ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ದಾಖಲೆ ಒದಗಿಸುವೆ: ಜಿ ಪರಮೇಶ್ವರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ದಾಖಲೆ ಒದಗಿಸುವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಐಟಿ ಅಧಿಕಾರಿಗಳು ಎಲ್ಲೆಡೆ ಪರಿಶೀಲನೆ ನಡೆಸಿದ್ದು, ಮಂಗಳವಾರ ವಿಚಾರಣೆಗೆ ಕರೆದಿದ್ದಾರೆ. ಅಂದು ಅವರ ಎಲ್ಲಾ ಪ್ರಶ್ನೆಗೂ ಸಮಂಜಸ ಉತ್ತರ ಹಾಗೂ ದಾಖಲೆ ಪತ್ರವನ್ನು ನೀಡಲಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಪರಮೇಶ್ವರ ಪಾಲಿಗೆ ಅಣ್ಣನ ಮಗ ಆನಂದ್ ವಿಲನ್?ಪರಮೇಶ್ವರ ಪಾಲಿಗೆ ಅಣ್ಣನ ಮಗ ಆನಂದ್ ವಿಲನ್?

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಮಾಧ್ಯಮದಲ್ಲಿ 3,500 ಕೋಟಿ ರು ಕಿಕ್‌ ಬ್ಯಾಕ್‌ ತೆಗೆದುಕೊಂಡಿದ್ದಾರೆ ಹಾಗೂ 400 ಕೋಟಿ ರು. ನಗದು ಸಿಕ್ಕಿದೆ ಎಂದು ಪ್ರಸಾರ ಮಾಡಿದ್ದಾರೆ. ಆದರೆ ಇದು ಸಂಪೂರ್ಣ ಆಧಾರ ರಹಿತವಾದದ್ದು ಎಂದರು.

Provide Appropriate Documentation For IT Officers Queries

ಐಟಿ ಅಧಿಕಾರಿಗಳು ಮನೆ ಸೇರಿದಂತೆ ಕಾಲೇಜಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಅದಕ್ಕೆ ಸೂಕ್ತ ದಾಖಲಾತಿಯನ್ನು ನೀಡಿದ್ದೇನೆ. ಬಳಿಕ ಕೆಲ ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿದ್ದಾರೆ. ಅಂತೆಯೇ ಸಮರ್ಪಕ ಉತ್ತರ ನೀಡಿದ್ದೇನೆ. ವೈದ್ಯಕೀಯ ಸೀಟು ಹಂಚಿಕೆ ನೀಟ್‌ ಮೂಲಕ ಆಗಲಿದೆ. ನಾನು ಮುವತ್ತು ವರ್ಷ ಕಾಲೇಜು ಮಂಡಳಿಯಲ್ಲಿ ಸದಸ್ಯನಿದ್ದರೂ ಹೆಚ್ಚಾಗಿ ಕಾಲೇಜು ಕಾರ್ಯ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರಲಿಲ್ಲ.

ನನ್ನ ಸಹೋದರ ನಿಧನದ ಬಳಿಕ ಜವಾಬ್ದಾರಿ ನನ್ನ ಮೇಲಿದೆ. ದಾಖಲಾತಿ ವಿಷಯದಲ್ಲಿ ನನಗೆ ಹೆಚ್ಚು ಮಾಹಿತಿ ಇರಲಿಲ್ಲ. ಸಹೋದರ ಮಗ ಆನಂದ್ ಕೂಡ ಇರುತ್ತಿದ್ದರು. ದಾಖಲಾತಿ ವಿಷಯದಲ್ಲಿ ನೇರ ಹೊಣೆಗಾರಿಕೆ ಇರಲಿಲ್ಲ ಎಂದರು.

ಐಟಿ ಅಧಿಕಾರಿಗಳು ಸಂಪೂರ್ಣ ಪರಿಶೀಲನೆ ಪೂರ್ಣ ಪರಿಶೀಲನೆ ಮುಗಿಸಲಿ. ನಂತರ ನಮ್ಮ ಬಳಿಯ ಇರುವ ಎಲ್ಲಾ ದಾಖಲಾತಿ ನೀಡುತ್ತೇವೆ. ಅದಕ್ಕೆ ಸಮಂಜಸ ಉತ್ತರ ನೀಡುತ್ತೇನೆ ಎಂದರು. ಐಟಿ ದಾಳಿ ವಿಷಯಕ್ಕೆ ರಾಜಕೀಯ ಲೇಪ ಬಳಿಯುವುದಿಲ್ಲ. ಮೊದಲು ಅಧಿಕಾರಿಗಳಿಗೆ ಉತ್ತರ ನೀಡುವೆನೆಂದರು.

ಕೆಲ ವಿದ್ಯಾರ್ಥಿಗಳ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ನಾನು ಸಂಪೂರ್ಣ ರಾಜಕೀಯದಲ್ಲಿ ತೊಡಗಿದ್ದರಿಂದ ಕಾಲೇಜು ಮಂಡಳಿಗೆ ಹೆಚ್ಚು ಗಮನ ನೀಡಿರಲಿಲ್ಲ. ಮಂಗಳವಾರ ವಿಚಾರಣೆಗೆ ಕರೆದಿದ್ದಾರೆ ಅಂದು ಉತ್ತರಿಸುವೆ ಎಂದರು.

English summary
Former Deputy Chief Minister Dr Parameshwara has said that he will provide appropriate documentation for IT officers queries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X