ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಶಿಫಾರಸು

ಬೆಂಗಳೂರು, ಫೆಬ್ರವರಿ 20 : ನಗರದ ನಾಲ್ಕು ದಿಕ್ಕುಗಳಲ್ಲೂ ಟ್ರಕ್ ಟರ್ಮಿನಲ್ ನಿರ್ಮಿಸುವಂತೆ ರಾಜ್ಯ ವಿಧಾನಮಂಡಲದ ಸಾರ್ವಜನಿಕ ಉದ್ಯಮಗಳ ಸಮಿತಿಯ 133 ನೇ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.

ವಿಧಾನ ಸಭೆಯಲ್ಲಿ ಮಂಡನೆಯಾದ ಸಾರ್ವಜನಿಕ ಉದ್ಯಮಗಳ ಸಮಿತಿ ವರದಿಯಲ್ಲಿ ಈ ಸಿಫಾರಸು ಮಾಡಲಾಗಿದೆ. ಬೆಂಗಳೂರು ನಗರಕ್ಕೆ ವಿವಿಧ ದಿಕ್ಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಾರಿಗಳು ಆಗಮಿಸಿರುವುದರಿಂದ ಟ್ರಕ್ ಟರ್ಮಿನಲ್ ನಿರ್ಮಿಸಲು ನಿವೇಶನಗಳನ್ನು ಒದಗಿಸುವುದು ಅವಶ್ಯಕವೆಂದು ಉಲ್ಲೇಖಿಸಲಾಗಿದೆ.

ಶಾಸಕ ಡಾ.ಎ.ಬಿ. ಮಾಲಕರೆಡ್ಡಿ ಅಧ್ಯಕ್ಷತೆಯ ಸಾರ್ವಜನಿಕ ಉದ್ಯಮಗಳ ಸಮಿತಿಯು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ನ ಕಾರ್ಯಾಚರಣೆಯಲ್ಲಿ ಗಮನಿಸಲಾದ ನ್ಯೂನತೆಗಳ ಬಗ್ಗೆ ವರದಿ ನೀಡಿದೆ. ಟ್ರಕ್ ಟರ್ಮಿನಲ್ ನಿರ್ಮಿಸಲು ಆರ್ಥಿಕ ಇಲಾಖೆ ಆದ್ಯತೆ ಮೇಲೆ ಅನುದಾನ ನೀಡಲು ಕ್ರಮ ಕೈಗೊಳ್ಳಬೇಕು, ಈ ಅನುದಾನ ವಿಳಂಬವಾಗದಂತೆ ರಾಜ್ಯದ ಹಾಗೂ ನಗರದ ವಿವಿಧೆಡೆಗಳಲ್ಲಿ ಟ್ರಕ್ ಟರ್ಮಿನಲ್‌ಗಳನ್ನು ನಿರ್ಮಿಸಬೇಕು.

Public Accounts committee recommends for 4 truck bay in Bengaluru

ಸಾರಿಗೆ ಇಲಾಖೆಯು ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ನಿವೇಶನ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸಮಿತಿಯ ಶಿಫಾರಸ್ಸಿನಲ್ಲಿ ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+