ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ ವಿರುದ್ಧ ಪ್ರತಿಭಟನೆ
ಬೆಂಗಳೂರು, ಜುಲೈ 10: ಪಕ್ಷಕ್ಕೆ ರಾಜೀನಾಮೆ ನೀಡಿರುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ವಿರುದ್ಧ ಪಕ್ಷದ ಕಾರ್ಯಕರ್ತರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ.
ಗೋಪಾಲಯ್ಯನವರು ರಾಜೀನಾಮೆ ನೀಡುವ ಮೂಲಕ ಈ ಕ್ಷೇತ್ರದ ಜನತೆಗೆ ಮತ್ತು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿಯ ಹುನ್ನಾರಕ್ಕೆ ಬೆಂಬಲವಾಗಿ ನಿಂತಿರುವ ಅವರ ನಡೆಯನ್ನು ಖಂಡಿಸುತ್ತೇವೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದಾರೆ ಬೆಂಗಳೂರು ಮಹಾನಗರ ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ.

ಇಂದು ಬೆಳಿಗ್ಗೆ 11ಕ್ಕೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಸರ್ಕಲ್ ಬಳಿ ಅಧ್ಯಕ್ಷ ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.












Click it and Unblock the Notifications