"ಲೇ ಜಮೀರ್" ಎಂದ ಪುನೀತ್‌ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!

ಸಚಿವ ಜಮೀರ್‌ ಅಹಮದ್‌ ಬಗ್ಗೆ ಬೇಕಾಬಿಟ್ಟಿ ಮಾತನಾಡಿದ್ದ ಹಿಂದೂ ಮುಖಂಡ ಪುನೀತ್‌ ಕೆರೆಹಳ್ಳಿಗೆ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಗುನ್ನಾ ಕೊಟ್ಟಿದ್ದಾರೆ. ಜಮೀರ್‌ ಅಹಮದ್‌ ಖಾನ್‌ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್‌ ಮಾಡಿದ್ದ ಪುನೀತ್‌ ಕೆರೆಹಳ್ಳಿ ಅವರು ಬೇಕಾಬಿಟ್ಟಿ ಮಾತನಾಡಿದ್ದರು. ಈ ಸಂಬಂಧ ವಿಡಿಯೋವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪುನೀತ್‌. ಜಮೀರ್‌ ಅವರ ಬಗ್ಗೆ ಏ ಜಮೀರ್ ಎಂದು ಏಕವಚನದಲ್ಲೇ ಮಾತನಾಡಿದ್ದರು.

ಇದೀಗ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Puneeth Kerehalli Arrested controversially about Minister Jameer Ahmed Khan

ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಬುಧವಾರ ರಾತ್ರೋರಾತ್ರಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.

ನವೆಂಬರ್ 11 ರಂದು ಪುನೀತ್ ಕೆರೆಹಳ್ಳಿ ಅವರು ತಮ್ಮ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್ ಲಿಂಕ್‌ನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿದ್ದಾರೆ. ಧರ್ಮಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಕಾರಿ ಹೇಳಿಕೆ ನೀಡಿರುತ್ತಾರೆ. ಪದೇ ಪದೇ ಅವಾಚ್ಯ ಶಬ್ದಗಳಿಂದ ಸಚಿವರನ್ನು ನಿಂದಿಸಿರುತ್ತಾರೆ. ಜತೆಗೆ ಪ್ರಾಣ ಬೆದರಿಕೆ ಸಹ ಹಾಕಿರುತ್ತಾರೆ. ಹೀಗಾಗಿ, ಕೂಡಲೇ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ಸಚಿವ ಜಮೀರ್ ಅಹಮದ್‌ ಖಾನ್ ಬಗ್ಗೆ ಈಚೆಗೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ರಿಯಾಕ್ಷನ್‌ ವಿಡಿಯೋವನ್ನು ಪುನೀತ್‌ ಮಾಡಿದ್ದರು.

ಆ ವಿಡಿಯೋದಲ್ಲಿ ಲೇ ಜಮೀರ್‌ ಅಹಮದ್‌ ಖಾನ್‌, ಕುಮಾರಸ್ವಾಮಿ ಅವರನ್ನು ಕರಿಯಾ ಅಂದ ನೀನು ನನ್ನ ಈ ಮಾತುಗಳನ್ನು ಸರಿಯಾಗಿ ಕೇಳಿಸಿಕೊ ಎಂದಿದ್ದ. ಆ ವಿಡಿಯೋದಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಲಾಗಿತ್ತು. ನಮ್ಮದೇ ನಾಡಿನಲ್ಲಿ, ನಮ್ಮದೇ ಜನರ ಮುಂದೆ ಅದೂ ನಮ್ಮ ನಾಯಕರ ಬಗ್ಗೆ ಅವರ ಬಣ್ಣವನ್ನು ಹಂಗಿಸಿ ಮಾತನಾಡಿದ್ದೀಯಾ. ನಿನಗೆಷ್ಟು ದುರಹಂಕಾರ ಹಾಗೂ ದರ್ಪ ಬಂತ ನಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ವಿಡಿಯೋ ವೈರಲ್‌ ಆಗಿತ್ತು.

ಆ ವಿಡಿಯೋದಲ್ಲಿ ಪದೇ ಪದೇ ತುಕಾ* ಎನ್ನುವ ಪದವನ್ನು ಬಳಸಲಾಗಿತ್ತು. ಅಲ್ಲದೇ ನಾವು ಹಿಂದೂಗಳು ಕಪ್ಪಗಿದ್ದೇವೆ. ನಾವು ಪೂಜಿಸುವ ಕೃಷ್ಣ ಕಪ್ಪಗಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ ಅನ್ಯಧರ್ಮದ ಬಗ್ಗೆಯೂ ಉಲ್ಲೇಖ ಮಾಡಿ ತೀರ ಆಕ್ಷೇಪಾರ್ಹ ಪದಗಳನ್ನು ಬಳಸಿ ವಿಡಿಯೋ ಮಾಡಲಾಗಿತ್ತು. ಹಿಂದೂಗಳ ವರ್ಣದ ಬಗ್ಗೆ ಮಾತಾಡ್ತಿದ್ದೀಯಾ, ಅರೆಬಿಕ್ ತ* ಇದು ಕರುನಾಡು ಕಣೋ.. ಕಪ್ಪು ಮಣ್ಣಿನ ನಾಡುಕಣೋ ಎನ್ನುವುದು ಸೇರಿದಂತೆ ಹಲವು ಮಾತು ಅದರಲ್ಲಿ ಇತ್ತು.ಸಚಿವ ಜಮೀರ್‌ಗೆ ನೇರವಾಗಿ ಸವಾಲು ಸಹ ಹಾಕಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+