Property Tax: ಹೊಸ ದಾಖಲೆ ಬರೆದ ಬಿಬಿಎಂಪಿ: ಆಸ್ತಿದಾರರಿಗೆ ಸಿಗುತ್ತಾ ಗುಡ್‌ನ್ಯೂಸ್‌ ?!

Property Tax: ಬೆಂಗಳೂರಿನ ಆಸ್ತಿದಾರರಿಂದ ಆಸ್ತಿ ತೆರಿಗೆ ಸಂಗ್ರಹ ಮಾಡುವುದರಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಹೊಸ ದಾಖಲೆಯನ್ನು ಬರೆದಿದೆ. ಕಳೆದ ಬಾರಿಗಿಂತಲೂ ಬಿಬಿಎಂಪಿಯು ಬರೋಬ್ಬರಿ 1,000 ಸಾವಿರ ಕೋಟಿ ರೂಪಾಯಿ ಹೆಚ್ಚು ಆಸ್ತಿ ತೆರಿಗೆ ಸಂಗ್ರಹ ಮಾಡಿದೆ. ಈ ರೀತಿ ಇರುವಾಗಲೇ ಬೆಂಗಳೂರಿನ ಆಸ್ತಿದಾರರಿಗೆ ಗುಡ್‌ನ್ಯೂಸ್‌ ಸಿಗಬಹುದೇ ಎನ್ನುವ ನಿರೀಕ್ಷೆಯೂ ಹೆಚ್ಚಾಗಿದೆ. ಯಾಕೆಂದರೆ ಬೆಂಗಳೂರಿನಲ್ಲಿ ಆಸ್ತಿದಾರರಿಂದ ಆಸ್ತಿ ತೆರಿಗೆ ಸಂಗ್ರಹ ಮಾಡುವುದರಲ್ಲಿ ಬೆಂಗಳೂರು ಪಾಲಿಕೆಯು ಹೊಸ ಇತಿಹಾಸವನ್ನೇ ಬರೆದಿದೆ. ಬೆಂಗಳೂರಿನ ಯಾವ ಭಾಗದಿಂದ ಎಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದೆ. ಯಾವ ಪ್ರದೇಶ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎನ್ನುವ ವಿವರ ನೋಡೋಣ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆ ಸಂಗ್ರಹದಲ್ಲಿ ಇತಿಹಾಸದಲ್ಲೇ ಹೊಸ ದಾಖಲೆಯನ್ನು ಬರೆದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳಿಂದ 2024-25ನೇ ಸಾಲಿನಲ್ಲಿ ಬರೋಬ್ಬರಿ 4,930 ಕೋಟಿ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ. 2023-24ನೇ ಸಾಲಿಗೆ ಹೋಲಿಸಿದರೆ ಈ ಪ್ರಮಾಣವು ಹಲವು ಪಟ್ಟಿ ಹೆಚ್ಚಳವಾಗಿದೆ.

Property Tax BBMP Sets New Record Good News for Property Owners

ಕಳೆದ ವರ್ಷಕ್ಕಿಂತ ಭರ್ಜರಿ ಆದಾಯ: ಇನ್ನು ಈ ಬಾರಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಕಳೆದ ವರ್ಷಕ್ಕಿಂತಲೂ ಭರ್ಜರಿ ಆದಾಯ ಸಂಗ್ರಹವಾಗಿದೆ. 2024-25 ನೇ ಸಾಲಿನಲ್ಲಿ 4,930 ಕೋಟಿ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ. ಪಾಲಿಕೆಯು ಈ ಬಾರಿ 5,000 ಕೋಟಿಗೂ ಹೆಚ್ಚು ಆಸ್ತಿ ತೆರಿಗೆ ಸಂಗ್ರಹ ಮಾಡುವ ಗುರಿಯನ್ನು ಹಾಕಿಕೊಂಡಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಆದರೆ, ಕಳೆದ ಬಾರಿಗಿಂತ ಹಲವು ಪಟ್ಟು ಹೆಚ್ಚಳವಾಗಿದೆ. 2023-24 ನೇ ಸಾಲಿನಲ್ಲಿ 3,918 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹವಾಗಿತ್ತು. ಕಳೆದ ಬಾರಿಗೆ ಹೋಲಿಕೆ ಮಾಡಿದರೆ 1,000 ಕೋಟಿಗಳಿಗೂ ಅಧಿಕ ಆಸ್ತಿ ತೆರಿಗೆ ಸಂಗ್ರಹವಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಈ ಭಾಗದಿಂದ ಭರ್ಜರಿ ಆದಾಯ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಯಲಹಂಕ, ಮಹದೇವಪುರ ಹಾಗೂ ಬೆಂಗಳೂರು ದಕ್ಷಿಣ ಭಾಗದಿಂದ ಭರ್ಜರಿ ಆದಾಯ ಬಂದಿದೆ. ಯಾವ ಭಾಗದಿಂದ ಹೆಚ್ಚು ಆಸ್ತಿ ತೆರಿಗೆ ಸಂಗ್ರಹವಾಗಿದೆಯೋ ಆ ವಲಯಗಳಿಗೆ ಬಿಬಿಎಂಪಿಯು ರ್ಯಾಂಕಿಂಗ್‌ ನೀಡಿದೆ. ಈ ಮಾನದಂಡದಲ್ಲಿ ಯಲಹಂಕ, ಮಹದೇವಪುರ ಹಾಗೂ ಬೆಂಗಳೂರು ದಕ್ಷಿಣ ವಲಗಳು ಟಾಪ್‌ 3 ಲಿಸ್ಟ್‌ನಲ್ಲಿದ್ದಾರೆ. ಬೆಂಗಳೂರು ಪಶ್ಚಿಮ, ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿಯಲ್ಲಿ ಕಡಿಮೆ ಆಸ್ತಿ ತೆರಿಗೆ ಸಂಗ್ರಹವಾಗಿದೆ.

ಆಸ್ತಿ ತೆರಿಗೆ ಸಂಗ್ರಹಕ್ಕೆ ಕಠಿಣ ಕ್ರಮ ಅನುಸರಿಸಿದ ಬಿಬಿಎಂಪಿ

ಇನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಆಸ್ತಿದಾರರಿಂದ ಆಸ್ತಿ ತೆರಿಗೆ ಸಂಗ್ರಹ ವಿಚಾರದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಂಡಿತ್ತು. ಆಸ್ತಿ ತೆರಿಗೆ ಸಂಗ್ರಹ ಮಾಡುವುದಕ್ಕೆ ಆಸ್ತಿದಾರರಿಗೆ ನೋಟಿಸ್ ನೀಡುವುದು ಹಾಗೂ ಆಸ್ತಿಗಳ ಹರಾಜು ಹಾಕುವಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. 608ಕ್ಕೂ ಹೆಚ್ಚು ಆಸ್ತಿದಾರರಿಗೆ ಆಸ್ತಿ ಹರಾಜು ಹಾಕುವಂತಹ ಕ್ರಮಗಳನ್ನು ತೆಗೆದುಕೊಂಡಿತ್ತು. ಹೀಗಾಗಿ ಕಳೆದ ಬಾರಿಗಿಂತ ಹೆಚ್ಚು ಆಸ್ತಿ ತೆರಿಗೆ ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+