Property Sale: ಬೆಂಗಳೂರು ದಕ್ಷಿಣ ನಗರ ಪಾಲಿಕೆ: 42 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳ ಹರಾಜು
Property Sale: ಬೆಂಗಳೂರಿನ ವಿವಿಧ ಪ್ರದೇಶದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಸುದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಮುಂದಾಗಿವೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ.ಎನ್ ರಮೇಶ್ ಅವರು ಮಹತ್ವದ ಅಪ್ಡೇಟ್ಸ್ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸರ್ಕಾರದ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನಾಗಿ ಪುನರ್ ರಚಿಸಿ, ಈ ಪ್ರಾಧಿಕಾರದ ಅಡಿಯಲ್ಲಿ ಐದು ಪ್ರತ್ಯೇಕ ಬೆಂಗಳೂರು ನಗರ ಪಾಲಿಕೆಗಳನ್ನಾಗಿ ರಚಿಸಲಾಗಿದೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ವತ್ತುಗಳಿಂದ ಸ್ವೀಕರಿಸಲಾಗುವ ಆಸ್ತಿತೆರಿಗೆಯನ್ನು ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಥವಾ ನಿರ್ವಹಿಸಲು ಉಪಯೋಗಿಸಲಾಗುತ್ತದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025 ರ ಅಡಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳು ಪ್ರತಿಯೊಂದು ಆರ್ಥಿಕ ಸಾಲಿನಲ್ಲಿ ಆಸ್ತಿತೆರಿಗೆ ಪಾವತಿ ಮಾಡಬೇಕಾಗಿರುತ್ತದೆ. ಆಸ್ತಿತೆರಿಗೆ ಪಾವತಿಸದ ಪ್ರಕರಣಗಳಲ್ಲಿ ಆಸ್ತಿತೆರಿಗೆ ವಸೂಲಿ ಮಾಡುವ ಕಾರ್ಯವಿಧಾನವನ್ನು ಆಸ್ತಿತೆರಿಗೆ ನಿರ್ಧರಣೆ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು 2024 ರ ಅಡಿಯಲ್ಲಿ ಅಧಿಸೂಚಿಸಲಾಗಿತ್ತು.
ಇನ್ನು ಈ ಕಾಯ್ದೆ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿತೆರಿಗೆ ಸುಸ್ತಿದಾರರಿಗೆ ಕಾರಣಕೇಳಿ ಪತ್ರ, ಆಸ್ತಿತೆರಿಗೆ ಬೇಡಿಕೆ ಪತ್ರಜಾರಿ ಮಾಡಲಾಗಿದ್ದು, ಸಾಕಷ್ಟು ಕಾಲಾವಕಾಶವನ್ನು ನೀಡಲಾದ ನಂತರದಲ್ಲೂ ಬೇಬಾಕಿ ಉಳಿಸಿಕೊಂಡ ಪ್ರಕರಣಗಳ ಮಾಲೀಕರಿಗೆ ನಿಯತಕಾಲಿಕವಾಗಿ ಮೊಬೈಲ್ ಸಂದೇಶಗಳ ಮೂಲಕ ತಮ್ಮ ಸ್ವತ್ತಿನ ಆಸ್ತಿತೆರಿಗೆಯನ್ನು ಪಾವತಿಸಲು ತಿಳಿಸಲಾಗಿತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂದುವರಿದು, ಸಾಕಷ್ಟು ಅವಕಾಶಗಳನ್ನು ನೀಡಿದ ನಂತರ ಗುರುತಿಸಲಾಗಿರುವ ಆಸ್ತಿತೆರಿಗೆಯನ್ನು ಪಾವತಿಸದ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಲಯ ವ್ಯಾಪ್ತಿಯಲ್ಲಿನ ಒಟ್ಟು 50 ಸ್ವತ್ತುಗಳನ್ನು ದಿನಾಂಕ:21.02.2026 ರಂದು ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗಿತ್ತು, ಇದರಲ್ಲಿ 06 ಬೇ-ಬಾಕಿದಾರರು ಆಸ್ತಿತೆರಿಗೆಯನ್ನು ಪಾವತಿಸಿರುತ್ತಾರೆ. ಅದೇ ರೀತಿ ದಿನಾಂಕ:13.03.2026 ರಂದು ಒಟ್ಟು 48 ಸ್ವತ್ತುಗಳನ್ನು ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗಿತ್ತು. ಇದರಲ್ಲಿ 06 ಬೇ-ಬಾಕಿದಾರರು / ಸುದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಆಸ್ತಿತೆರಿಗೆಯನ್ನು ಪಾವತಿಸಿರುತ್ತಾರೆ. ಮುಂದುವರಿದಂತೆ ಇನ್ನೂ 42 ಅತೀ ಹೆಚ್ಚು ಬೇಬಾಕಿ ಉಳಿಸಿಕೊಂಡಿರುವ ಹೆಚ್ಚುವರಿ ಬಾಕಿದಾರರ ಆಸ್ತಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ ಹಾಗೂ ನಿಯಮಗಳನ್ವಯ ಹರಾಜು ಪ್ರಕ್ರಿಯೆಗೆ (Distress Sale) ಒಳಪಡಿಸಲು ತೀರ್ಮಾನಿಸಲಾಗಿರುತ್ತದೆ.
ಮುಂದುವರೆದು, ದಿನಾಂಕ:26.03.2026 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ. 2ನೇ ಬ್ಲಾಕ್ ಜಯನಗರ, ಬೆಂಗಳೂರು 2ನೇ ಮಹಡಿಯ ಸಂಭಾಗಣದಲ್ಲಿ ವಲಯ ಜಂಟಿ ಆಯುಕ್ತರು(ಜಯನಗರ ವಲಯ-1) ರವರ ಅಧ್ಯಕ್ಷತೆಯಲ್ಲಿ 42 ಆಸ್ತಿತೆರಿಗೆ ಸುಸ್ತಿದಾರರೆಂದು ಗುರುತಿಸಲಾಗಿರುವ ಸ್ವತ್ತುಗಳಿಂದ ಹರಾಜಿನ ಮೂಲಕ ಬೇಬಾಕಿ ಆಸ್ತಿತೆರಿಗೆ ವಸೂಲಾತಿ ಮಾಡಲಾಗುವುದು.
ಅಂತಹ ಸ್ವತ್ತುಗಳ ಮಾಹಿತಿಯನ್ನು ಅದೇ ಕಟ್ಟಡದಲ್ಲಿನ ವಲಯ ಜಂಟಿ ಆಯುಕ್ತರು (ಜಯನಗರ ವಲಯ-1) ಕಚೇರಿಯ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯವಾಗಿ ಹರಾಜು ಪ್ರಕ್ರಿಯೆಯ ಮುನ್ನ ಪಟ್ಟಿಯಲ್ಲಿನ ಸ್ವತ್ತಿಗೆ ಸಂಪೂರ್ಣ ಆಸ್ತಿತೆರಿಗೆ ಪಾವತಿಸಿದಲ್ಲಿ ಅಂತಹ ಆಸ್ತಿಗಳನ್ನು ಹರಾಜು ಪ್ರಕ್ರಿಯೆಯಿಂದ ಕೈಬಿಡಲಾಗುವುದು ಎಂದು ಪಾಲಿಕೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Census 2027: ಬೆಂಗಳೂರಲ್ಲಿ ಏ.1ರಿಂದ ಜನಗಣತಿ ಶುರು, ನಾಗರಿಕರಿಗೆ ಸ್ವಯಂ ಗಣತಿಗೆ ಅವಕಾಶ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications