Property : ಖಾಲಿ ನಿವೇಶನ ಸ್ವಚ್ಛಗೊಳಿಸದಿದ್ದರೆ ಬೀಳುತ್ತೆ ದಂಡ: 37 ಮಾಲೀಕರಿಗೆ ಪಾಲಿಕೆ ನೋಟಿಸ್‌

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ ಅನೈರ್ಮಲ್ಯದಿಂದ ಕೂಡಿರುವ ಖಾಲಿ ನಿವೇಶನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ 37 ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರ ಮಾರ್ಗದರ್ಶನದಲ್ಲಿ, ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶನಗಳನ್ನು ಸ್ವಚ್ಛ ಹಾಗೂ ಆರೋಗ್ಯಕರ ಸ್ಥಿತಿಯಲ್ಲಿ ನಿರ್ವಹಿಸುವದಕ್ಕೆ ಸಂಬಂಧಿಸಿದಂತೆ, ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು, ಖಾಲಿ ನಿವೇಶನದಾರರಿಗೆ ಇಂದು ನೋಟಿಸ್ ಜಾರಿ ಮಾಡಲಾಗಿದೆ.

Property Owners Notices Issued to 37 Vacant Site Owners 24-Hour Deadline to Clean the Sites

ಘನತ್ಯಾಜ್ಯ ನಿರ್ವಹಣಾ ಉಪ-ನಿಯಮಗಳು, 2020ರ ಉಪ-ನಿಯಮ 18(1)(b) ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ ಸೆಕ್ಷನ್ 274(1), 285(2) ಮತ್ತು 290ರ ಅನ್ವಯ, ಖಾಲಿ ನಿವೇಶನಗಳಲ್ಲಿ ಸಂಗ್ರಹವಾಗಿರುವ ಕಸ, ಕಳೆಗಿಡಗಳು ಹಾಗೂ ನಿರ್ಮಾಣ ತ್ಯಾಜ್ಯವನ್ನು 24 ಗಂಟೆಯೊಳಗಾಗಿ ತೆರವುಗೊಳಿಸಿ, ನಿಗದಿಪಡಿಸಿದ ಸ್ಥಳದಲ್ಲಿ ಸೂಕ್ತವಾಗಿ ವಿಲೇವಾರಿ ಮಾಡುವಂತೆ ಆಸ್ತಿ ಮಾಲೀಕರಿಗೆ ಸೂಚಿಸಲಾಗಿದೆ.

ನೋಟಿಸ್ ನೀಡಿರುವ 37 ನಿವೇಶನಗಳ ಮಾಲೀಕರು ನಿಗದಿತ 24 ಗಂಟೆಗಳ ಅವಧಿಯಲ್ಲಿ ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಬೇಕು. ಮಾಲೀಕರು ಸ್ವತಃ ನಿವೇಶನವನ್ನು ಸ್ವಚ್ಛಗೊಳಿಸಿದಲ್ಲಿ, ಯಾವುದೇ ಮುಂದಿನ ಕ್ರಮ ಅಗತ್ಯವಿರುವುದಿಲ್ಲ.

24 ಗಂಟೆಯೊಳಗೆ ಸ್ವಚ್ಛಗೊಳಿಸದಿದ್ದಲ್ಲಿ ತೆರವು

ನಿಗದಿತ ಅವಧಿಯೊಳಗೆ ಸಂಬಂಧಿಸಿದ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸದಿದ್ದಲ್ಲಿ, ಬೆಂಗಳೂರು ಉತ್ತರ ನಗರ ಪಾಲಿಕೆಯ ವತಿಯಿಂದಲೇ ಅಗತ್ಯ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಕಸ, ಕಳೆಗಿಡಗಳು ಹಾಗೂ ನಿರ್ಮಾಣ ತ್ಯಾಜ್ಯವನ್ನು ಪಾಲಿಕೆಯ ವತಿಯಿಂದ ತೆರವುಗೊಳಿಸಿ, ನಿವೇಶನವನ್ನು ಸ್ವಚ್ಛಗೊಳಿಸಲಾಗುವುದು. ಈ ಕಾರ್ಯಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಿಸಿದ ಆಸ್ತಿ ಮಾಲೀಕರ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುವುದು. ಈ ಕ್ರಮವು ಖಾಲಿ ನಿವೇಶನಗಳನ್ನು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಅನೈರ್ಮಲ್ಯದ ತಾಣಗಳಾಗಿ ಪರಿವರ್ತನೆಯಾಗುವುದನ್ನು ತಡೆಯುವ ಉದ್ದೇಶವನ್ನು ಹೊಂದಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ, ಆರೋಗ್ಯಕರ ಹಾಗೂ ಸುಸ್ಥಿರ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಖಾಲಿ ನಿವೇಶನಗಳ ಮಾಲೀಕರು ಪಾಲಿಕೆಯೊಂದಿಗೆ ಸಹಕರಿಸಿ, ತಮ್ಮ ನಿವೇಶನಗಳನ್ನು ನಿಯಮಿತವಾಗಿ ಸ್ವಚ್ಛವಾಗಿ ಹಾಗೂ ಕಸಮುಕ್ತವಾಗಿ ನಿರ್ವಹಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+