ಹಾರೋಹಳ್ಳಿ ಕಸಾಯಿಖಾನೆ ವಿರುದ್ಧ ಪ್ರತಿಭಟನೆ

ಅಕ್ಟೋಬರ್ 30ರಂದು ಹಾರೋಹಳ್ಳಿ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭ ಟನಾ ಮೆರವಣಿಗೆ ನಡೆಸಲಾಗುವುದು ಎಂದು ಕಸಾಯಿಖಾನೆ ಹೋರಾಟ ಸಮಿತಿ ಅಧ್ಯಕ್ಷ ಎಂ.ಮಲ್ಲಪ್ಪ ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಕನಕಪುರ ರಾಷ್ಟ್ರೀಯ ಹೆದ್ದಾರಿಯ ಬಳಿಯ ಕೈಗಾರಿಕಾ ಪ್ರದೇಶದ ಸುಮಾರು 40 ಎಕರೆ ಜಾಗದಲ್ಲಿ ಆಧುನಿಕ ಕಸಾಯಿಖಾನೆ ನಿರ್ಮಿಸಲು ಬಿಬಿಎಂಪಿ ಜಮೀನು ವಶಕ್ಕೆ ತೆಗೆದುಕೊಂಡಿದ್ದನ್ನು ಖಂಡಿಸಿ ಜೆಡಿಎಸ್ ಮುಖಂಡ ಪಿಜಿಆರ್ ಸಿಂಧ್ಯಾ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಬಿಬಿಎಂಪಿ ತನ್ನ ಉದ್ದೇಶಿತ ನಿರ್ಮಾಣ ಕಾರ್ಯದಿಂದ ಹಿಂದೆ ಸರಿದಿರಲಿಲ್ಲ.
ಹಾರೋಹಳ್ಳಿ ದೊಡ್ಡಗುಡಿ (ಅರುಣಾಚಲೇಶ್ವರ) ದೇವಸ್ಥಾನದಲ್ಲಿ ಕಸಾಯಿಖಾನೆ ವಿರುದ್ಧ ನಡೆಸುವ ಪ್ರತಿಭಟನೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಯಿತು.
'ಹಾರೋಹಳ್ಳಿ ವ್ಯಾಪ್ತಿಯಲ್ಲಿ 40 ಎಕರೆ ಭೂ ಪ್ರದೇಶದಲ್ಲಿ ಈ ಬೃಹತ್ ಯಾಂತ್ರೀಕೃತ ಕಸಾಯಿಖಾನೆ ತೆರೆಯಲು ಬಿ.ಬಿ.ಎಂ.ಪಿ. ತೀರ್ಮಾ ನಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಿದೆ.
ಸಂಬಂಧಪಟ್ಟವರು ಪೋಲಿಸರು ಸರ್ಪಕಾವಲಿನಲ್ಲಿ ಭೂಮಿ ಸರ್ವೇ ಕಾರ್ಯ ನಡೆಸುತ್ತಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಇದಕ್ಕೆ ಇನ್ನೂ ಪರವಾನಗಿ ನೀಡಿಲ್ಲ. ಸ್ಥಳೀಯವಾಗಿ ನಿರಾಕ್ಷೇಪಣಾ ಪತ್ರ ವನ್ನು ಪಡೆಯಲಾಗಿಲ್ಲ. ಆದರೆ ಬಿಬಿಎಂಪಿ ದುಂಡಾವರ್ತನೆಯಿಂದ ಕಸಾಯಿ ಖಾನೆ ತೆರೆಯಲು ತುದಿಗಾಲಲ್ಲಿ ನಿಂತಿದೆ ಎಂದು ಎಂ ಮಲ್ಲಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕವಾಗಿ ತೊಂದರೆಯಾಗುವ ಹಾಗೂ ಸುತ್ತಲ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ಕಸಾಯಿಖಾನೆ ನಿರ್ಮಾಣ ವನ್ನು ತಡೆಯುವುದೇ ಹೋರಾಟ ಸಮಿತಿಯ ಉದ್ದೇಶವಾಗಿದೆ. ಇದಕ್ಕೆ ಹೋಬಳಿಯ ಜನತೆ ಸೇರಿದಂತೆ ತಾಲ್ಲೂ ಕಿನ ಜನತೆ ಪಕ್ಷಾತೀತವಾಗಿ, ಜಾತ್ಯಾ ತೀತ, ಧರ್ಮಾತೀತವಾಗಿ ಬೆಂಬಲ ನೀಡಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಹಾರೋಹಳ್ಳಿಯ ಮೊದಲ ಹಂತದ ಕೈಗಾರಿಕಾ ಪ್ರದೇಶ ಸುಮಾರು 4,000 ಎಕರೆಯಿದ್ದು, ಅನೇಕ ಕೈಗಾರಿಕೆಗಳು ಆರಂಭವಾಗಿದೆ. ಸ್ಥಳೀಯರಿಗೆ ಉದ್ಯೋಗವಕಾಶಗಳು ಲಭಿಸಿದ್ದು, ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಹಾಯಕವಾಗಿದೆ.
ಸುಮಾರು 20,000 ಜನ ಸಂಖ್ಯೆಯುಳ್ಳ ಹಾರೋಹಳ್ಳಿ ಗ್ರಾಮಸ್ಥರಲ್ಲದೆ, ಬೆಂಗಳೂರಿನಿಂದ ಕೆಲಸದ ನಿಮಿತ್ತ ಇಲ್ಲಿಗೆ ಪ್ರತಿನಿತ್ಯ ಬರುವ ಸುಮಾರು 3 ರಿಂದ 4 ಸಾವಿರ ನೌಕಕರು ಕೂಡಾ ಈ ಕಸಾಯಿಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬಿ. ಕೃಷ್ಣಭಟ್ ಎಂಬುವರು ಹೈಕೋರ್ಟ್ ನಲ್ಲಿ ರಿಟ್ ಪಿಟಿಷನ್ ದಾಖಲಿಸಿ ಬೆಂಗಳೂರಿನಲ್ಲಿರುವ ಎಲ್ಲಾ ಕಸಾಯಿಖಾನೆಗಳನ್ನು ಬೆಂಗಳೂರಿನ ಹೊರವಲಯಕ್ಕೆ ಸ್ಥಳಾಂತರಿಸಲು ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಕೋರ್ಟ್, ನಗರ ಹೊರವಲಯದಲ್ಲಿ ಸ್ಥಾಪನೆ ಮಾಡುವಂತೆ ಆದೇಶ ನೀಡಿತ್ತು. ಆದರೆ, ಹಾರೋಹಳ್ಳಿಯಲ್ಲಿ ಕೈಗಾರಿಕಾ ವಲಯದಲ್ಲಿ ಕಸಾಯಿಖಾನೆ ಸ್ಥಾಪನೆ ಮಾಡಲು ಹೊರಟಿರುವುದು ಸುತ್ತಮುತ್ತಲಿನ ರೈತರು, ಪರಿಸರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹಾಗಾಗಿ ಕೈಗಾರಿಕೆಗಳ ಒಳಿವಿಗಾಗಿ ಈ ಉದ್ದೇಶಿತ ಯೋಜನೆಯನ್ನು ಕೈಬಿಡಬೇಕೆಂದು ಸಿಂಧ್ಯ ಅವರು ಕಳೆದ ಎರಡು ವರ್ಷಗಳಿಂದ ಒತ್ತಾಯಿಸುತ್ತಲೇ ಬಂದಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications