Puneeth Kerehalli Arrest: ಬೆಂಗಳೂರಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ ವೇಳೆ ಪುನೀತ್ ಕೆರೆಹಳ್ಳಿ ಅರೆಸ್ಟ್
Puneeth Kerehalli Arrest: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಪುನೀತ್ ಕೆರೆಹಳ್ಳಿ ಅವರ ಪತ್ತೆಗಿಳಿದಿದ್ದು, ಈ ವೇಳೆ ಮತ್ತೆ ಪೊಲೀಸರ ಅತಿಥಿಯಾಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆಂಬ ಆರೋಪದ ಮೇರೆಗೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು.

ಪುನೀತ್ ಕೆರೆಹಳ್ಳಿ ಅರೆಸ್ಟ್: ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆ, ಬಾಗಲಗುಂಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪುನೀತ್ ಕೆರೆಹಳ್ಳಿ ವಿರುದ್ಧ ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲು ಆಗಿವೆ.
ಬಾಗಲಗುಂಟೆ ಪೊಲೀಸರಿಂದ ಬಂಧನ: ಈ ಪ್ರಕರಣಗಳ ಸಂಬಂಧ ಹಲವು ಬಾರಿ ನೋಟಿಸ್ ನೀಡಿದ್ದರೂ ಪುನೀತ್ ಕೆರೆಹಳ್ಳಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದೇ ಕಾರಣದಿಂದ ಬಾಗಲಗುಂಟೆ ಠಾಣೆಯ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದಕ್ಕೂ ಮುನ್ನ, ಡಿಸೆಂಬರ್ 18ರಂದು ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿಯೂ ಪುನೀತ್ ಕೆರೆಹಳ್ಳಿ ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು. ಬಾಂಗ್ಲಾದೇಶದ ಅಕ್ರಮ ವಲಸಿಗರೆಂದು ಆರೋಪಿಸಿ ಶೆಡ್‌ಗಳಿಗೆ ತೆರಳಿ ದಾಖಲೆ ತೋರಿಸುವಂತೆ ದಾಂಧಲೆ ನಡೆಸಿದ ಆರೋಪ ಅವರ ಮೇಲೆ ದಾಖಲಾಗಿತ್ತು.
ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂದು ಹೇಳಿ, ಪುನೀತ್ ಕೆರೆಹಳ್ಳಿ ನೇತೃತ್ವದ ತಂಡವು ಕೆಲ ಶೆಡ್‌ಗಳಿಗೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿತ್ತು. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಶೆಡ್‌ಗಳಿಗೆ ಅನಧಿಕೃತವಾಗಿ ಪ್ರವೇಶಿಸಿ ಗಲಾಟೆ ನಡೆಸಿದ್ದಾರೆ ಎಂದು ಸಿದ್ದೇಶ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಹೊರಗಡೆ ಬಂದಿದ್ದರು. ಇನ್ನೂ ಅಕ್ರಮ ವಲಸಿಗರ ವಿಚಾರದಲ್ಲಿ ಸ್ವಯಂ ಪ್ರೇರಿತ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಮೇಲೆ ಸರದಿಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ. ಅವರ ಚಟುವಟಿಕೆಗಳು ಇದೀಗ ಮತ್ತೊಮ್ಮೆ ಭಾರೀ ಚರ್ಚೆ ಹುಟ್ಟುಹಾಕಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications