ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು,ಜನವರಿ 28: 2023ರ ಒಳಗಾಗಿ ಕರ್ನಾಟಕದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ 3008 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 2404 ಪ್ರೌಢಶಾಲಾ ಶಿಕ್ಷಕರಾಗಿ, 1342 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂದೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹಂಚಿಕೊಂಡ ಮನಕಲಕುವ ಪ್ರಸಂಗ!ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹಂಚಿಕೊಂಡ ಮನಕಲಕುವ ಪ್ರಸಂಗ!

ಹಾಗೆಯೇ ಇಲಾಖೆಯ ಸಚಿವಾಲಯ, ಆಯುಕ್ತಾಲಯ ಮತ್ತು ನಿರ್ದೇಶನಾಲಯಗಳಲ್ಲಿ ಕಡತ ವಿಲೇವಾರಿ ಮಾಡುವಂತೆ ಪ್ರಸ್ತಾವನೆ ಸಿದ್ಧಪಡಿಸಿ ನೀಡುವಂತೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.

 Proposal To Recruit 20,000 Teachers By 2023 In Karnataka

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದತೆ ಶಿಕ್ಷಣ ಇಲಾಖೆ ವಿವಿಧ ಸ್ತರಗಳ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಬಳಿಕ ಸಚಿವರು ಈ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ.

English summary
It is proposed to recruit 20,000 teachers in next two years, said Karnataka Primary and Secondary Education minister S Suresh Kumar on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X