ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ವಿದ್ಯಾರ್ಥಿಯ ಅಪಹರಣ
ಬೆಂಗಳೂರು, ಜನವರಿ 23: ಖಾಸಗಿ ಶಾಲೆಯೊಂದರ ವಾರ್ಷಿಕೋತ್ಸವಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ, ಹಲ್ಲೆ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಶಾಲಾ ವಾರ್ಷಿಕೋತ್ಸವಕ್ಕೆ ವಿದ್ಯಾರ್ಥಿ ಹೋಗಿದ್ದ ವೇಳೆ ಓಮ್ನಿ ವ್ಯಾನ್‌ನಲ್ಲಿ ಬಂದ ದುಷ್ಕರ್ಮಿಗಳು ಆತನನ್ನು ಅಪಹರಿಸಿದ್ದರು. ಈ ಕುರಿತು ಲಕ್ಷ್ಮಣನಗರದಲ್ಲಿ ವಾಸವಿರುವ ವಿದ್ಯಾರ್ಥಿ, ರಾಜಗೋಪಾಲ ನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಥಮ ಮತ್ತು ದ್ವಿತೀಯ ಪಿಯುನಲ್ಲಿ ವ್ಯಾಸಂಗ ಮಾಡುತ್ತಿರುವ 6 ಬಾಲಕರನ್ನು ವಶಕ್ಕೆ ಪಡೆದಿದ್ದಾರೆ.
ಖಾಸಗಿ ಕಾಲಢಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸಂಜೆ 7.30ಕ್ಕ ಮನೆಯ ಸಮೀಪದಲ್ಲಿರುವ ಖಾಸಗಿ ಶಾಲೆಯ ವಾರ್ಷಿಕೋತ್ಸವಕ್ಕೆ ಹೋಗಿದ್ದ, ಅಲ್ಲಿ ಈತನಿಗೂ ಮತ್ತು ಸ್ನೇಹಿತರಿಗೂ ಕ್ಷುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಎರಡು ದಿನಗಳ ಬಳಿಕ ಕಾಳೇಜು ಮುಗಿಸಿಕೊಂಡು ಹೊರಬಂದ ಸಂತ್ರಸ್ತ ವಿದ್ಯಾರ್ಥಿ ಗೇಟಿನ ಬಳಿ ನಿಂತಿದ್ದ, ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ.











Click it and Unblock the Notifications