ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ: ಪೋಷಕರೇ ಎಚ್ಚರ

|
Google Oneindia Kannada News

ಬೆಂಗಳೂರು, ಡಿಸೆಂಬರ್.18: ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ ಬೇಡವೋ. ರಾಜ್ಯದಲ್ಲಿ ಇದೊಂದು ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ತೀರ್ಮಾನಕ್ಕೆ ಮಕ್ಕಳ ಹಕ್ಕುಗಳ ಆಯೋಗ ಆಕ್ಷೇಪಿಸಿದ್ದು, ಇಂದು ಈ ಕುರಿತು ಮಹತ್ವದ ಸಭೆ ಕರೆಯಲಾಗಿದೆ.

10ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆಯನ್ನು ಎದುರಿಸುವ ಮಕ್ಕಳಲ್ಲಿ ಭಯದ ಮನಸ್ಥಿತಿಯನ್ನು ಹೋಗಲಾಡಿಸಬೇಕು. ಈ ನಿಟ್ಟಿನಲ್ಲಿ ಏಳನೇ ತರಗತಿಯಲ್ಲೇ ಪಬ್ಲಿಕ್ ಪರೀಕ್ಷೆ ನಡೆಸಬೇಕು. ಇದರಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ ಹಾಗೂ ಪರೀಕ್ಷೆ ಕುರಿತು ಇರುವ ಭಯವನ್ನು ತೊಡೆದು ಹಾಕಲು ಸಾಧ್ಯವಾಗುತ್ತದೆ.

7 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಯೋದು ಅನುಮಾನ7 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಯೋದು ಅನುಮಾನ

ಮಕ್ಕಳಲ್ಲಿ ಪರೀಕ್ಷೆ ಬಗ್ಗೆ ಆತಂಕವಿರಬಾರದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಿತ್ತು. ಆದರೆ, ಸರ್ಕಾರ ರಚಿಸಿದ ಪ್ರಸ್ತಾವನೆಗೆ ಮಕ್ಕಳ ಹಕ್ಕುಗಳ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು. ಹೀಗಾಗಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಆಯೋಗದ ಅಧಿಕಾರಿಗಳ ನಡುವೆ ಸಭೆ ನಡೆಯಲಿದೆ.

Public Exams For 7th Class Students In Karnataka

"ಪಬ್ಲಿಕ್ ಪರೀಕ್ಷೆ ನಿಜ, ಆದರೆ ಫೇಲ್ ಮಾಡಲ್ಲ"!

ಮುಂದಿನ ಶೈಕ್ಷಣಿಕ ಸಾಲಿನಿಂದಲೇ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸರ್ಕಾರ ತೀರ್ಮನಿಸಿದೆ. ಮೊದಲಿಗೆ ಪ್ರಾಯೋಗಿಕವಾಗಿ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ. ಆದರೆ, ಮಕ್ಕಳನ್ನು ಫೇಲ್ ಮಾಡುವುದಿಲ್ಲ. ಇದರ ಬಗ್ಗೆ ಯಾವುದೇ ಆತಂಕ ಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದರು.

ಪ್ರಾಥಮಿಕ ಹಂತದಲ್ಲೇ ಪರೀಕ್ಷೆಗಳ ಬಗ್ಗೆ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಬೇಕು. ಈ ನಿಟ್ಟಿನಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ ಎಂದು ಸಚಿವರು ಈ ಮೊದಲು ಸ್ಪಷ್ಟನೆ ನೀಡಿದ್ದರು. ಆದರೆ ಮಕ್ಕಳ ಹಕ್ಕುಗಳ ಆಯೋಗ ಸರ್ಕಾರದ ಪ್ರಸ್ತಾವನೆಗೆ ಅಡ್ಡಿಪಡಿಸಿದ್ದು, ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದಿನ ಸಭೆಯ ಬಳಿಕ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ ಬೇಡವೋ ಎಂಬುದು ತೀರ್ಮಾನವಾಗಲಿದೆ.

English summary
Public Exams For 7th Class Students In Karnataka. Final Decision After Government Officers And Child Rights Commission Meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X