Property Tax: ತೆರಿಗೆ ಕಟ್ಟಿದವರ ಹಣದಲ್ಲೇ ತೆರಿಗೆ ತಪ್ಪಿಸುವವರು ಸರ್ಕಾರಿ ಸೌಲಭ್ಯ ಪಡೆಯುತ್ತಿದ್ದಾರೆ: ಕೃಷ್ಣಬೈರೇಗೌಡ

Property Tax: ಬೆಂಗಳೂರಿನಲ್ಲಿ ಇನ್ನೂ ಶೇ50 ರಷ್ಟು ಆಸ್ತಿದಾರರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಸಿ ಮುಟ್ಟಿಸುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಕರ್ನಾಟಕ ಸರ್ಕಾರವು ಶಾಕ್ ನೀಡುವುದಕ್ಕೆ ಮುಂದಾಗಿದೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಆದಾಯ ಬರುವ ಪ್ರಮುಖ ಆದಾಯ ಮೂಲಗಳಲ್ಲಿ ಆಸ್ತಿ ತೆರಿಗೆ ಸಂಗ್ರಹವೇ ಅಗ್ರಸ್ಥಾನದಲ್ಲಿದೆ. ಮುಂದುವರಿದು ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸಂಗ್ರಹ ಕಡಿಮೆ ಆಗಿರುವುದನ್ನು ಕರ್ನಾಟಕ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.

ಇನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಂದಾಜು 35ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲ ಆಸ್ತಿದಾರರು ನಿಖರವಾದ ಸಮಯದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುತ್ತಿಲ್ಲ ಎನ್ನುವ ವಿಚಾರವನ್ನು ಇದೀಗ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸಿದ್ದು, ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಂದ ಆಸ್ತಿ ತೆರಿಗೆ ಸಂಗ್ರಹಕ್ಕೆ ಮುಂದಾಗಿದೆ. ಹಾಲಿ 35 ಲಕ್ಷ ಆಸ್ತಿಗಳಲ್ಲಿ 18 ಲಕ್ಷ ಆಸ್ತಿಗಳಿಂದ ಮಾತ್ರ ನಿಯಮಿತವಾಗಿ ಆಸ್ತಿ ತೆರಿಗೆ ಪಾವತಿಯಾಗುತ್ತಿದೆ. ಆದರೆ ಇನ್ನುಳಿದ ಆಸ್ತಿಗಳಿಂದ ಆಸ್ತಿ ತೆರಿಗೆ ಪಾವತಿ ಆಗುತ್ತಿಲ್ಲ. ಬಾಕಿ ಆಸ್ತಿದಾರರಿಂದ ಆಸ್ತಿ ತೆರಿಗೆ ಸಂಗ್ರಹ ಮಾಡುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Property Tax

ಬೆಂಗಳೂರು ನಗರದಲ್ಲಿ ಅರ್ಧದಷ್ಟು ಆಸ್ತಿದಾರರು ಆಸ್ತಿ ತೆರಿಗೆ ಪಾವತಿ ಮಾಡದೆ ಇರುವುದು ಸರಿಯಲ್ಲ. ಆಸ್ತಿ ತೆರಿಗೆ ಪಾವತಿಸುತ್ತಿರುವವರ ಹಣದಲ್ಲಿಯೇ ಆಸ್ತಿ ತೆರಿಗೆ ಪಾವತಿ ಮಾಡದೆ ಇರುವವರು ಸರ್ಕಾರದ ಸೌಲಭ್ಯಗಳನ್ನು ಅನುಭವಿಸುತ್ತಿದ್ದಾರೆ. ಆಸ್ತಿ ತೆರಿಗೆ ಪಾವತಿ ಮಾಡದ ಆಸ್ತಿದಾರರು ಆಸ್ತಿ ತೆರಿಗೆ ಪಾವತಿ ಮಾಡುವ ಬಗ್ಗೆ ಆಲೋಚನೆ ಮಾಡಬೇಕು ಎಂದು ಹೇಳಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಸರ್ಕಾರದಿಂದಲೇ ಮನೆ-ಮನೆಗೆ ಇ-ಖಾತೆಗಳನ್ನು ವಿತರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಇದೇ ಸಂದರ್ಭದಲ್ಲಿ ಹೇಳಲಾಗಿದೆ.

ಬೆಂಗಳೂರಿನ ಮಹದೇವಪುರದಲ್ಲಿ ಸುಮಾರು ಎರಡು ಲಕ್ಷ ಆಸ್ತಿಗಳಿಂದ ತೆರಿಗೆ ಪಾವತಿಯಾಗುತ್ತಿದೆ. ಆದರೆ, ಗಣತಿ ಪ್ರಕಾರ ಈ ಪ್ರದೇಶದಲ್ಲಿ ನಾಲ್ಕೂವರೆ ಲಕ್ಷಕ್ಕಿಂತ ಹೆಚ್ಚು ಆಸ್ತಿಗಳಿವೆ. ಇದೇ ರೀತಿ ನಗರದ ಹಲವು ಭಾಗಗಳಲ್ಲಿ ತೆರಿಗೆಯಿಂದ ಹೊರಗುಳಿದಿರುವ ಲಕ್ಷಾಂತರ ಅಸ್ತಿಗಳಿವೆ. ಆ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಕೆಲಸವಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ನಗರ ಪಾಲಿಕೆಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಲು ಅವರ ವ್ಯಾಪ್ತಿಯಲ್ಲಿರುವ ಎಲ್ಲ ಆಸ್ತಿಗಳಿಂದಲೂ ತೆರಿಗೆ ಪಾವತಿಯಾಗುವಂತಾಗಬೇಕು ಎಂದಿದ್ದಾರೆ.

ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಲಿದೆಯೇ

ಇನ್ನು ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಲಿದೆಯೇ ಎನ್ನುವ ಅನುಮಾನ ಶುರುವಾಗಿದೆ. ಇದೀಗ ಈ ವಿಚಾರವಾಗಿ ಮಾತನಾಡಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು, ಆಸ್ತಿ ತೆರಿಗೆ ಹೆಚ್ಚಳದ ಅಗತ್ಯ ಈಗ ಕಂಡುಬರುತ್ತಿಲ್ಲ ಎಂದಿದ್ದಾರೆ. ಆಸ್ತಿಗಳಿಂದ ತೆರಿಗೆ ಸಂಗ್ರಹವಾದರೆ ನಗರ ಪಾಲಿಕೆಗಳಿಂದ ಹಲವು ಕಾಮಗಾರಿಗಳಾಗುತ್ತವೆ ಎಂದಿದ್ದಾರೆ.

ಮುಂದುವರಿದು ಜಿಐಎಸ್, ಡೋನ್ ಹಾಗೂ ಇತರೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಸ್ಕಾಂ, ಜಲಮಂಡಳಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಆಸ್ತಿಗಳ ಮಾಹಿತಿಯನ್ನು ಏಕೀಕೃತಗೊಳಿಸಿ, ತೆರಿಗೆ ವ್ಯಾಪ್ತಿಗೆ ಒಳಪಡದಿರುವ ಆಸ್ತಿಗಳನ್ನು ಗುರುತಿಸಿ ಅವರಿಂದ ವಸೂಲಿಗೆ ಕ್ರಮವಾಗಬೇಕು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+