ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಫೆ.22ರಂದು ಪಲ್ಸ್ ಪೊಲೀಯೋ ಕಾರ್ಯಕ್ರಮ

|
Google Oneindia Kannada News

ಬೆಂಗಳೂರು, ಫೆ. 12 : ಬೆಂಗಳೂರಿನಲ್ಲಿ ಫೆಬ್ರವರಿ 22 ರಂದು ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಒಟ್ಟು 6,04,483 ಮಕ್ಕಳಿಗೆ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬೆಟ್ಟಸ್ವಾಮಿ ಹೇಳಿದ್ದಾರೆ.

ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಫೆಬ್ರವರಿ 21 ರಂದು ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲು ಶಿಕ್ಷಕರನ್ನು ನಿಯೋಜಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

Pulse Polio

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಕಾರ್ಯದರ್ಶಿಗಳು ಮುಖ್ಯ ಲಸಿಕಾ ಕೇಂದ್ರಗಳಲ್ಲಿ ಇದ್ದು, 5 ವರ್ಷದ ಒಳಗಿನ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆ ತರುವ ವ್ಯವಸ್ಥೆ ಮಾಡಬೇಕು. ಲಸಿಕಾ ದಿನ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಪಾಲ್ಗೊಳ್ಳಬೇಕು. ಪೋಲಿಯೋ ಕಾರ್ಯಕ್ರಮದ ಮಹತ್ವದ ಬಗ್ಗೆ ತಾಯಂದಿರ ಸಭೆ ಕರೆದು ಮಾಹಿತಿ ನೀಡಬೇಕು ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರತಿದಿನ ವಲಸೆ ಬರುವವರಿದ್ದು, ಹೊಸದಾಗಿ ಲಸಿಕೆ ಹಾಕಲು ಎಲ್ಲಾ ವಾರ್ಡ್‍ಗಳಲ್ಲಿ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಜನವರಿ ತಿಂಗಳಿನಲ್ಲಿ ನಡೆದ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಒಟ್ಟು 4,76,448 ಮಕ್ಕಗಳಿಗೆ ಲಸಿಕೆ ಹಾಕಲಾಗಿತ್ತು.

English summary
Bangalore Zilla Panchayat and The Bruhat Bangalore Mahanagara Palike (BBMP) is all set for the pulse polio drive on February 22, Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X