ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್‌ಲೈನ್ ಆಸ್ತಿ ನೋಂದಣಿಗಾಗಿ 'ಕಾವೇರಿ': ಏನೇನು ಲಾಭ?

|
Google Oneindia Kannada News

ಬೆಂಗಳೂರು, ನವೆಂಬರ್ 16: ಇನ್ನುಮುಂದೆ ಆನ್‌ಲೈನ್‌ ಮೂಲಕವೇ ಆಸ್ತಿಯನ್ನು ನೋಂದಾಯಿಸಬಹುದಾಗಿದೆ. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಈ ಆನ್‌ಲೈನ್ ಸೇವೆಗಳಿಗೆ ಶುಕ್ರವಾರ ಚಾಲನೆ ನೀಡಿದ್ದಾರೆ.ಕಾವೇರಿ ಆನ್‌ಲೈನ್ ಸೇವೆಗಳ ಜಾಲದಲ್ಲಿ ಆಸ್ತಿ ನೋಂದಣಿ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ಸೇವೆಗಳೂ ಕೂಡ ಲಭ್ಯವಿರಲಿದೆ.

ಆಸ್ತಿ ನೋಂದಣಿ ಇನ್ನು 'ಕಾವೇರಿ' ಮೂಲಕ ಆನ್‌ಲೈನ್‌ ನಲ್ಲೇ ಸಾಧ್ಯ ಆಸ್ತಿ ನೋಂದಣಿ ಇನ್ನು 'ಕಾವೇರಿ' ಮೂಲಕ ಆನ್‌ಲೈನ್‌ ನಲ್ಲೇ ಸಾಧ್ಯ

ಜನರಿಗೆ ಅವರಿರುವ ಜಾಗದಲ್ಲೇ ಸೇವೆ ಲಭ್ಯವಾಗಲಿದೆ. ಜನರು ತಂತ್ರಜ್ಞಾನ ಆಧರಿಸಿ ಈ ಸೇವೆಗಳ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಆಸ್ತಿ ತೆರಿಗೆಗಳನ್ನು ಕಚೇರಿಗಳಿಗೆ ತೆರಳಿ ಕಟ್ಟಬೇಕಿಲ್ಲ, ಎಲ್ಲಾ ರೀತಿಯ ಮಾಹಿತಿಗಳನ್ನು ಕುಳಿತಲ್ಲಿಂದಲೇ ಪಡೆಯಬಹುದು ಹಾಗೂ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.

ಆಸ್ತಿ ತೆರಿಗೆ ಮೋಸ: ಇಸ್ರೋಗೆ ಮೊರೆ ಹೋದ ಬಿಬಿಎಂಪಿಆಸ್ತಿ ತೆರಿಗೆ ಮೋಸ: ಇಸ್ರೋಗೆ ಮೊರೆ ಹೋದ ಬಿಬಿಎಂಪಿ

ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಸ್ಥಿರಾಸ್ತಿಗಳ ವ್ಯವಹಾರಗಳಿಗೆ ಸಂಬಂಧಿಸಿದಂತೆ ಆಸ್ತಿಗಳ ಹಸ್ತಾಂತರ, ಅಡಮಾನ, ಭೋಗ್ಯ ಮತ್ತು ಅಧಿಕಾರ ಪತ್ರಗಳನ್ನು ನೋಂದಣಿ ಮಾಡುವ ಜವಬ್ದಾರಿ ಹೊಂದಿರುತ್ತದೆ. ನೋಂದಾಯಿಸಿದ ದಾಖಲೆಗಳ ಭದ್ರತೆಯನ್ನು ಕಾಪಾಡಿಕೊಂಡು ಅವುಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಸಂರಕ್ಷಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿದೆ.

ಸ್ಥಿರಾಸ್ತಿ ಋಣಭಾರ ಪ್ರಮಾಣ ಪತ್ರ

ಸ್ಥಿರಾಸ್ತಿ ಋಣಭಾರ ಪ್ರಮಾಣ ಪತ್ರ

ಸ್ಥಿರಾಸ್ತಿಗಳ ಋಣಭಾರ ಪ್ರಮಾಣ ಪತ್ರ ಮತ್ತು ನೋಂದಾಯಿತ ದಸ್ತಾವೇಜುಗಳ ದೃಢೀಕೃತ ನಕಲು ಪ್ರತಿಗಳನ್ನು ಆನ್ಲೈನ್ ಮುಖಾಂತರ ಪಡೆಯಬಹುದಾಗಿರುತ್ತದೆ. ಒಂದು ವೇಳೆ ನಿರ್ದಿಷ್ಟ ಆಸ್ತಿಗಳ ಕುರಿತು ಋಣಭಾರಗಳನ್ನು ಪರಿಶೀಲಿಸಬೇಕಾದಲ್ಲಿ ಆಸ್ತಿಯ ವಿವರವನ್ನು ನೀಡಿ ನೈಜ ಸಮಯದಲ್ಲಿ ವಿವರಗಳನ್ನು ಪಡೆಯಬಹುದಾಗಿರುತ್ತದೆ. ಡಿಜಿಟಲ್ ಸಹಿ ಮಾಡಿದ ಋಣಭಾರ ಪ್ರಮಾಣ ಪತ್ರಗಳನ್ನು ಸಾರ್ವಜನಿಕರು ಆನ್ಲೈನ್ನ ಮೂಲಕ ಸೂಕ್ತ ಶುಲ್ಕವನ್ನು ಪಾವತಿಸುವ ಮೂಲಕ ಪಡೆಯಬಹುದಾಗಿರುತ್ತದೆ.

ಶುಲ್ಕವನ್ನೂ ಆನ್‌ಲೈನ್‌ ಮೂಲಕ ಪಾವತಿಸಬಹುದು

ಶುಲ್ಕವನ್ನೂ ಆನ್‌ಲೈನ್‌ ಮೂಲಕ ಪಾವತಿಸಬಹುದು

ನೋಂದಾಯಿಸಿದ ದಸ್ತಾವೇಜಿನ ದೃಢೀಕೃತ ನಕಲನ್ನು ಪಡೆಯಲು ಸಾರ್ವಜನಿಕರು ಆನ್ಲೈನ್ನಲ್ಲಿ ದಸ್ತಾವೇಜು ನೋಂದಾಯಿಸಿದ ಉಪನೋಂದಣಿ ಕಛೇರಿಯ ಹೆಸರನ್ನು ಆಯ್ಕೆ ಮಾಡಿ ದಸ್ತಾವೇಜಿನ ಸಂಖ್ಯೆ ನಮೂದಿಸಿ ಸೂಕ್ತ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ ಪಡೆಯಬಹುದಾಗಿರುತ್ತದೆ.

ಸ್ಥಿರಾಸ್ತಿಗಳ ಮೌಲ್ಯ ಮತ್ತು ಮುದ್ರಾಂಕ ಶುಲ್ಕಗಳ ಲೆಕ್ಕ ಹಾಕುವಿಕೆ

ಸ್ಥಿರಾಸ್ತಿಗಳ ಮೌಲ್ಯ ಮತ್ತು ಮುದ್ರಾಂಕ ಶುಲ್ಕಗಳ ಲೆಕ್ಕ ಹಾಕುವಿಕೆ

ಸಾರ್ವಜನಿಕರು ತಮ್ಮ ಆಸ್ತಿಯ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಿ, ಆಸ್ತಿಯ ಮಾರ್ಗಸೂಚಿ ಮೌಲ್ಯವನ್ನು ಸ್ವತಃ ಲೆಕ್ಕ ಮಾಡಬಹುದು. ಹಾಗೂ ಪಾವತಿಸಬೇಕಾದ ಮುದ್ರಾಂಕ ಶುಲ್ಕವನ್ನು ಸರಳ ಮತ್ತು ಸುಲಭ ಹಂತಗಳಲ್ಲಿ ತಂತ್ರಾಂಶದಲ್ಲಿ ಲೆಕ್ಕ ಮಾಡಬಹುದಾಗಿರುತ್ತದೆ.

ಸಾರ್ವಜನಿಕರಿಂದ ನೋಂದಣಿ ಪೂರ್ವ ಡೇಟಾ ಎಂಟ್ರಿ

ಸಾರ್ವಜನಿಕರಿಂದ ನೋಂದಣಿ ಪೂರ್ವ ಡೇಟಾ ಎಂಟ್ರಿ

ಈ ಸೇವೆಯು ಸಾರ್ವಜನಿಕರಿಂದ ಉಪನೋಂದಣಿ ಕಛೇರಿಗೆ ಅನೇಕ ಬಾರಿ ಭೇಟಿ ನೀಡುವುದನ್ನು ತಪ್ಪಿಸಿ ಆನ್ಲೈನ್ ಮೂಲಕ ದಸ್ತಾವೇಜನ್ನು ನೋಂದಣಿಗೆ ಸಲ್ಲಿಸುವ ಅವಕಾಶ ಕಲ್ಪಿಸುತ್ತದೆ. ಸಾರ್ವಜನಿಕರು ನೋಂದಾಯಿಸಬೇಕಾದ ಆಸ್ತಿಯ ಎಲ್ಲಾ ವಿವರಗಳನ್ನು ನೋಂದಣಿ ಪೂರ್ವದಲ್ಲಿ ಆನ್ಲೈನ್ ಮೂಲಕ ನಮೂದಿಸಿಕೊಂಡು, ಮಾಹಿತಿಗಳನ್ನು ವೀಕ್ಷಿಸಿದ ನಂತರ ಅವಶ್ಯವಿದ್ದಲ್ಲಿ ಸರಿಪಡಿಸಿ ಸಂಬಂಧಪಟ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ನಲ್ಲಿ ನೋಂದಣಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ನಿಗದಿಪಡಿಸಿದ ಆಸ್ತಿಯ ಮಾರ್ಗಸೂಚಿ ದರಗಳನ್ನು ತಂತ್ರಾಂಶದಲ್ಲಿ ಪಡೆದು, ದಸ್ತಾವೇಜಿಗೆ ಸಂಬಂಧಿಸಿದ ಆಸ್ತಿಯ ಮಾರುಕಟ್ಟೆ ಮೌಲ್ಯವನ್ನು ನಿರ್ಧರಿಸಿಕೊಳ್ಳಬಹುದು. ನಂತರ ನಿರ್ಧರಿಸಿದ ಮಾರುಕಟ್ಟೆ ಮೌಲ್ಯದ ಮಂಜೂರಾತಿಗಾಗಿ ಅರ್ಜಿಯನ್ನು ಉಪನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು.

ದಸ್ತಾವೇಜಿನ ನೋಂದಣಿಗೆ ಮುಂಗಡ ಕಾಲ ನಿಗದಿಪಡಿಸುವಿಕೆ ( Appointment Booking)

ದಸ್ತಾವೇಜಿನ ನೋಂದಣಿಗೆ ಮುಂಗಡ ಕಾಲ ನಿಗದಿಪಡಿಸುವಿಕೆ ( Appointment Booking)

ಉಪನೋಂದಣಾಧಿಕಾರಿಗಳು ಸಾರ್ವಜನಿಕರಿಂದ ಆನ್ಲೈನ್ ಮೂಲಕ ಅರ್ಜಿ ಮತ್ತು ಮೌಲ್ಯವನ್ನು ಮಾನ್ಯಗೊಳಿಸಿದ ನಂತರ ದಸ್ತಾವೇಜಿಗೆ ತಗಲುವ ಶುಲ್ಕಗಳನ್ನು ಸಾರ್ವಜನಿಕರು ಪಾವತಿಸಲು ಸಿದ್ಧರಿದ್ದಲ್ಲಿ ಆನ್‌ಲೈನ್ ಮೂಲಕ ಪಾವತಿಸಿ, ಅವಕಾಶವಿದ್ದ ಮುಂದಿನ ದಿನಾಂಕಗಳಂದು ನೋಂದಣಿ ಪ್ರಕ್ರಿಯೆಗಾಗಿ ಮುಂಗಡವಾಗಿ ಕಾಲ ನಿಗದಿಪಡಿಸಿಕೊಳ್ಳಬಹುದಾಗಿರುತ್ತದೆ.

ರಾಜ್ಯದ ಎಲ್ಲಾ 250 ಉಪನೋಂದಣಿ ಕಛೇರಿಗಳ ವಿಳಾಸದ ಮಾಹಿತಿಯು ಆನ್ಲೈನ್ ಪೋರ್ಟಲ್ನಲ್ಲಿ ಲಭ್ಯವಿದ್ದು, ಸಂಬಂಧಿಸಿದ ಕಾರ್ಯ ವ್ಯಾಪ್ತಿಯ ಉಪನೋಂದಣಿ ಕಛೇರಿಯಲ್ಲಿ ವಿವರವನ್ನು ಸಾರ್ವಜನಿಕರು ತಂತ್ರಾಂಶದಲ್ಲಿ ಪಡೆದುಕೊಳ್ಳಬಹುದಾಗಿರುತ್ತದೆ.

ವಿವಾಹ ನೋಂದಣಿ ಕಛೇರಿಯ ಗುರುತಿಸುವಿಕೆ

ವಿವಾಹ ನೋಂದಣಿ ಕಛೇರಿಯ ಗುರುತಿಸುವಿಕೆ

ವಧು ಮತ್ತು ವರನ ವಿಳಾಸ ಹಾಗೂ ವಿವಾಹ ನೆರವೇರಿದ ಸ್ಥಳ ಆಧಾರಿಸಿ ವಿವಾಹವನ್ನು ನೋಂದಾಯಿಸಿಕೊಳ್ಳಬೇಕಾದ ಕಛೇರಿ ವಿವರಗಳನ್ನು ದೃಢಪಡಿಸಿಕೊಳ್ಳಬಹುದು. ವಿವಾಹ ನೋಂದಣಿ ಮಾಡಿಕೊಳ್ಳಲು ಆಯಾ ಕಾರ್ಯ ವ್ಯಾಪ್ತಿಯ ಕಛೇರಿಗಳ ವಿವರವನ್ನು ಆನ್ಲೈನ್ ಪೋರ್ಟಲ್ನಿಂದ ಪಡೆಯಬಹುದಾಗಿರುತ್ತದೆ KACOMP ಕಾಯ್ದೆ ಅಡಿಯಲ್ಲಿ ಕೃಷಿ ಸಾಲಗಳಿಗೆ ಸಂಬಂಧಿಸಿದ ಡಿಕ್ಲರೇಷನ್ ಮತ್ತು ಸಾಲ ತೀರುವಳಿ ಪತ್ರಗಳ ಫೈಲಿಂಗ್ ಮಾಡುವಿಕೆ: ರೈತರಿಗೆ ಕೃಷಿ ಸಾಲ ನೀಡುವಸಂದರ್ಭದಲ್ಲಿ ಕಾಯ್ದೆ ಅಡಿಯಲ್ಲಿ ಪಡೆಯುವ ಡಿಕ್ಲರೇಷನ್ ಮತ್ತು ಸಾಲತೀರುವಳಿ ಪತ್ರಗಳನ್ನು ಆನ್ಲೈನ್ ಮೂಲಕ ಫೈಲಿಂಗ್ ಮಾಡುವ ಸೌಲಭ್ಯವನ್ನು ಬ್ಯಾಂಕುಗಳ ಮತ್ತು ಇತರೆ ಹಣಕಾಸು ಸಂಸ್ಥೆಗಳಿಗೆ ಒದಗಿಸಲಾಗಿದೆ.

ಮೌಲ್ಯ ಮೊಬೈಲ್ ಅಪ್ಲಿಕೇಷನ್

ಮೌಲ್ಯ ಮೊಬೈಲ್ ಅಪ್ಲಿಕೇಷನ್

ಸಾರ್ವಜನಿಕರು ಯಾವುದೇ ಸ್ಥಿರಾಸ್ತಿಯ ಮಾರ್ಗಸೂಚಿ ಮೌಲ್ಯ ತಿಳಿಯಲು ಅನುಕೂಲವಾಗುವಂತೆ, ಮೌಲ್ಯ ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ಆನ್ಲೈನ್ ಇ-ಸ್ಟಾಂಪ್ ಮುದ್ರಾಂಕ ಕಾಗದ

ಆನ್ಲೈನ್ ಇ-ಸ್ಟಾಂಪ್ ಮುದ್ರಾಂಕ ಕಾಗದ

ಸಾರ್ವಜನಿಕರು ತಾವು ಮಾಡಿಕೊಳ್ಳುವ ಕರಾರು ಪತ್ರ ಮತ್ತು ಪ್ರಮಾಣ ಪತ್ರಗಳಿಗೆ ಮುದ್ರಾಂಕ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಇ-ಸ್ಟಾಂಪ್ ಕಾಗದವನ್ನು ತಮ್ಮ ಮನೆಯಿಂದಲೇ ಪ್ರಿಂಟ್ ಓಟ್ ತೆಗೆದುಕೊಳ್ಳುವ ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಲಿ. (SHCIL) ರವರ ಸಹಯೋಗದೊಂದಿಗೆ ಕಲ್ಪಿಸಲಾಗಿದೆ.

English summary
Property registration online to preserve transparency and to curb inreality, Department of revenue has installed KAVERI website which will provide services regarding property registration without hasstle.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X