ಪಿಎಸ್ಐ ನೇಮಕಾತಿ ಅಕ್ರಮ: ಮೇ 4ರಂದು ಕೆಪಿಎಸ್‌ಸಿ ಕಚೇರಿಗೆ ಬೀಗ ಜಡಿದು ಆಪ್ ಪ್ರತಿಭಟನೆ
ಬೆಂಗಳೂರು, ಮೇ 2: ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆಯಲ್ಲಿ ನಡೆದಿರುವ ವ್ಯಾಪಕ ಅಕ್ರಮದ ಆರೋಪದ ಹಿನ್ನೆಲೆ ಕೆಪಿಎಸ್‌ಸಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಕ್ಕೆ ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.
ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರಿನ ಆಪ್ ಅಧ್ಯಕ್ಷ ಮೋಹನ್ ದಾಸರಿ, ಕೆಪಿಎಸ್‌ಸಿ ವಿರುದ್ಧ ಹರಿಹಾಯ್ದರು. ಭ್ರಷ್ಟಾಚಾರದ ತಾಣ ಎಂಬ ಕುಖ್ಯಾತಿಗೆ ಒಳಗಾಗಿರುವ ಕರ್ನಾಟಕ ಲೋಕಸೇವಾ ಆಯೋಗವನ್ನು ಸರಿದಾರಿಗೆ ತರುವ ಕುರಿತು ಎಲ್ಲ ಸರ್ಕಾರಗಳು ಮಾತನಾಡಿವೆ. ಆದರೆ ಇದಕ್ಕೆ ಕಾಯಕಲ್ಪ ಮಾತ್ರ ಇನ್ನೂ ಆಗಿಲ್ಲ ಎಂದು ದೂಷಿಸಿದರು.
ಶ್ಯಾಮ್ ಭಟ್‌ರಂತಹ ಪರಮ ಭ್ರಷ್ಟಾಚಾರಿಗಳನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದೇ ದೊಡ್ಡ ದುರಂತ. ಇದನ್ನು ಖಂಡಿಸಿ ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ ನಮ್ಮ ಕಾರ್ಯಕರ್ತರು ಈಗಲೂ ಮೊಕದ್ದಮೆ ಎದುರಿಸುತ್ತಿದ್ದಾರೆ. ಕೆಪಿಎಸ್‌ಸಿ ಅಕ್ರಮಗಳನ್ನು ಖಂಡಿಸಿ ಮೇ 4ರ ಬುಧವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಪಿಎಸ್‌ಸಿ ಕಚೇರಿಗೆ ಬೀಗ ಜಡಿದು ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ" ಎಂದು ಮೋಹನ್ ದಾಸರಿ ಎಚ್ಚರಿಸಿದ್ದಾರೆ.

ಕೆಪಿಎಸ್‌ಸಿ ಮೇಲೆ ಸಾಲು ಸಾಲು ಅಕ್ರಮದ ಆರೋಪ:
"ಕಳೆದ 1998ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಹುದ್ದೆಗಳ ನೇಮಕದಲ್ಲಿ ಅನರ್ಹರಿಗೆ ಹುದ್ದೆ ನೀಡಿರುವುದನ್ನು ಕರ್ನಾಟಕ ಲೋಕಸೇವಾ ಆಯೋಗ ಒಪ್ಪಿಕೊಂಡಿದ್ದು, 28 ಗೆಜೆಟೆಡ್ ಅಧಿಕಾರಿಗಳನ್ನು ಕೈಬಿಟ್ಟು ಉಳಿದವರನ್ನು ನೇಮಿಸಲಾಯಿತು. 1998, 1999, 2004ರಲ್ಲಿ ಕೆಪಿಎಸ್‌ಸಿ ನಡೆಸಿದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೆ.ಆರ್. ಖಲೀಲ್ ಅಹ್ಮದ್ ಮತ್ತು ಇತರ ಅಭ್ಯರ್ಥಿಗಳು ಹೈಕೋರ್ಟ್‌ಗೆ 2008ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ 2016ರ ಜೂನ್ 21ರಂದು ತೀರ್ಪು ನೀಡಿತ್ತು. ಇದನ್ನು ಸುಪ್ರೀಂಕೋರ್ಟ್ 2018ರಲ್ಲಿ ಎತ್ತಿ ಹಿಡಿದಿತ್ತು," ಎಂದು ಮೋಹನ್ ದಾಸರಿ ತಿಳಿಸಿದರು.

2015ರಲ್ಲೂ ಅಕ್ರಮಕ್ಕೆ ಕೆಪಿಎಸ್‌ಸಿ ಅವಕಾಶ:
"ಅಕ್ರಮಗಳನ್ನೇ ಹೊದ್ದು ಮಲಗಿರುವ ಕರ್ನಾಟಕ ಲೋಕಸೇವಾ ಆಯೋಗವು 2015ನೇ ಸಾಲಿನ 428 ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲೂ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆಲ್ಲಾ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಗೊಂಡ ಬಳಿಕ ಭ್ರಷ್ಟಾಚಾರವಾದರೆ 2015ರಲ್ಲಿ ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆ ಸಿದ್ಧತೆ ನಡೆಯುತ್ತಿರುವ ಹಂತದಲ್ಲಿಯೇ ಅಕ್ರಮವಾಗಿದೆ. 129 ಅಭ್ಯರ್ಥಿಗಳು ಉತ್ತರ ಪತ್ರಿಕೆಯಲ್ಲಿ ಗುರುತಿನ ಚಿಹ್ನೆ ಹಾಕುವ ಮೂಲಕ ಅಕ್ರಮ ನಡೆಸಿದ್ದರು. ಇಷ್ಟೇ ಅಲ್ಲದೆ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರೀ ಅಕ್ರಮ ನಡೆದಿದೆ. ಜೊತೆಗೆ ಕೆಪಿಎಸ್‌ಸಿ ಅವರೇ ಐಡಿ ಮತ್ತು ಪಾಸ್‌ವರ್ಡ್ ಕ್ರಿಯೇಟ್ ಮಾಡಿ ಮೌಲ್ಯಮಾಪನವಾದ ನಂತರ ಅಂಕಗಳನ್ನು ತಿದ್ದಿದ ಆರೋಪವಿದೆ," ಎಂದು ಮೋಹನ್ ದಾಸರಿ ಮಾಹಿತಿ ನೀಡಿದರು.
ಸುಳ್ಳು ಪ್ರಮಾಣಪತ್ರ ನೀಡಿ ಪರೀಕ್ಷೆಯಲ್ಲಿ ಪಾಸ್:
"2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 106 ಹುದ್ದೆಗಳ ನೇಮಕಾತಿಯಲ್ಲಿ ಅಂಗವಿಕಲರು ಎಂದು ಸುಳ್ಳು ಪ್ರಮಾಣಪತ್ರ ನೀಡಿ 20 ಮಂದಿ ಪರೀಕ್ಷೆ ಬರೆದಿದ್ದರು. 64 ಅಭ್ಯರ್ಥಿಗಳು ಉತ್ತರ ಪತ್ರಿಕೆಯಲ್ಲಿ ಹೆಸರು, ವಿಳಾಸ ಬರೆದು ಉತ್ತೀರ್ಣರಾಗಿದ್ದರು. ನಂತರ ಇವರನ್ನೆಲ್ಲ ಅನರ್ಹ ಮಾಡಲಾಯಿತು. 1999, 2004 ಮತ್ತು 2008ರ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳಿದ್ದು, ಇವು ಕೋರ್ಟ್ ಅಂಗಳದಲ್ಲಿವೆ," ಎಂದರು.
ಕಳೆದ 2011ನೇ ಸಾಲಿನ ಕೆಎಎಸ್ ನೇಮಕ ಸಂಬಂಧ ಕೆಪಿಎಸ್‌ಸಿ 2014ರ ಮಾರ್ಚ್ 21ರಂದು 162 ಗ್ರೂಪ್ ಎ ಮತ್ತು 200 ಗ್ರೂಪ್ ಬಿ ಹುದ್ದೆಗಳ ನೇಮಕದ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಡಾ. ಎಚ್.ಪಿ.ಎಸ್ ಮೈತ್ರಿ ಎಂಬುವವರ ನೇಮಕದಲ್ಲಿ ಅಕ್ರಮ ನಡೆದಿವೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದ್ದಾರೆ. ಆಯೋಗದ ಸದಸ್ಯರೇ ಹಣದ ಬೇಡಿಕೆ ಇಟ್ಟಿದ್ದರೆಂದು ಅವರೇ ದೂರು ನೀಡಿದ್ದರು. ತನಿಖೆ ನಡೆಸಿದ್ದ ಸಿಐಡಿ, ಮೇಲ್ನೋಟಕ್ಕೆ ಅಕ್ರಮ ಸಾಬೀತಾಗಿದೆ ಎಂದು ಹೇಳಿ, ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಗೋನಾಳ್ ಭೀಮಪ್ಪ ಮತ್ತಿತರ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ಖಚಿತಪಡಿಸಿ 10 ಸಾವಿರ ಪುಟಗಳ ವರದಿ ನೀಡಿತ್ತು. ಡಿಪಿಎಆರ್ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿತ್ತು.
'ಕ್ಯಾಷ್ ಫಾರ್ ಜಾಬ್ಸ್' ಎಂದೇ ಹೆಸರಾಗಿದ್ದ ಹಗರಣದಿಂದಾಗಿ ನೇಮಕ ಪ್ರಕ್ರಿಯೆ ರದ್ದುಗೊಳಿಸಬೇಕೆಂಬ ಒತ್ತಡದ ಹಿನ್ನೆಲೆ ಸರ್ಕಾರ 2014ರ ಆಗಸ್ಟ್ 14ರಂದು 2011ನೇ ಸಾಲಿನ ಕೆಎಎಸ್ ನೇಮಕ ಸಂಬಂಧ ಹೊರಡಿಸಿದ್ದ ಎಲ್ಲ ಅಧಿಸೂಚನೆ ರದ್ದುಗೊಳಿಸಿತ್ತು. ಆನಂತರ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಸಂಪೂರ್ಣ ನೇಮಕ ಪ್ರಕ್ರಿಯೆ ರದ್ದುಗೊಳಿಸಿತ್ತು," ಎಂದು ತಿಳಿಸಿದರು.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications