Property Tax: ಬೆಂಗಳೂರಿನ ಆಸ್ತಿದಾರರಿಂದ ಈ ಮಾದರಿ ಆಸ್ತಿ ತೆರಿಗೆ ಸಂಗ್ರಹ ?

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಈ ಬಾರಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ಸಾಧನೆ ಮಾಡಿದೆ. ಮುಂದಿನ ದಿನಗಳಲ್ಲಿಯೂ ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ಕ್ರಮಗಳನ್ನು ಅಳವಡಿಸಿಕೊಳ್ಳುವುದಕ್ಕೆ ಪಾಲಿಕೆ ಮುಂದಾಗಿದೆ. ಇದರಿಂದ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಸಂಕಷ್ಟ ತಪ್ಪಿದ್ದಲ್ಲ ಎಂದೇ ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಂದ ಆಸ್ತಿ ತೆರಿಗೆ ಸಂಗ್ರಹ ಮಾಡುವುದಕ್ಕೆ ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಕಠಿಣ ನಿಯಮವನ್ನು ಅನುಸರಿಸಿದ್ದರು. ಈ ಬಾರಿಯೂ ಅದೇ ಮಾದರಿಯನ್ನು ಅನುಸರಿಸುವ ಸಾಧ್ಯತೆ ದಟ್ಟವಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಈ ಬಾರಿ ಆಸ್ತಿದಾರರಿಂದ 2023-24ನೇ ಸಾಲಿಗಿಂತ 2024-25ನೇ ಸಾಲಿನಲ್ಲಿ ಹೆಚ್ಚು ತೆರಿಗೆ ಸಂಗ್ರಹ ಮಾಡಲಾಗಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ 1,000 ಕೋಟಿಗಳಿಗಿಂತ ಹೆಚ್ಚಿನ ಮೊತ್ತದ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಕಳೆದ ವರ್ಷ 2023-24 ನೇ ಸಾಲಿನಲ್ಲಿ ಬರೋಬ್ಬರಿ 3,918 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹವಾಗಿತ್ತು. ಇದಕ್ಕೆ ಬಿಬಿಎಂಪಿಯು ಕೆಲವು ಕಠಿಣ ಕ್ರಮಗಳನ್ನು ಅನುಸರಿಸಿದ್ದು ಸಹ ಕಾರಣವಾಗಿದೆ. ಅದರೊಂದಿಗೆ ಕೆಲವೊಂದು ಪ್ರಮುಖ ರಿಯಾಯಿತಿಗಳನ್ನು ಸಹ ನೀಡಲಾಗಿತ್ತು. ಇದೀಗ ಕಳೆದ ಬಾರಿಯ ಕೆಲವೊಂದು ಕ್ರಮಗಳೇ ಈ ಬಾರಿಯೂ ಮುಂದುವರಿಸುವ ಸಾಧ್ಯತೆ ಇದೆ.

Property Tax Collection From Property Owners in Bengaluru as Per Past Pattern

ಇನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ 4,930 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹವನ್ನು ಮಾಡಿತ್ತು. ಇದೀಗ 2025-26ನೇ ಹಣಕಾಸು ವರ್ಷದಲ್ಲಿ ಪಾಲಿಕೆ 6,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ತೆರಿಗೆ ಸಂಗ್ರಹವನ್ನು ಮಾಡಲಿದೆ ಎಂದು ಹೇಳಿದೆ. 2016 ರಂತೆಯೇ ಮುಂದುವರಿದ ಆಸ್ತಿ ತೆರಿಗೆ ದರಗಳನ್ನು ಹೆಚ್ಚಿಸದೆ ಇರುವುದರಿಂದ ಇದೆಲ್ಲವೂ ಸಾಧ್ಯವಾಯಿತು ಎಂದು ಹೇಳಿದೆ. ಈ ಮೂಲಕ ಕಳೆದ ಬಾರಿ ಪಾಲಿಕೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಅನುಸರಿಸಿದ ಕ್ರಮಗಳನ್ನೇ ಈಗಲೂ ಅನುಸರಿಸಲಾಗಿದೆ ಎಂದು ಹೇಳಲಾಗಿದೆ.

2024-25 ರಲ್ಲಿ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳ ಸಾಧಿಸಿದ್ದು ಈ ಕೆಳಕಂಡ ಅಂಶಗಳಿಂದ

* ಆಸ್ತಿದಾರರಿಗೆ ಒಂದು ಬಾರಿ ಪರಿಹಾರ ಯೋಜನೆ (OTS)

* ⁠ಬಾಕಿ ಮತ್ತು ಹಾಲಿ ಆಸ್ತಿ ತೆರಿಗೆ ಬಾಕಿಗಳ ಸಂಗ್ರಹ ಮಾಡುವುದಕ್ಕೆ ವ್ಯವಸ್ಥಿತ ಯೋಜನೆ ಹಾಗೂ ತಂತ್ರಜ್ಞಾನ ಬಳಕೆ.

* ಬಾಕಿ ಆಸ್ತಿ ತೆರಿಗೆಗಳನ್ನು ವಸೂಲಿ ಮಾಡಲು ಸಂಪೂರ್ಣವಾಗಿ ಪರಿಣಾಮಕಾರಿ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳು ಮತ್ತು ನಿಯಮಗಳನ್ನು ಹೊರಡಿಸಲಾಗಿತ್ತು ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Take a Poll

* ಮುಂದುವರಿದು ಬಾಕಿ ಹಾಗೂ ಹಾಲಿ ಸಾಲಿನ ಆಸ್ತಿ ತೆರಿಗೆ ವಸೂಲಿ ಮಾಡುವುದಕ್ಕೆ ಮನೆ- ಮನೆಗಳಿಗೆ ನಿರಂತರವಾಗಿ ಭೇಟಿ ನೀಡಿ ವಸೂಲಿ ಮಾಡಲಾಗಿದೆ ಎಂದು ಹೇಳಲಾಗಿದೆ. ಇದೇ ಮಾದರಿ ಈ ಬಾರಿಯೂ ಮುಂದುವರಿಯಲಿದೆ.

ಈ ಬಾರಿಯೂ ಕಠಿಣ ಕ್ರಮ: ಇನ್ನು ಕಳೆದ ಬಾರಿ ಬೆಂಗಳೂರಿನಲ್ಲಿ ಆಸ್ತಿದಾರರಿಂದ ಬಾಕಿ ಮೊತ್ತವನ್ನು ವಸೂಲಿ ಮಾಡುವುದಕ್ಕೆ ಆಸ್ತಿ ಹರಾಜು ಸೇರಿದಂತೆ ಗಂಭೀರ ಕ್ರಮಗಳನ್ನು ಅನುಸರಿಸಲಾಗಿತ್ತು. ಇದೀಗ ಅದೇ ಮಾದರಿಯನ್ನು ಮುಂದುವರಿಸುವ ಚಿಂತನೆ ಇದೆ ಎಂದು ಹೇಳಲಾಗಿದೆ. ಆದರೆ ಇದು ಸುದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಮಾತ್ರ ಅನ್ವಯವಾಗಲಿದೆ. ಉಳಿದಂತೆ ಆಸ್ತಿ ತೆರಿಗೆ ಪಾವತಿಯ ಮೇಲೆ ರಿಯಾಯಿತಿ ಕೊಡುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪಾಲಿಕೆಯು ಕಂದಾಯ ವಿಭಾಗದ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ.

ಆಸ್ತಿ ಹರಾಜು ಮಾದರಿ: ಇನ್ನು ಈ ಬಾರಿಯೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಕಠಿಣ ಕ್ರಮಗಳನ್ನು ಅನುಸರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಳೆದ ವರ್ಷ ಈ ಮಾದರಿಯಲ್ಲಿ ಪಾಲಿಕೆಗೆ ಒಳ್ಳೆಯ ಆದಾಯ ಹರಿದು ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+