ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂಬೈ ಪೊಲೀಸರ ವಶಕ್ಕೆ; ಹೈಕೋರ್ಟ್ ಮೊರೆ ಹೋದ ರವಿ ಪೂಜಾರಿ

|
Google Oneindia Kannada News

ಬೆಂಗಳೂರು, ನವೆಂಬರ್ 26 : ತನ್ನನ್ನು ಮುಂಬೈಗೆ ಕರೆದುಕೊಂಡು ಹೋದರೆ ಜೀವಕ್ಕೆ ಅಪಾಯವಿದೆ ಎಂದು ಭೂಗತ ಪಾತಕಿ ರವಿ ಪೂಜಾರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದೆ.

ರವಿ ಪೂಜಾರಿಯನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು.

ಮುಂಬೈ ಪೊಲೀಸರ ಕಸ್ಟಡಿಗೆ ಭೂಗತ ಪಾತಕಿ ರವಿ ಪೂಜಾರಿಮುಂಬೈ ಪೊಲೀಸರ ಕಸ್ಟಡಿಗೆ ಭೂಗತ ಪಾತಕಿ ರವಿ ಪೂಜಾರಿ

ಈ ಆದೇಶವನ್ನು ರವಿ ಪೂಜಾರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾನೆ. ಮುಂಬೈನಲ್ಲಿ ನನ್ನ ಜೀವಕ್ಕೆ ಬೆದರಿಕೆ ಇದೆ. ಶಬನಂ ಡೆವಲಪರ್ಸ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೀಮಿತವಾಗಿ ನನ್ನನ್ನು ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾನೆ.

ಡಾನ್ ರವಿ ಪೂಜಾರಿ ಆಫ್ರೀಕಾ ದೇಶದಲ್ಲಿ ಸಮಾಜ ಸೇವಕ!ಡಾನ್ ರವಿ ಪೂಜಾರಿ ಆಫ್ರೀಕಾ ದೇಶದಲ್ಲಿ ಸಮಾಜ ಸೇವಕ!

Provide Protection To Ravi Pujari High Court Tells Mumbai Police

ಮುಂಬೈನಲ್ಲಿ ರವಿ ಪೂಜಾರಿ ಮೇಲಿನ ಪ್ರಕರಣವೊಂದರ ವಿಚಾರಣೆ ಬಾಕಿ ಇದೆ. ಅದಕ್ಕಾಗಿ ಮುಂಬೈ ಪೊಲೀಸರು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು. ಮುಂಬೈ ಪೊಲೀಸರು ವಶಕ್ಕೆ ತನ್ನನ್ನು ನೀಡುವುದು ಕಾನೂನು ಬಾಹಿರ ಎಂದು ಅರ್ಜಿಯಲ್ಲಿ ರವಿ ಪೂಜಾರಿ ಉಲ್ಲೇಖಿಸಿದ್ದಾನೆ.

ಭೂಗತ ದೊರೆ ರವಿ ಪೂಜಾರಿ ಜಾತಕ ಬಿಚ್ಚಿಟ್ಟ ಎಡಿಜಿಪಿ ಅಮರ್ಭೂಗತ ದೊರೆ ರವಿ ಪೂಜಾರಿ ಜಾತಕ ಬಿಚ್ಚಿಟ್ಟ ಎಡಿಜಿಪಿ ಅಮರ್

ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ಸೂಚನೆ ನೀಡಿರುವ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿದೆ. 2019ರ ಜನವರಿ 19ರಂದು ದಕ್ಷಿಣ ಆಫ್ರಿಕಾದ ಸೆನೆಗಲ್‌ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು.

Recommended Video

Virat Kohli ಮೊದಲ ಪಂದ್ಯಕ್ಕೂ ಮುನ್ನ Rohit Sharma ಬಗ್ಗೆ ಹೇಳಿದ್ದೇನು | Oneindia Kannada

ಕರ್ನಾಟಕ ಮತ್ತು ಮುಂಬೈನಲ್ಲಿ ರವಿ ಪೂಜಾರಿ ವಿರುದ್ಧ 120ಕ್ಕೂ ಅಧಿಕ ಪ್ರಕರಣಗಳಿವೆ. ಬೆಂಗಳೂರಿನ ಸಿಸಿಬಿ ಪೊಲೀಸರು ನಗರದಲ್ಲಿ ರವಿ ಪೂಜಾರಿ ವಿಚಾರಣೆ ನಡೆಸುತ್ತಿದ್ದರು. ರವಿ ಪೂಜಾರಿ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಬಪ್ಪುತೋಟದ ನಿವಾಸಿ.

English summary
Gangster Ravi Pujari moved Karnataka high court and challenged Bengaluru court order sending him for Mumbai police custody for 10 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X