ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಬಂಧನ: ಉತ್ತರ ಕರ್ನಾಟಕದಲ್ಲೂ ಪ್ರತಿಭಟನೆ ಬಿಸಿ

|
Google Oneindia Kannada News

ಬೆಂಗಳೂರು, ಸೆ.4: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಬಂಧನ ಖಂಡಿಸಿ ವ್ಯಾಪಕ ಪ್ರತಿಭಟನೆ ಮಾಡಲಾಯಿತು. ಹಾವೇರಿ, ಗದಗ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿದೆ.

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದ್ದು, ಡಿಕೆಶಿ ಪ್ರಾಭಲ್ಯ ಕುಂದಿಸಲು ಬಿಜೆಪಿ ಇಡಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಈ ವೇಳೆ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಸಂಸದ ಐ.ಜಿ.ಸನದಿ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಡಿಕೆಶಿ ಬಂಧನ ಖಂಡಿಸಿ ದಾವಣಗೆರೆ, ಚಿತ್ರದುರ್ಗದಲ್ಲಿ ಭಾರೀ ಪ್ರತಿಭಟನೆಡಿಕೆಶಿ ಬಂಧನ ಖಂಡಿಸಿ ದಾವಣಗೆರೆ, ಚಿತ್ರದುರ್ಗದಲ್ಲಿ ಭಾರೀ ಪ್ರತಿಭಟನೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಬಂಡಿಗಳನ್ನು ನಿಲ್ಲಿಸಿ ಪ್ರತಿಭಟಿಸಿದರು. ಹೆದ್ದಾರಿ ತಡೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ಥಗೊಂಡಿತು. ಇದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ದುರುದ್ದೇಶ ಪೂರೀತವಾಗಿ ಡಿಕೆಶಿ ಅವರನ್ನು ಬಂಧಿಸಲಾಗಿದ್ದು, ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಅಣತಿಯಂತೆ ಇಡಿ ನಡೆದುಕೊಂಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು. ಹಿರೇಬಾಗೇವಾಡಿಯಲ್ಲಿ ಟೋಲ್ ಬಳಿಯೂ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಉಳಿದ ತಾಲೂಕುಗಳಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಸಾಮಾನ್ಯವಾಗಿತ್ತು.

Protest in North Karnataka

ಗದಗ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಬಿಜೆಪಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮೋದಿ ಮತ್ತು ಷಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದರು. ಇಲ್ಲಿನ ಶಹಪುರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೊಶ ವ್ಯಕ್ತ ಪಡಿಸಿದರು. ಸುಳ್ಳು ಸೃಷ್ಠಿ ಮೂಲಕ ವಿನಾಕಾರಣ ಡಿ. ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದ್ದು, ಬಲಿಷ್ಠರನ್ನು ದ್ವೇಷದ ರಾಜಕಾರಣದ ಮೂಲಕ ನಿಷ್ಕ್ರಿಯಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇಡಿಯನ್ನು ದುರ್ಬಳಕೆ ಮಾಡಿಕೊಂಡು ಡಿಕೆಶಿ ಅವರನ್ನು ಬಂಧಿಸಲಾಗಿದ್ದು ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಧಾರವಾಡದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಯಾದಗಿರಿಯಲ್ಲಿ ಸುಭಾಸ್ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು. ಪ್ರತಿಭಟನೆ ವೇಳೆ ರಸ್ತೆ ಬಂದ್ ಮಾಡಿದ ಕಾರಣ ಕೆಲಕಾಲ ಸಂಚಾರಕ್ಕೆ ಅಡ್ಡಿಯಾಯಿತು. ಕೊಪ್ಪಳದಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಅಶೋಕ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಾಯಿತು.

ಡಿಕೆ ಶಿವಕುಮಾರ್ ಆಸ್ತಿ ವಿವರ ಬಹಿರಂಗ, 600 ಕೋಟಿ ಪ್ಲಸ್!ಡಿಕೆ ಶಿವಕುಮಾರ್ ಆಸ್ತಿ ವಿವರ ಬಹಿರಂಗ, 600 ಕೋಟಿ ಪ್ಲಸ್!

ಡಿ.ಕೆ.ಶಿವಕುಮಾರ್ ಬಂಧನದ ಪರಿಣಾಮ ಉತ್ತರ ಕರ್ನಾಟಕಕ್ಕೂ ಪ್ರತಿಭಟನೆಯ ಬಿಸಿ ತಾಗಿತು. ಎಲ್ಲೆಡೆ ಪ್ರತಿಭಟನೆಗಳು ಸಾಮಾನ್ಯವಾಗಿದ್ದವು. ಜತೆಗೆ ಬಿಜೆಪಿ ದ್ವೇಷದ ರಾಜಕಾರಣ ಮೂಲಕ ಡಿಕೆಶಿ ಅವರನ್ನು ಬಂಧಿಸಿದ್ದು ಅಧಿಕಾರ ದುರ್ಬಳಕೆ ಮಾಡಿಕೊಂಡು ಇಡಿಯನ್ನು ಬಿಜೆಪಿ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಡಿಕೆಶಿಯ ಬಂಧನ, ರಾಜಕೀಯ ಪ್ರೇರಿತ ಎಂಬ ಆರೋಪಗಳು ಕೇಳಿ ಬಂದವು. ಮಾಜಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರು. ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿರುವುದನ್ನೆ ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಮತ್ತು ಅಮಿತ್ ಷಾ ದ್ವೇಷ ಹಾಗೂ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡು ಇಡಿಯನ್ನು ತಮ್ಮ ಅಣತಿಯಂತೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಮಾಧವಸ್ವಾಮಿ ಡಿಕೆಶಿ ಬಂಧನದಲ್ಲಿ ಶೇಡಿನ ರಾಜಕಾರಣವನ್ನು ಬಿಜೆಪಿ ಮಾಡಿಲ್ಲ. ಕಾನೂನು ಕ್ರಮ ಜರುಗಿಸಿದಾಗ ಅಧಿಕಾರದಲ್ಲಿ ಇರುವವರ ವಿರುದ್ಧ ಆರೋಪಗಳು ಸಹಜ. ಡಿ.ಕೆ.ಶಿವಕುಮಾರ್ ತಪ್ಪು ಮಾಡಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಅವರು ಇಡಿ ತನಿಖೆಗೆ ಸಹಕರಿಸಬೇಕಿತ್ತು. ತನಿಖೆಗೆ ಸಹಕಾರ ನೀಡದೇ ವಿನಾಕಾರಣ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದರೆ ಹೇಗೆ? ಎಂದು ಪ್ರಶ್ನಿಸಿದರು.

English summary
Massive protest across north karnataka condemning the arrest of former minister and Congress leader DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X