ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಎಸ್ಐ ಹಗರಣ: ಆರೋಪ ಮಾಡುವವರು ದಾಖಲೆ ಮುಂದಿಟ್ಟು ಮಾತಾಡಲಿ: ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಮೇ 7: ''ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಯಾರು ಏನೇ ಹೇಳಿಕೆ ಕೊಟ್ಟರು ಅದಕ್ಕೆ ತಕ್ಕಂತೆ ದಾಖಲೆಗಳನ್ನು ಒದಗಿಸುವುದು ಅವರ ಕರ್ತವ್ಯವಾಗಿರುತ್ತದೆ,'' ಎಂದು ಸಿಎಂ ಬವರಾಜ ಬೊಮ್ಮಾಯಿ ಹೇಳಿದರು. ಆರ್ ಟಿ ನಗರದ ಅವರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಹಗರಣದಲ್ಲಿ ವಿರೋಧ ಪಕ್ಷದವರು ಯಾರೇ ಆರೋಪ ಮಾಡಿದ್ರು ಅದಕ್ಕೆ ತಕ್ಕಂತೆ ಸಾಕ್ಷ್ಯ ಒದಗಿಸಿದರೆ ಅವರು ನೀಡುವ ಸಾಕ್ಷಿಗಳ ಆಧಾರದ ಮೇಲೆ ತನಿಖೆಗೆ ಅಳವಡಿಸಿಕೊಳ್ಳುವುದಾಗಿ ತಿಳಿಸಿದರು.

PSI ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, 'ಕುಮಾರಸ್ವಾಮಿ ಅವರ ಆರೋಪಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಿದರೆ ತನಿಖೆಗೆ ಒಳಪಡಿಸುತ್ತೇವೆ' ಎಂದರು.

ಪಿಎಸ್ಐ ಅಕ್ರಮದ ಹಿಂದಿನ ಕಿಂಗ್ ಪಿನ್ ಯಾರು: ಬಲ್ಲವರು ಇವರೊಬ್ಬರೇ!ಪಿಎಸ್ಐ ಅಕ್ರಮದ ಹಿಂದಿನ ಕಿಂಗ್ ಪಿನ್ ಯಾರು: ಬಲ್ಲವರು ಇವರೊಬ್ಬರೇ!

ಖರ್ಗೆಯವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ..!

ಮಾಜಿ ಸಚಿವ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಖರ್ಗೆ ಮೂಲ ಕಾಂಗ್ರೆಸ್ಸಿಗರು ಅವರಿಗೆ ಇದೆಲ್ಲಾ ಕರಗತ ಆಗಿದೆ. ಖರ್ಗೆಯವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು. ಇನ್ನೂ ಕೆಪಿಸಿಸಿ ಅಧ್ಯಕ್ಷ ಹಾಗೂ ಸಂಸದ ಡಿ.ಕೆ ಸುರೇಶ್ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಸಂತ್ರಸ್ತರು ದೂರು ನೀಡಿದರೆ ತನಿಖೆ ಯಾಗುತ್ತದೆ ಮಾಡುವುದಾಗಿ ಹೇಳಿದರು.

PSI scam: CM Bommai reacts to Kumaraswamy and Priyank Kharge tweets

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ..!

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಅದರ ಪ್ರಭಾವದಿಂದ ಹಲವಾರು ಕ್ಷೇತ್ರಗಳಲ್ಲಿ ಪ್ರಥಮ ಬಾರಿಗೆ ವಿಜಯವನ್ನು ಸಾಧಿಸುವ ಅವಕಾಶಗಳು ಸಿಕ್ಕಿವೆ. ಪಕ್ಷದ ಸಿದ್ದಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಜನ ಬಿಜೆಪಿ ಸೇರಲಿದ್ದಾರೆ. ಯಾರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಬೇಕು ಎಂಬುದನ್ನು ಪಕ್ಷದ ಆಯಾ ಜಿಲ್ಲಾ ಮತ್ತು ರಾಜ್ಯ ಘಟಕ ನೋಡಿಕೊಳ್ಳುತ್ತದೆ ಎಂದು ತಿಳಿಸಿದರು.

English summary
PSI scam: CM Basavaraj Bommai responds to tweet by former CM HD Kumaraswamy and Congress MLA Priyanka Kharge, know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X