಲು ನಿರ್ದೇಶಣಾ ನೀಡಿದರು.

ಈ ವೇಳೆ ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಿ. ಜಗದೀಶ್, ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟಾಚಲಪತಿ, ಮುಖ್ಯ ಅಭಿಯಂತರರಾದ ಹೇಮಲತಾ, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+