ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉ.ಕ.ದಲ್ಲಿ ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಪ್ರತಿಭಟನೆ: ಬಿಜೆಪಿಗೆ ಕೊನೆಯ ಎಚ್ಚರಿಕೆ

|
Google Oneindia Kannada News

ಬೆಂಗಳೂರು ಜುಲೈ 30: ಇಡಿ ಕರ್ನಾಟಕದಲ್ಲೆ ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಪರಿಣಾಮ ಜನ ಆರೋಗ್ಯ, ಚಿಕಿತ್ಸೆ ಸವಾಲು ಎದುರಿಸುತ್ತಿದ್ದಾರೆ. ಈವರೆಗೆ ಸಹಿಸಿಕೊಂಡಿದ್ದ ಆ ಜಿಲ್ಲೆಯ ಜನರ ಸಹನೆಯ ಕಟ್ಟೆಯೊಡೆದಿದೆ. ಹೀಗಾಗಿಯೇ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಗೆ ನಿರ್ಮಾಣಕ್ಕೆ ಆಗ್ರಹಿಸಿ ಶನಿವಾರ ಪ್ರತಿಭಟಿಸಿ ಬಿಜೆಪಿಗೆ ಕೊನೆ ಎಚ್ಚರಿಕೆಯನ್ನು ನೀಡಿದ್ದಾರೆ.

ಶನಿವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಉತ್ತರ ಕನ್ನಡ ಹಿತಾಸಕ್ತಿ ಬಳಗ, ಬೆಂಗಳೂರಿನಲ್ಲಿನ ಉತ್ತರ ಕನ್ನಡ ಸಂಘ ನೇತೃತ್ವದಲ್ಲಿ ಪಕ್ಷಬೇಧ ಮರೆತು ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಮಂದಿ ಸೇರಿದ್ದರು. ಅವರೆಲ್ಲ ಸಾಮಾಜಿಕ ಜಾತಾಣಗಳಲ್ಲಿ 'ವಿ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ ಹಾಗೂ ನೊ ಹಾಸ್ಪಿಟಲ್ ನೊ ವೋಟ್' ಎಂಬ ಹ್ಯಾಸ್ ಟ್ಯಾಗ್‌ ಹಾಕಿ ಆಕ್ರೋಶ ಹೊರ ಹಾಕಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಲೇ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಹಕ್ಕೋತ್ತಾಯ ಮಂಡಿಸಿದರು.

ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದವರೇ ಆದ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಆಸ್ಪತ್ರೆಗಾಗಿ ಹೋರಾಟ ಮಾಡುತ್ತೇವೆ ಎಂದರೆ ನಮ್ಮನ್ನು ನಾವೇ ದೂಷಿಸಿಕೊಳ್ಳಬೇಕಿದೆ. ಒಬ್ಬ ಆಯೋಗ್ಯ ಶಾಸಕ ಕೂಡ ಈ ಪ್ರತಿಭಟನೆಗೆ ಬಂದಿಲ್ಲ. ಅನಂತ್ ಕುಮಾರ್ ಹೆಗಡೆ ಯನ್ನು ಐದಾರು ಸಾರಿ ಸಂಸದರಾಗಿ ಜಿಲ್ಲೆಯ ಜನ ಗೆಲ್ಲಿಸಿದ್ದಾರೆ ಆದರೆ ಅವರಿಂದ ನಯಾ ಪೈಸೆ ಉಪಯೋಗವಾಗಿಲ್ಲ ಎಂದರು.

ನಾಯಕರು ಸಾಕಷ್ಟು ದುಡ್ಡು ಮಾಡಿಕೊಂಡಿದ್ದಾರೆ

ನಾಯಕರು ಸಾಕಷ್ಟು ದುಡ್ಡು ಮಾಡಿಕೊಂಡಿದ್ದಾರೆ

ಪದೇ ಪದೆ ರಾಜ್ಯ ಸರ್ಕಾರವನ್ನು ಬೈಯುವ ಪರಿಸ್ಥಿತಿಗೆ ಬಂದಿದೆ. ಉತ್ತರ ಕನ್ನಡದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಿದ್ದರೆ ಬೆಂಗಳೂರಿಗೆ ಉದ್ಯೋಗ ಅರಸಿ ಬರಬೇಕಾದ ಸ್ಥಿತಿಯೇ ಇರುತ್ತಿರಲಿಲ್ಲ. ನಾವ್ಯಾರು ಅವರಿಗೆ ಮತ ಹಾಕದಿದ್ದರೂ ಅವರು ಗೆಲ್ಲುತ್ತಾರೆ. ಜಿಲ್ಲೆಯ ಜನಪ್ರತಿನಿಧಿಗಳು ತುಲಾಭಾರ ಮಾಡುವಷ್ಟು ದುಡ್ಡು ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ದಪ್ಪ ಚರ್ಮದ ನಾಯಕರಿಗೆ ಕೂಗು ಕೇಳಿಸಲ್ಲ

ದಪ್ಪ ಚರ್ಮದ ನಾಯಕರಿಗೆ ಕೂಗು ಕೇಳಿಸಲ್ಲ

ಆಸ್ಪತ್ರೆ ಬಗ್ಗೆ ಕುಮಟದ ಶಾಸಕ ದಿನಕರ ಶೆಟ್ಟಿ ಅವರ ಜತೆ ಮಾತನಾಡಿದ್ದೇನೆ. ಸರ್ಕಾರಕ್ಕೆ ಆಗದೇ ಇದ್ದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಾವೇ ಆಸ್ಪತ್ರೆ ನಿರ್ಮಿಸೋಣ ಎಂದು ಕೇಳಿಕೊಂಡಿದ್ದೇವೆ. ಪಕ್ಕದ ಜಿಲ್ಲೆ ದಕ್ಷಿಣ ಕನ್ನಡದವರಿಗೂ ನಮಗೂ ಬಹಳ ವ್ಯತ್ಯಾಸವಿಲ್ಲ. ಆದರೆ ಅವರು ಯಾರ ಮೇಲೆ ಹೇಗೆ ಒತ್ತಡ ತಂದು ತಮ್ಮ ಕೆಲಸ ಮಾಡಿಸಿಕೊಳ್ಳಬೇಕು ಎಂಬುದನ್ನು ಕಲಿತಿದ್ದಾರೆ. ನಾವು ಮೃದುವಾಗಿರುವುದೇ ಜಿಲ್ಲೆ ಅಭಿವೃದ್ಧಿ ಆಗದಿರುಲು ಕಾರಣವಾಗಿದೆ. ಈ ದಪ್ಪ ಚರ್ಮದ ಬಿಜೆಪಿ ನಾಯಕರ ಕಿವಿಗೆ ಇಂಥಹ ಹೋರಾಟ ಕೇಳಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.

ಹೋರಾಟ ತೀವ್ರಗೊಳಿಸಲು ಸೂಲಿಬೆಲೆ ಕರೆ

ಹೋರಾಟ ತೀವ್ರಗೊಳಿಸಲು ಸೂಲಿಬೆಲೆ ಕರೆ

ಎಮ್ಮೆ ಚರ್ಮದ ಜನಪ್ರತಿಧಿಗಳನ್ನು ಬಡಿದೆಬ್ಬಿಸುವ ಹೋರಾಟ ಆರಂಭವಾಗಿದೆ. ಇದು ಇಲ್ಲಿಗೆ ನಿಲ್ಲಬಾರದು. ಹೋರಾಟ ಒಂದು ತಾರ್ಕಿಕ ಅಂತ್ಯಕ್ಕೆ ಹೋಗಿ ನಿಲ್ಲುವವರೆಗೂ ನಮ್ಮೆಲ್ಲರ ಕೂಗು ಕಡಿಮೆಯಾಗಬಾರದು ಎಂದು ಪ್ರತಿಭಟನಾಕಾರರಿಗೆ ಸೂಲಿಬೆಲೆ ಕರೆ ನೀಡಿದರು.

ಸೀಬರ್ಡ್ ನೌಕಾನೆಲೆ, ಕೈಗಾ ಅಣುಸ್ಥಾವರ, ರಾಷ್ಟ್ರೀಯ ಹೆದ್ದಾರಿ, ಜಲವಿದ್ಯುತ್ ಯೋಜನೆಗಳಿಗಾಗಿ ತನ್ನ ಒಡಲನ್ನು ಬರಿದು ಮಾಡಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೂ ಆಸ್ಪತ್ರೆ ಇಲ್ಲ ಎನ್ನುವುದೇ ನಾಚಿಕೆಗೇಡು. ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡದೇ ಹೋದರೆ ಹೋರಾಟ ಉಗ್ರ ರೂಪ ಪಡೆದುಕೊಳ್ಳುತ್ತದೆ ಎಂದು ಈ ವೇಳೆ ನಿವೃತ್ತ ಯೋಧ ಉತ್ತರ ಕನ್ನಡ ಜಿಲ್ಲೆ ಕಾನಸೂರಿನ ಮೇಜರ್ ಗಣಪತಿ ಜಿ.ಹೆಗಡೆ ಎಚ್ಚರಿಕೆ ನೀಡಿದರು.

ವಿಕ್ರಮ್ ಭಟ್ ಆಂಡ್ ಅಸೋಸಿಯೇಟ್ಸ್‌ನ ವಿಕ್ರಮ್ ಭಟ್ ಅವರು ಮಾತನಾಡಿ, ನಮ್ಮ ಕೂಗು ಯಾಕೆ ಜನಪ್ರತಿನಿಧಿಗಳಿಗೆ ತಲುಪುತ್ತಿಲ್ಲ? ನಮಗೆ ಆಸ್ಪತ್ರೆ ಬೇಕು ನಿಮ್ಮ ಆಶ್ವಾಸನೆಗಳಲ್ಲ. ಮೊದಲು ಆಸ್ಪತ್ರೆ ಕೊಟ್ಟು ಆ ಮೇಲೆ ಕ್ಷೇತ್ರಕ್ಕೆ ಬನ್ನಿ ಎಂದು ಸವಾಲು ಹಾಕಿದರು.

ಬಾರದ ಜನಪ್ರತಿಧಿಗಳು, ಪೋನ್ ಸ್ವಿಚ್ ಆಫ್

ಬಾರದ ಜನಪ್ರತಿಧಿಗಳು, ಪೋನ್ ಸ್ವಿಚ್ ಆಫ್

ಪ್ರತಿಭಟನಾ ಸ್ಥಳದಿಂಲೇ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುವ ಕಾರವಾರದ ರೂಪಾಲಿ ನಾಯ್ಕ, ಶಿರಸಿ ಸಿದ್ದಾಪುರದ ಶಾಸಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಭಟ್ಕಳದ ಶಾಸಕ ಸುನೀಲ್ ನಾಯ್ಕ, ಕುಮಟಾದ ಶಾಸಕ ದಿನಕರ ಶೆಟ್ಟಿ, ಯಲ್ಲಾಪುರದ ಶಾಸಕ ಮತ್ತು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಹಳಿಯಾಳದ ಶಾಸಕ ಆರ್.ವಿ.ದೇಶಪಾಂಡೆ ಮತ್ತು ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂಪರ್ಕ ಮಾಡುವ ಯತ್ನ ಮಾಡಿತಾದರೂ ಒಬ್ಬರೂ ಕರೆಗೆ ಸ್ಪಂದಿಸಲಿಲ್ಲ ಎಂದು ತಿಳಿದು ಬಂದಿದೆ.

ಮನ್ ಕೀ ಬಾತ್​ ಗೆ ಕರೆ ಮಾಡಿ

ಮನ್ ಕೀ ಬಾತ್​ ಗೆ ಕರೆ ಮಾಡಿ

ಹೋರಾಟದ ಮುಂದಿನ ಭಾಗವಾಗಿ ಉತ್ತರ ಕನ್ನಡದ ಜನರು ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕೀ ಬಾತ್' ಅಭಿಪ್ರಾಯ ಸಂಗ್ರಹಣೆಗೆ ಕರೆ ಮಾಡಬೇಕು ಎಂದು ತಿಳಿಸಲಾಯಿತು. ಸಹಾಯವಾಣಿ 1800117800ಕ್ಕೆ ಕರೆ ಮಾಡಿ ಕರ್ನಾಟಕದಿಂದ ಮಾತನಾಡುತ್ತಿರುವುದು ಉತ್ತರ ಕನ್ನಡ ಜಿಲ್ಲೆ ಎಂದು ವಿವರ ದಾಖಲಿಸಿ ಆಸ್ಪತ್ರೆ ಬೇಡಿಕೆ ಸಲ್ಲಿಸಬೇಕು ಎಂದು ಪ್ರತಿಭಟನಾಕರರು ಒಕ್ಕೊರಲಿನ ತಿರ್ಮಾನ ಮಾಡಿದರು.

ಉತ್ತರ ಕನ್ನಡಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಉತ್ತರ ಕನ್ನಡಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಆಗಸ್ಟ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಮಾಡಲಿದ್ದು ಆ ಸಂದರ್ಭದಲ್ಲಿಯಾದರೂ ಬಹುವರ್ಷದ ಬೇಡಿಕೆಯಾದ ಸುಸಜ್ಜಿತ ಆಸ್ಪತ್ರೆ ಘೋಷಣೆ ಮಾಡಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನರಿದ್ದಾರೆ ಎನ್ನಲಾಗಿದೆ.

Recommended Video

Eshwarappa BJP ಕಾರ್ಯಕರ್ತರು ರಾಜಿನಾಮೆ ಕೊಡುವ ಬಗ್ಗೆ ಹೀಗಾ ಹೇಳೋದು | *Politics | OneIndia Kannada

English summary
Protest demanding build multi speciality hospital in Uttara Kannada at Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X