Breaking: ಪಿಎಸ್ಐ ನೇಮಕಾತಿ ಅಕ್ರಮ; ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ
ಬೆಂಗಳೂರು, ಏಪ್ರಿಲ್ 27: ರಾಜ್ಯ ಸರ್ಕಾರವು ಪೊಲೀಸ್ ನೇಮಕಾತಿ ಹೆಚ್ಚುವರಿ ಮಹಾನಿರ್ದೇಶಕ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನಡೆದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಮೊದಲ ತಲೆದಂಡವಾಗಿ, ಪೊಲೀಸ್ ನೇಮಕಾತಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಿದ್ದು, ಪೊಲೀಸ್ ನೇಮಕಾತಿ ಎಡಿಜಿಪಿಯಾಗಿ ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ಎಡಿಜಿಪಿ ಅಮೃತ್ ಪೌಲ್ ಅವರ ವಿರುದ್ಧ ಆರೋಪ ಮಾಡಿದ್ದರು.

ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಯಲ್ಲಿ ವಂಚನೆ ನಡೆದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದ್ದು, ವಂಚನೆ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ 1991ರ ಬ್ಯಾಚ್ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ವರ್ಗಾವಣೆಗೊಳಿಸಿದ್ದು, ನೇಮಕಾತಿ ವಿಭಾಗದ ನೂತನ ಎಡಿಜಿಪಿ ಆಗಿ ಹಿತೇಂದ್ರ ನೇಮಕಗೊಂಡಿದ್ದಾರೆ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಆರ್. ಹಿತೇಂದ್ರಗೆ ಹೆಚ್ಚುವರಿ ಕೂಡ ನೀಡಲಾಗಿದೆ. ಆರ್. ಹಿತೇಂದ್ರ ಪ್ರಸ್ತುತ ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Recommended Video
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಅಮೃತ ಪೌಲ್ ಭಾಗಿ- ಕಾಂಗ್ರೆಸ್‌ನಿಂದ ಆರೋಪ
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಬಗ್ಗೆ ಕಾಂಗ್ರೆಸ್‌ನಿಂದ ಆರೋಪ ಕೇಳಿಬಂದಿತ್ತು. ಅಮೃತ್ ಪೌಲ್ ವಿರುದ್ಧ ಕಾಂಗ್ರೆಸ್ ಆರೋಪದ ಹಿನ್ನೆಲೆ ಈ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.












Click it and Unblock the Notifications