Property Tax: ತೆರಿಗೆ ಕಟ್ಟದ ಸ್ವತ್ತುಗಳ ಹರಾಜಿಗೆ ಜಿಬಿಎ ಸಜ್ಜು, 101 ಆಸ್ತಿಗಳ ಮಾಲೀಕರೇ ಗಮನಿಸಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025 ರ ಅಡಿಯಲ್ಲಿ ಜಿಬಿಎ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳು ಆಸ್ತಿ ತೆರಿಗೆ ಪಾವತಿಸಬೇಕು. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 30 ಮಾಲೀಕರ ಸ್ವತ್ತು, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 71 ಸ್ವತ್ತುಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಒಟ್ಟು ಸುಮಾರು 30 ಸ್ವತ್ತುಗಳ ಆಸ್ತಿಗಳ ಹರಾಜಿಗೆ ಮುಂದಾಗಿದೆ. ಅದರ ವಿವರ ಮುಂದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸರ್ಕಾರದ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನಾಗಿ ಮಾಡಿದ್ದು, ಆ ಪ್ರಾಧಿಕಾರದ ಅಡಿಯಲ್ಲಿ ಐದು ಪ್ರತ್ಯೇಕ ಬೆಂಗಳೂರು ನಗರ ಪಾಲಿಕೆಗಳನ್ನಾಗಿ ರಚಿಸಲಾಗಿದೆ. ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹಿಸಲಾದ ಆಸ್ತಿ ತೆರಿಗೆಯನ್ನು ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಥವಾ ನಿರ್ವಹಿಸಲು ಉಪಯೋಗಿಸಲಾಗುತ್ತದೆ. ಹೀಗಾಗಿ ತಪ್ಪದೇ ಪ್ರತಿ ಆರ್ಥಿಕ ಸಾಲಿನಲ್ಲಿ ಆಸ್ತಿತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ.

ಹೀಗೆ ಕಟ್ಟುನಿಟ್ಟಿನ ಸೂಚನೆಗಳು ಇದ್ದರೂ ಸಹಿತ ಆಸ್ತಿ ತೆರಿಗೆ ಪಾವತಿಸದ ಪ್ರಕರಣಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಶಿಸ್ತು ಕ್ರಮಕ್ಕೆ ಮುಂದಾಗಿದೆ. ಆಸ್ತಿ ತೆರಿಗೆ ವಸೂಲಿ ಮಾಡುವ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಿದೆ. ಆಸ್ತಿ ತೆರಿಗೆ ನಿರ್ಧರಣೆ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು 2024 ರ ಅಡಿಯಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ. ಅದರ ಭಾಗವಾಗಿ ಹರಾಜು ಹಾಕಲು ಮುಂದಾಗಿದೆ.
ಆಸ್ತಿ ಮಾಲೀಕರಿಗೆ ಪಾಲಿಕೆ ಸೂಚನೆ
ಸದರಿ ಕಾಯ್ದೆ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳಿ ಪತ್ರ, ಆಸ್ತಿತೆರಿಗೆ ಬೇಡಿಕೆ ಪತ್ರಜಾರಿ ಮಾಡಲಾಗಿದ್ದು, ಸಾಕಷ್ಟು ಕಾಲಾವಕಾಶವನ್ನು ನೀಡಲಾದ ನಂತರದಲ್ಲೂ ಬೇಬಾಕಿ ಉಳಿಸಿಕೊಂಡ ಪ್ರಕರಣಗಳ ಮಾಲೀಕರಿಗೆ ನಿಯತಕಾಲಿಕವಾಗಿ ಮೊಬೈಲ್ ಸಂದೇಶಗಳ ಮೂಲಕ ತಮ್ಮ ಸ್ವತ್ತಿನ ಆಸ್ತಿತೆರಿಗೆಯನ್ನು ಪಾವತಿಸಲು ತಿಳಿಸಲಾಗಿರುತ್ತದೆ.
ಪಾಲಿಕೆ ವ್ಯಾಪ್ತಿಯ ಸದರಿ 30 ಸ್ವತ್ತುಗಳಿಗೆ ತೆರಿಗೆ ಪಾವತಿಸಲು ಹಲವು ಅವಕಾಶಗಳನ್ನು ನೀಡಲಾಗಿತ್ತು. ಆದರೂ ಆಸ್ತಿ ತೆರಿಗೆಯನ್ನು ಪಾವತಿಸದ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿನ ಒಟ್ಟು 30 ಸ್ವತ್ತುಗಳನ್ನು ಕಾಯ್ದೆ ಹಾಗೂ ನಿಯಮಗಳನ್ನಯ ಹರಾಜು ಪ್ರಕ್ರಿಯೆಗೆ (Distress Sale) ಒಳಪಡಿಸಲು ತೀರ್ಮಾನಿಸಲಾಗಿದೆ.
ಫೆಬ್ರವರಿ 21ರಂದು ಹರಾಜು ಪ್ರಕ್ರಿಯೆ, ಎಲ್ಲಿ?
ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಫೆಬ್ರವರಿ 21, 2026 ರಂದು ಬೊಮ್ಮನಹಳ್ಳಿ ವಲಯ ಕಛೇರಿ, 1ನೇ ಮಹಡಿ, ಬೇಗೂರು ಮುಖ್ಯರಸ್ತೆ, ಬೊಮ್ಮನಹಳ್ಳಿ ಹಾಗೂ ಪಶ್ಚಿಮ ನಗರ ಪಾಲಿಕೆಯ ಹರಾಜು ಪ್ರಕ್ರಿಯೆ 'ಜಂಟಿ ಆಯುಕ್ತರ ಕಾರ್ಯಾಲಯ, ಮಲ್ಲೇಶ್ವರಂ ವಲಯ-2, 145, 26ನೇ ಅಡ್ಡ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು ಇಲ್ಲಿನ ಸಭಾಂಗಣದಲ್ಲಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಅಂದು ಆಸ್ತಿತೆರಿಗೆ ಸುಸ್ತಿದಾರರೆಂದು ಗುರುತಿಸಲಾಗಿರುವ ಸ್ವತ್ತುಗಳಿಂದ ಹರಾಜಿನ ಮೂಲಕ ಬೇಬಾಕಿ ಆಸ್ತಿತರಿಗೆ ವಸೂಲಾತಿ ಮಾಡಲಾಗುವುದು.
ಯಾವ ಸತ್ತುಗಳು ಹರಾಜು ಪ್ರಕ್ರಿಯೆಗಳಿಗೆ ಒಳಪಡುತ್ತವೆ. ಕಟ್ಟಡಗಳ ಮಾಹಿತಿಯನ್ನು ವಲಯ ಜಂಟಿ ಆಯುಕ್ತರು (ಬೊಮ್ಮನಹಳ್ಳಿ ವಲಯ) ಕಛೇರಿಯ ಸೂಚನಾ ಫಲಕದಲ್ಲಿ ನೀಡಲಾಗಿದೆ. ಹರಾಜು ಪ್ರಕ್ರಿಯೆಯ ಮುನ್ನ ಪಟ್ಟಿಯಲ್ಲಿನ ಸ್ವತ್ತಿಗೆ ಸಂಪೂರ್ಣ ಆಸ್ತಿತೆರಿಗೆ ಪಾವತಿಸಿದಲ್ಲಿ ಅಂಥಹವರ ಸತ್ತುಗಳ ಹರಾಜಿನಿಂದ ಕೈಬಿಡಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರಕ್ಕಾಗಿ ಸಂಪರ್ಕಿಸಿ
ಸಂಬಂಧಿತ ಕಾಯ್ದೆ ಹಾಗೂ ನಿಯಮಗಳಂತೆ, ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳುವ ನೋಟಿಸ್ ಹಾಗೂ ಬೇಡಿಕೆ ಪತ್ರಗಳನ್ನು ಜಾರಿಗೊಳಿಸಲಾಗಿದೆ. ಸುಸ್ತಿದಾರರ ವಿವರಗಳನ್ನು ಪಾಲಿಕೆಯ ಅಧಿಕೃತ ಜಾಲತಾಣ https://bbmp.gov.in, ನಲ್ಲಿ ವೀಕ್ಷಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications