• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯೇಂದ್ರ , ಅಶ್ವಥ್ ನಾರಾಯಣ ಆರೋಪದ ಬಗ್ಗೆ ಸಿದ್ದರಾಮಯ್ಯ ಪ್ರಶ್ನೆ

|
Google Oneindia Kannada News

ಬೆಂಗಳೂರು, ಜುಲೈ05: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಬಲೆಗೆ ಬೀಳುತ್ತಿದ್ದಂತೆ ರಾಜಕಾರಣಿಗಳ ಪಾತ್ರದ ಬಗ್ಗೆ ದೊಡ್ಡ ಚರ್ಚೆಯಾಗ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಮಯ್ಯ ಸುದ್ದಿಗೋಷ್ಠಿ ನಡೆಸಿ, "ಯಡಿಯೂರಪ್ಪ ಪುತ್ರ ವಿಜಯೇಂದ್ರ ಮತ್ತು ಸಚಿವ ಅಶ್ವಥ್ ನಾರಾಯಣ ಮೇಲಿನ ಆರೋಪಕ್ಕೆ ಉತ್ತರ ಸಿಗಬೇಕಾದರೇ ನ್ಯಾಯಾಂಗ ತನಿಖೆಯಾಗಬೇೆಕೆಂದು" ಎಂದು ಒತ್ತಾಯಿಸಿದರು.

"ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಸಾಕಷ್ಟು ಬಾರಿ ತನಿಖೆಗೆ ಒತ್ತಾಯ ಮಾಡಿದ್ದೇವೆ. ನಾವು ಮಾರ್ಚ್‌ ತಿಂಗಳಲ್ಲಿ ತನಿಖೆಗೆ ಒತ್ತಾಯ ಮಾಡಿದ್ದರೆ, ಸರ್ಕಾರ ಏಪ್ರಿಲ್‌ನಲ್ಲಿ ಸಿಐಡಿ ತನಿಖೆ ಆರಂಭ ಮಾಡಿಸಿತು" ಎಂದು ಸಿದ್ದರಾಮಯ್ಯ ಹೇಳಿದರು.

"ಸಿಐಡಿಯಿಂದ ನ್ಯಾಯ ಸಿಗಲ್ಲ, ಇದರಲ್ಲಿ ಮಂತ್ರಿಗಳು, ದೊಡ್ಡ ದೊಡ್ಡ ರಾಜಕಾರಣಿಗಳ ಪಾತ್ರ ಇರುವುದರಿಂದ ಸಿಐಡಿ ಅವರನ್ನೆಲ್ಲ ವಿಚಾರಣೆ ಮಾಡಿ ಬಂಧಿಸುವುದು ಕಷ್ಟದ ಕೆಲಸ. ಹಾಗಾಗಿ ಈ ಹಗರಣವನ್ನು ನ್ಯಾಯಾಂಗ ತನಿಖೆ ಮಾಡಿಸಬೇಕು ಎಂದು ಹಲವು ಬಾರಿ ಒತ್ತಾಯ ಮಾಡಿದ್ದೆ. ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು 2022 ಮೇ 26 ರಂದು ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದೆ" ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

 ಯಾವ ಮಂತ್ರಿ, ಮುಖ್ಯಮಂತ್ರಿಗೆ ಹಣ ಹೋಗಿದೆ?

ಯಾವ ಮಂತ್ರಿ, ಮುಖ್ಯಮಂತ್ರಿಗೆ ಹಣ ಹೋಗಿದೆ?

"ಅಶ್ವಥ್‌ ನಾರಾಯಣ ಮೇಲೂ ಆರೋಪ ಇದೆ. ಸಚಿವರ ಕಡೆಯ 5 ಜನ ಅಕ್ರಮವಾಗಿ ಆಯ್ಕೆಯಾಗಿದ್ದಾರೆ. ಅಶ್ವಥ್‌ ನಾರಾಯಣ ಸಂಬಂಧಿಕರು ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಈಗ ಸಿಐಡಿಯವರು ಅಶ್ವಥ್ ನಾರಾಯಣ ಅವರ ಮೇಲೆ ಕ್ರಮ ತೆಗೆದುಕೊಳ್ತಾರಾ?. 300 ಜನರ ಓಎಮ್‌ಆರ್‌ ಶೀಟ್‌ ಗಳನ್ನು ತಿದ್ದಲಾಗಿದೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಒಬ್ಬ ಅಭ್ಯರ್ಥಿಗೆ 30 ಲಕ್ಷದಿಂದ 1 ಕೋಟಿ ವರೆಗೂ ವಸೂಲಿ ಮಾಡಿದ್ದಾರೆ. ಈ ಹಣ ಯಾರು ಯಾರ ಜೇಬಿಗೆ ಹೋಗಿದೆ? ಯಾವ ಮಂತ್ರಿಗೆ ಹೋಗಿದೆ? ಮುಖ್ಯಮಂತ್ರಿಗೆ ಹೋಗಿದೆಯಾ ಇಲ್ಲವಾ? ಇವೆಲ್ಲ ಗೊತ್ತಾಗಬೇಕಲ್ವಾ? ಇವರನ್ನೆಲ್ಲ ರಕ್ಷಣೆ ಮಾಡುತ್ತಿರುವವರು ಈ ರಾಜ್ಯದ ಮುಖ್ಯಮಂತ್ರಿಗಳೇ" ಎಂದು ಸಿದ್ದರಾಮಯ್ಯ ಆರೋಪಿಸಿದರು.

 ಹೈಕೋರ್ಟ್ ಹಾಲಿ ನ್ಯಾಯಧೀಶರ ತನಿಖೆಗೆ ಆಗ್ರಹ

ಹೈಕೋರ್ಟ್ ಹಾಲಿ ನ್ಯಾಯಧೀಶರ ತನಿಖೆಗೆ ಆಗ್ರಹ

"ಪಿಎಸ್‌ಐ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಗ ವಿಜಯೇಂದ್ರ ಹಾಗೂ ಸಚಿವ ಅಶ್ವಥ್‌ ನಾರಾಯಣ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಅಶ್ವಥ್‌ ನಾರಾಯಣ ಸಂಬಂಧಿಕರು ಮಾರ್ಕ್ಸ್‌ ತಿದ್ದುಪಡಿ ಮಾಡಿಕೊಂಡು ಆಯ್ಕೆಯಾಗಿದ್ದಾರೆ ಎಂಬ ಆರೋಪವಿದೆ. ಇವರಿಗೆಲ್ಲ ರಕ್ಷಣೆ ನೀಡುತ್ತಿರುವ ಮುಖ್ಯಮಂತ್ರಿಗಳೇ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಮತ್ತು ಈ ಹಗರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು" ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

 ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು

ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು

"ಸರ್ಕಾರದ ನಿರ್ದೇಶನ ಇಲ್ಲದೆ ಎಡಿಜಿಪಿ ಅವರು ಓಎಮ್‌ಆರ್‌ ಶೀಟ್‌ ಅನ್ನು ಇಷ್ಟು ರಾಜಾರೋಷವಾಗಿ ತಿದ್ದುಪಡಿ ಮಾಡಲು ಸಾಧ್ಯವೇ?. ಕೋಟ್ಯಾಂತರ ರೂಪಾಯಿ ಲಂಚ ಪಡೆಯಲು ಸಾಧ್ಯವೇ?. ನ್ಯಾಯಯುತವಾಗಿ ಪರೀಕ್ಷೆ ಬರೆದು, ಆಯ್ಕೆಯಾದವರು ಇಂದು ಕಣ್ಣೀರು ಹಾಕುತ್ತಿದ್ದಾರೆ. ಈ ಹಿಂದೆ ನಡೆದಿರುವ ಎಫ್‌ಡಿಎ, ತೋಟಗಾರಿಕೆ, ಪಶು ಸಂಗೋಪನೆ, ಲೋಕೋಪಯೋಗಿ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್‌ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯನ್ನೂ ಒಳಗೊಂಡು ತನಿಖೆಯಾಗಬೇಕು. ಗೃಹ ಸಚಿವರನ್ನು ತಕ್ಷಣ ವಜಾ ಮಾಡಬೇಕು ಹಾಗೂ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು" ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

 ಕುಂಟು ನೆಪವನ್ನು ಒಪ್ಪದ ಮಾಜಿ ಸಿಎಂ

ಕುಂಟು ನೆಪವನ್ನು ಒಪ್ಪದ ಮಾಜಿ ಸಿಎಂ

"ಈಗ ಹಗರಣ ನಡೆದಿದೆ, ಮುಖ್ಯಮಂತ್ರಿಗಳ ಜವಾಬ್ದಾರಿ ಏನು?. ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿದ್ದರೆ ಆಗ ತನಿಖೆಗೆ ಒತ್ತಾಯ ಮಾಡಬೇಕಿತ್ತು. ಆಗ ಸುಮ್ಮನಿದ್ದು ಈಗ ಎಲ್ಲಾ ಕಾಲದಲ್ಲೂ ಹಗರಣ ನಡೆದಿದೆ ಎಂದು ಹೇಳಿ ತಪ್ಪಿಸಿಕೊಳ್ಳೋಕೆ ಆಗಲ್ಲ. ಸದನದಲ್ಲಿ ಯಾವುದೇ ಹಗರಣ ನಡೆದಿಲ್ಲ, ಅಕ್ರಮ ನಡೆದಿಲ್ಲ ಎಂದು ಹೇಳಿದ್ದರು, ಈಗ ನೋಡಿದರೆ ಹಲವರು ಜೈಲಿಗೆ ಹೋಗಿದ್ದಾರೆ. ಇಷ್ಟೆಲ್ಲಾ ಆದಮೇಲೆ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಹೇಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯುತ್ತಾರೆ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Recommended Video

   ಚಂದ್ರಶೇಖರ್ ಗುರೂಜಿ ಹಂತಕರನ್ನ ಪೊಲೀಸರು ಚೇಸ್ ಮಾಡಿದ್ದು ಹೀಗೆ.. | OneIndia Kannada
   English summary
   Karnataka leader of opposition Siddaramaiah demand for the judicial probe on PSI Recruitment Scam. He also said that answer should come out on allegations against Yeddyurappa's son Vijayendra and minister Aswath Narayan, Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X