Breaking; ಪಿಎಸ್‌ಐ ನೇಮಕಾತಿ; ಬೆಂಗಳೂರಲ್ಲಿ 12 ಅಭ್ಯರ್ಥಿಗಳ ಬಂಧನ
ಬೆಂಗಳೂರು, ಮೇ 01; ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ. ನಗರದ 7 ಕೇಂದ್ರದಲ್ಲಿಅಕ್ರಮ ನಡೆದಿರುವ ಬಗ್ಗೆ ಸಿಐಡಿ ಸರ್ಕಾರಕ್ಕೆ ಮಾಹಿತಿ ನೀಡಿದೆ.
ಕಲಬುರಗಿಯಲ್ಲಿ ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಈ ಕುರಿತು ಸಿಐಡಿ ತನಿಖೆ ಚುರುಕುಗೊಂಡಿದೆ. ಶುಕ್ರವಾರ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸಹ ಬಂಧಿಸಲಾಗಿದೆ.
ಬೆಂಗಳೂರಿನ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದ 22 ಅಭ್ಯರ್ಥಿಗಳ ಒಎಂಆರ್ ಪ್ರತಿಗಳ ಬಗ್ಗೆ ಸಿಐಡಿ ಅನುಮಾನ ವ್ಯಕ್ತಪಡಿಸಿದೆ. ಈ ಕುರಿತು ಸರ್ಕಾರಕ್ಕೆ ಸಹ ವರದಿ ನೀಡಲಾಗಿತ್ತು. ಈಗ 12 ಅಭ್ಯರ್ಥಿಗಳ ಬಂಧನವಾಗಿದೆ.

ಸಿಐಡಿ ಡಿಎಸ್ಪಿ ನೀಡಿದ ದೂರಿನ ಅನ್ವಯ ನಗರ ಹೈಗೌಂಡ್ಸ್ ಪೊಲೀಸರು 12 ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಬಳಿಕ ಎಲ್ಲರನ್ನೂ ವಿಚಾರಣೆಗಾಗಿ ಸಿಐಡಿ ವಶಕ್ಕೆ ನೀಡಲಾಗಿದೆ.
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಹಿನ್ನಲೆಯಲ್ಲಿ ಪರೀಕ್ಷೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದು ಕಡೆ ಸಿಐಡಿ ಹಗರಣದ ತನಿಖೆ ಚುರುಕುಗೊಳಿಸಿದೆ.
ರಾಜ್ಯದ 92 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಗಳು ನಡೆದಿದ್ದವು. ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಅಕ್ರಮ ನಡೆದಿತ್ತು. ಪರೀಕ್ಷೆ ಬರೆದು ಆಯ್ಕೆಯಾದ 11 ಅಭ್ಯರ್ಥಿಗಳ ಪೈಕಿ 8 ಮಂದಿ ಅಕ್ರಮ ಎಸಗಿದ್ದಾರೆ ಎಂಬ ಆರೋಪವಿದ್ದು, ಸಿಐಡಿ ತನಿಖೆ ನಡೆಯುತ್ತಿದೆ.












Click it and Unblock the Notifications