ರಾಘವೇಂದ್ರ ಔರಾದ್ಕರ್ ಹೇಳಿದ್ದೇನು?
ಬೆಂಗಳೂರು, ಜು. 19 : ಪ್ರತಿಭಟನಾನಿರತರ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ನಾವು ಯಾವುದೇ ಒತ್ತಡಕ್ಕೆ ಮಣಿದಿಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಔರಾದ್ಕರ್ ಹೇಳಿದರು.
ಸಮಯ 1 ಗಂಟೆ : ವಿಬ್ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ಎಎಎಲ್ ಪೊಲೀಸ್ ಠಾಣೆ ತಲುಪಿದೆ. ಪ್ರತಿಭಟನಾಕಾರರು ಸ್ಥಳಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಬರಬೇಕು ಎಂದು ಆಗ್ರಹಿಸಿದ್ದರು. ಸದ್ಯ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿದ್ದಾರೆ.
ಹಿಂದಿನ ಸುದ್ದಿ : ಬೆಂಗಳೂರಿನ ಹೊರವಲಯದ ಮಾರತ್ ಹಳ್ಳಿಯ ವಿಬ್ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಪೋಷಕರು ಮತ್ತು ವಿವಿಧ ಸಂಘಟನೆಗಳು ಶನಿವಾರ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಸುಮಾರು 10 ಸಾವಿರ ಜನರು ಈ ಮೌನ ಪ್ರತಿಭಟನೆಯಲ್ಲಿ ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡಿದ್ದಾರೆ.
ಬೆಂಗಳೂರಿನ ವಿವಿಧ ಶಾಲೆಗಳ ಮಕ್ಕಳ ಪೋಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಕುಂದಲಹಳ್ಳಿ ಗೇಟ್ ಬಳಿ ಪ್ರತಿಭಟನೆ ಆರಂಭವಾಗಿದ್ದು, ಎಎಚ್ ಎಲ್ ಪೊಲೀಸ್ ಠಾಣೆಯ ತನಕ ಮೌನ ನಡೆಯಲಿದೆ. ಕಪ್ಪು ಬಟ್ಟೆ ಧರಿಸಿ ಬಂದಿರುವ ಸುಮಾರು 10 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಸುಮಾರು 5 ಕಿ.ಮೀ ತನಕ ಪ್ರತಿಭಟನೆ ಮೆರವಣಿಗೆ ನಡೆಯುತ್ತಿದ್ದು, ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಪೋಷಕರು ಬೈಕ್ ಜಾಥಾ ನಡೆಸುತ್ತಿದ್ದು, ವಿವಿಧ ಸಂಘಟನೆಗಳು ಈ ಬೃಹತ್ ಪ್ರತಿಭಟನೆಗೆ ಕೈ ಜೋಡಿಸಿವೆ. [ವಿಬ್ ಗಯಾರ್ ಶಾಲೆ ಮಾನ್ಯತೆ ರದ್ದತಿಗೆ ಪತ್ರ]
ಸಾವಿರಾರು ಸಂಖ್ಯೆಯಲ್ಲಿ ಪೋಷಕರು, ಸಾರ್ವಜನಿಕರು, ಸಾಫ್ಟ್ ವೇರ್ ಉದ್ಯೋಗಿಗಳು ಕಪ್ಪು ಪಟ್ಟಿ ಹಾಗೂ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಚಿಕ್ಕಮಕ್ಕಳು ಸಹ Stop Rape ಎಂಬ ಫಲಕ ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಮಾಜಿ ಶಾಸಕ ನಂದೀಶ್ ರೆಡ್ಡಿ, ಎಬಿವಿಪಿ, ಬಿಜೆಪಿ ಮಹಿಳಾ ಮೋರ್ಚಾ, ಜಯ ಕರ್ನಾಟಕ ಸಂಘನೆಗಳೂ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ವಿಬ್ ಗಯಾರ್ ಶಾಲೆಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ಶಾಲೆಯ ಆವರಣದಲ್ಲಿ ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ. ಶಾಲೆಯ ಮೂರು ಗೇಟ್ ಗಳನ್ನು ಬಂದ್ ಮಾಡಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications