ಪ್ರವಾದಿಗಳು ಶಾಂತಿಯ ಧೂತರು: ಬಸವಣ್ಣ ಅವರಂತೆ ಪ್ರವಾದಿ ಕೆಲಸ ಮಾಡಿದ್ದಾರೆ ಸಿ.ಎಂ ಸಿದ್ದರಾಮಯ್ಯ

ಪ್ರವಾದಿಗಳು ಶಾಂತಿಯ ಧೂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು. ಶುಕ್ರವಾರ ಬೆಂಗಳೂರಿ ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ"ದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ. ಈ ವಿಷಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪರ - ವಿರೋಧ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ಈ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದೇನು ಎನ್ನುವ ವಿವರ ಇಲ್ಲಿದೆ.

ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು.

Prophets are messengers of peace CM Siddaramaiah

ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಭ್ರಾತೃತ್ವ ಮತ್ತು ಪರಧರ್ಮ ಸಹಿಷ್ಣುತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಗುರು ರಾಥೋಡ್ ಎನ್ನುವವರು, ನೀವು ಜಾತ್ಯಾತೀತರಾಗಿ ತಲೆಗೆ ಟೋಪಿ ಹಾಕಿಕೊಳ್ಳಬಹುದು. ಅದೇ ರೀತಿ ಬಾನು ಮುಷ್ತಾಕ್ ಮೇಡಂ ಅವರು ಜಾತ್ಯಾತೀತರಾಗಿ ಹಣೆಗೆ ಸಿಂಧೂರ ಇಟ್ಟು ದಸರಾ ಉದ್ಘಾಟನೆ ಯಾಕೆ ಮಾಡಬಾರದು ಸರ್. ಇದೇನಾ ನಿಮ್ಮ ಜಾತ್ಯತೀತವಾದಾ ಎಂದು ಪ್ರಶ್ನೆ ಮಾಡಿದ್ದಾರೆ. ಹಲವರು ಒಳ್ಳೆಯ ಮಾತು ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನು ಅರಮನೆ ಮೈದಾನದಲ್ಲಿ ನಡೆದ ಪ್ರವಾದಿ ಮೊಹಮ್ಮದ್ ಅವರ 1500 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ದಲ್ಲಿ ಧರ್ಮ ಗುರುಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಸಚಿವ ಜಮೀರ್ ಅಹಮದ್ ಖಾನ್, ಕೆಜೆ ಜಾರ್ಜ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಬಿಡಿಎ ಅಧ್ಯಕ್ಷ ಹ್ಯಾರೀಸ್ ಪಾಲ್ಗೊಂಡಿದ್ದರು.

ಬಾನು ಮುಷ್ತಾಕ್ ವಿಷಯ ಪ್ರಸ್ತಾವನೆ: ಇನ್ನು ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ವಿಚಾರ ಹಾಗೂ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಈಚೆಗೆ ಮಾತನಾಡಿದ್ದ ವಿಚಾರಗಳನ್ನು ಹಲವು ಈ ಸಂದರ್ಭದಲ್ಲಿ ಕಮೆಂಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ನಾಡ ಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಹಣೆಯಲ್ಲಿ ಕುಂಕುಮ ಹಚ್ಚಿಕೊಂಡು ಬರಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ಹೇಳಿದ್ದರು. ಬಿಜೆಪಿಯ ಆಗ್ರಹಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಿಯಾಕ್ಟ್‌ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+