ಬೆಂಗಳೂರಿನಲ್ಲಿ ಬಾರ್ 1 ಗಂಟೆವರಗೆ ಓಪನ್!
ಬೆಂಗಳೂರು, ಮಾ.1 : ದೇಶದ ಪಬ್ ರಾಜಧಾನಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ರಾತ್ರಿ ಅವಧಿ ಇನ್ನು ಹೆಚ್ಚಾಗಲಿದೆ. ಉದ್ಯಾನ ನಗರಿಯಲ್ಲಿ ಮಧ್ಯರಾತ್ರಿ 1 ಗಂಟೆಯ ವರೆಗೆ ಪಬ್, ಬಾರ್, ರೆಸ್ಟೋರೆಂಟ್ ಕಾರ್ಯನಿರ್ವಹಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಸದ್ಯ ಶನಿವಾರ ಮತ್ತು ಭಾನುವಾರ ಮಾತ್ರ ಈ ಸೇವೆ ಲಭ್ಯವಿರುತ್ತದೆ.
ಸರ್ಕಾರ ಈ ನಿರ್ಧಾರದ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಕೆಜೆ ಜಾರ್ಜ್, ಕಾರ್ಪೋರೆಟ್ ಸಂಸ್ಥೆಗಳ ಬಹುದಿನಗಳ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾತ್ರಿ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ ಶುಕ್ರವಾರ ಮತ್ತು ಶನಿವಾರ ಮಾತ್ರ ಮಧ್ಯರಾತ್ರಿ 1 ಗಂಟೆಯ ವರೆಗೆ ಹೊಟೇಲ್, ಪಬ್, ಬಾರ್, ರೆಸ್ಟೋರೆಂಟ್‌ಗಳನ್ನು ತೆರೆದಿರಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

ಮೂರು ತಿಂಗಳ ತನಕ ಪ್ರಾಯೋಗಿಕವಾಗಿ ಈ ಸೇವೆ ಲಭ್ಯವಿರುತ್ತದೆ. ಈ ಹಂತದಲ್ಲಿ ಪರಿಣಾಮಗಳನ್ನು ಪರಿಶೀಲಿಸಿದ ನಂತರ ವಾರದ ಏಳು ದಿನವೂ ತಡರಾತ್ರಿವರೆಗೆ ಸೇವೆಯನ್ನು ವಿಸ್ತರಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗಳು ರಾತ್ರಿ 1 ಗಂಟೆವರೆಗೂ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಎಂದು ಬಿ ಪ್ಯಾಕ್ ಸ್ವಯಂ ಸೇವಾ ಸಂಸ್ಥೆ ಸಿಎಂಗೆ ವರದಿ ನೀಡಿದ್ದನ್ನು ಇಲ್ಲಿ ನೆನೆಪುಮಾಡಿಕೊಳ್ಳಬಹುದಾಗಿದೆ. [ಬೆಂಗಳೂರಿನ ರಾತ್ರಿ 'ಬಾರ್' ಅವಧಿ ಹೆಚ್ಚಾಗಲಿದೆ]
ಎಸ್.ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕಾವೇರಿ ಗಲಭೆಯ ಪರಿಣಾಮ ಎಲ್ಲಾ ಹೋಟೆಲ್, ಬಾರ್, ಪಬ್ ಗಳನ್ನು ರಾತ್ರಿ 11 ಗಂಟೆಗೆ ಮಚ್ಚಬೇಕು ಎಂದು ಆದೇಶ ನೀಡಲಾಗಿತ್ತು. ಜೆ.ಎಚ್.ಪಟೇಲ್ ಅವರ ಸರ್ಕಾರ ಈ ಆದೇಶವನ್ನು ಕಡ್ಡಾಯವಾಗಿ ಜಾರಿಗೊಳಿಸಿತ್ತು.[ಬಾರ್ ಗಳಿಗೆ ಬಂತು ವಸ್ತ್ರ ಸಂಹಿತೆ]
ಕಾಸ್ಮೋಪಾಲಿಟನ್ ಸಂಸ್ಕೃತಿ ಹೊಂದುವ ಮೂಲಕ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಉದ್ಯಾನ ನಗರಿಯಲ್ಲಿ ರಾತ್ರಿ 1 ಗಂಟೆವರೆಗೆ ಹೋಟೆಲ್, ಬಾರ್, ಪಬ್ ಗಳನ್ನು ತೆರೆದಿರುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಕೇಳಿಬಂದಿತ್ತು. ಸದ್ಯ ಪ್ರಾಯೋಗಿಕವಾಗಿ ಈ ಸೇವೆಗೆ ಸರ್ಕಾರ ಅಸ್ತು ಎಂದಿದೆ. [ಎಷ್ಟು ಹೊತ್ತಿನ ವರೆಗೆ ಪಬ್ ತೆರೆದಿರಬೇಕು]
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications