• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ದಿನಾಂಕ ಪ್ರಕಟ

|

ಬೆಂಗಳೂರು, ಜುಲೈ 21: ಪಿಯುಸಿ ಉಪನ್ಯಾಸಕರ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಕೌನ್ಸಿಲಿಂಗ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮರು ಚಾಲನೆ ನೀಡಿದ್ದು, ಕೌನ್ಸಿಲಿಂಗ್ ದಿನಾಂಕ ಸಹ ಪ್ರಕಟ ಮಾಡಿದೆ.

   Oxford Corona Vaccine is Good News for India | Oneindia Kannada

   ಆಗಸ್ಟ್ 10 ರಿಂದ ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

   ಸಿದ್ದರಾಮಯ್ಯ ಟ್ವೀಟ್ ಬೆನ್ನಲ್ಲೆ ಪಿಯುಸಿ ಉಪನ್ಯಾಸಕರಿಗೆ ಗುಡ್ ನ್ಯೂಸ್

   ಈ ಕುರಿತು ಟ್ವೀಟ್ ಮಾಡಿರುವ ಸುರೇಶ್ ಕುಮಾರ್ ''ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ದಿನಾಂಕ ನಿರ್ಧರಿಸುವ ಕುರಿತು ಇಂದು ಶಿಕ್ಷಣ ಇಲಾಖೆಯ ಪ್ರಧಾನ‌ ಕಾರ್ಯದರ್ಶಿ ಹಾಗೂ ಪದವಿಪೂರ್ವ ಮಂಡಳಿಯ ನಿರ್ದೇಶಕರ ಜೊತೆ ಸಭೆ ಸೇರಿ ಚರ್ಚಿಸಲಾಯಿತು. ದೀರ್ಘ ಸಮಾಲೋಚನೆ ನಂತರ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ‌ ನೇಮಕಾತಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು 10.08.2020 ರಂದು ಆರಂಭಿಸಲು ನಿರ್ಧರಿಸಲಾಗಿದೆ'' ಎಂದು ತಿಳಿಸಿದ್ದಾರೆ.

   'ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯ‌ಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ, ನೇಮಕಾತಿಯ ಕೌನ್ಸೆಲಿಂಗ್ ಪ್ರಕ್ರಿಯೆ ನಡೆದಿರಲಿಲ್ಲ.

   ಇತ್ತೀಚಿಗಷ್ಟೆ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಸುರೇಶ್ ಕುಮಾರ್ ವಿರುದ್ಧ ಟೀಕೆ ಮಾಡಿದ್ದರು. ಅದಾದ ಬಳಿಕ ಸುರೇಶ್ ಕುಮಾರ್ ಸಹ ಸ್ಥಗಿತಗೊಂಡಿದ್ದ ಕೌನ್ಸೆಲಿಂಗ್ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಿದ್ದಾರೆ.

   English summary
   The Counseling process for recruitment of PUC lecturers is scheduled to begin on august 10th says Eduation minister Suresh kumar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X