Get Updates
Get notified of breaking news, exclusive insights, and must-see stories!

ಮುಂಬೈ ಪೊಲೀಸರ ವಶಕ್ಕೆ; ಹೈಕೋರ್ಟ್ ಮೊರೆ ಹೋದ ರವಿ ಪೂಜಾರಿ

ಬೆಂಗಳೂರು, ನವೆಂಬರ್ 26 : ತನ್ನನ್ನು ಮುಂಬೈಗೆ ಕರೆದುಕೊಂಡು ಹೋದರೆ ಜೀವಕ್ಕೆ ಅಪಾಯವಿದೆ ಎಂದು ಭೂಗತ ಪಾತಕಿ ರವಿ ಪೂಜಾರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದೆ.

ರವಿ ಪೂಜಾರಿಯನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು.

ಈ ಆದೇಶವನ್ನು ರವಿ ಪೂಜಾರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾನೆ. ಮುಂಬೈನಲ್ಲಿ ನನ್ನ ಜೀವಕ್ಕೆ ಬೆದರಿಕೆ ಇದೆ. ಶಬನಂ ಡೆವಲಪರ್ಸ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೀಮಿತವಾಗಿ ನನ್ನನ್ನು ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾನೆ.

Provide Protection To Ravi Pujari High Court Tells Mumbai Police

ಮುಂಬೈನಲ್ಲಿ ರವಿ ಪೂಜಾರಿ ಮೇಲಿನ ಪ್ರಕರಣವೊಂದರ ವಿಚಾರಣೆ ಬಾಕಿ ಇದೆ. ಅದಕ್ಕಾಗಿ ಮುಂಬೈ ಪೊಲೀಸರು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು. ಮುಂಬೈ ಪೊಲೀಸರು ವಶಕ್ಕೆ ತನ್ನನ್ನು ನೀಡುವುದು ಕಾನೂನು ಬಾಹಿರ ಎಂದು ಅರ್ಜಿಯಲ್ಲಿ ರವಿ ಪೂಜಾರಿ ಉಲ್ಲೇಖಿಸಿದ್ದಾನೆ.

ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ಸೂಚನೆ ನೀಡಿರುವ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿದೆ. 2019ರ ಜನವರಿ 19ರಂದು ದಕ್ಷಿಣ ಆಫ್ರಿಕಾದ ಸೆನೆಗಲ್‌ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು.

ಕರ್ನಾಟಕ ಮತ್ತು ಮುಂಬೈನಲ್ಲಿ ರವಿ ಪೂಜಾರಿ ವಿರುದ್ಧ 120ಕ್ಕೂ ಅಧಿಕ ಪ್ರಕರಣಗಳಿವೆ. ಬೆಂಗಳೂರಿನ ಸಿಸಿಬಿ ಪೊಲೀಸರು ನಗರದಲ್ಲಿ ರವಿ ಪೂಜಾರಿ ವಿಚಾರಣೆ ನಡೆಸುತ್ತಿದ್ದರು. ರವಿ ಪೂಜಾರಿ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಬಪ್ಪುತೋಟದ ನಿವಾಸಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+