• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಘವೇಂದ್ರ ಔರಾದ್ಕರ್ ಹೇಳಿದ್ದೇನು?

|

ಬೆಂಗಳೂರು, ಜು. 19 : ಪ್ರತಿಭಟನಾನಿರತರ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ನಾವು ಯಾವುದೇ ಒತ್ತಡಕ್ಕೆ ಮಣಿದಿಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಔರಾದ್ಕರ್ ಹೇಳಿದರು.

ಸಮಯ 1 ಗಂಟೆ : ವಿಬ್‌ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ಎಎಎಲ್ ಪೊಲೀಸ್ ಠಾಣೆ ತಲುಪಿದೆ. ಪ್ರತಿಭಟನಾಕಾರರು ಸ್ಥಳಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಬರಬೇಕು ಎಂದು ಆಗ್ರಹಿಸಿದ್ದರು. ಸದ್ಯ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿದ್ದಾರೆ.

ಹಿಂದಿನ ಸುದ್ದಿ : ಬೆಂಗಳೂರಿನ ಹೊರವಲಯದ ಮಾರತ್ ಹಳ್ಳಿಯ ವಿಬ್‌ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಪೋಷಕರು ಮತ್ತು ವಿವಿಧ ಸಂಘಟನೆಗಳು ಶನಿವಾರ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಸುಮಾರು 10 ಸಾವಿರ ಜನರು ಈ ಮೌನ ಪ್ರತಿಭಟನೆಯಲ್ಲಿ ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡಿದ್ದಾರೆ.

ಬೆಂಗಳೂರಿನ ವಿವಿಧ ಶಾಲೆಗಳ ಮಕ್ಕಳ ಪೋಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಕುಂದಲಹಳ್ಳಿ ಗೇಟ್ ಬಳಿ ಪ್ರತಿಭಟನೆ ಆರಂಭವಾಗಿದ್ದು, ಎಎಚ್ ಎಲ್ ಪೊಲೀಸ್ ಠಾಣೆಯ ತನಕ ಮೌನ ನಡೆಯಲಿದೆ. ಕಪ್ಪು ಬಟ್ಟೆ ಧರಿಸಿ ಬಂದಿರುವ ಸುಮಾರು 10 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಸುಮಾರು 5 ಕಿ.ಮೀ ತನಕ ಪ್ರತಿಭಟನೆ ಮೆರವಣಿಗೆ ನಡೆಯುತ್ತಿದ್ದು, ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಪೋಷಕರು ಬೈಕ್ ಜಾಥಾ ನಡೆಸುತ್ತಿದ್ದು, ವಿವಿಧ ಸಂಘಟನೆಗಳು ಈ ಬೃಹತ್ ಪ್ರತಿಭಟನೆಗೆ ಕೈ ಜೋಡಿಸಿವೆ. [ವಿಬ್ ಗಯಾರ್ ಶಾಲೆ ಮಾನ್ಯತೆ ರದ್ದತಿಗೆ ಪತ್ರ]

ಸಾವಿರಾರು ಸಂಖ್ಯೆಯಲ್ಲಿ ಪೋಷಕರು, ಸಾರ್ವಜನಿಕರು, ಸಾಫ್ಟ್ ವೇರ್ ಉದ್ಯೋಗಿಗಳು ಕಪ್ಪು ಪಟ್ಟಿ ಹಾಗೂ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಚಿಕ್ಕಮಕ್ಕಳು ಸಹ Stop Rape ಎಂಬ ಫಲಕ ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಮಾಜಿ ಶಾಸಕ ನಂದೀಶ್ ರೆಡ್ಡಿ, ಎಬಿವಿಪಿ, ಬಿಜೆಪಿ ಮಹಿಳಾ ಮೋರ್ಚಾ, ಜಯ ಕರ್ನಾಟಕ ಸಂಘನೆಗಳೂ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ವಿಬ್ ಗಯಾರ್ ಶಾಲೆಗೆ ಬಿಗಿ ಪೊಲೀಸ್​ ಭದ್ರತೆ ನೀಡಲಾಗಿದೆ. ಶಾಲೆಯ ಆವರಣದಲ್ಲಿ ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ. ಶಾಲೆಯ ಮೂರು ಗೇಟ್ ಗಳನ್ನು ಬಂದ್​ ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Bangalore Vibgyor High school where two staff members allegedly raped a 6-year-old class 1 girl student remains shut for the day on Saturday as parents protests near school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more