ACP Chandan: ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುತ್ತೇನೆ ಎಂದ ಪುನೀತ್ ಕೆರೆಹಳ್ಳಿ; ಕಾರಣವೇನು?
ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಇದೀಗ ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಪೊಲೀಸರು ತನ್ನ ಮೇಲೆ ದೌರ್ಜನ್ಯ ಎಸಗಿದ್ದು, ಅದರ ಸಿಸಿಟಿವಿ ದೃಶ್ಯಾವಳಿಗಳನ್ನು ಕೊಡುತ್ತಿಲ್ಲ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಕೊಡುವವರೆಗೂ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಆತನ ಬೆಂಬಲಿಗರು ರಾಜಸ್ಥಾನದಿಂದ ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನು ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಂಸ ತುಂಬಿದ್ದ ಬಾಕ್ಸ್‌ಗಳನ್ನು ತಡೆದಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳ ನಡುವೆ ಮಾತಿನ ಚಕಮಕಿ ನಡೆದಿತ್ತು.

ಮಾಂಸ ಮಾರಾಟಗಾರರು ಮತ್ತು ಹಿಂದೂ ಸಂಘಟನೆಗಳ ನಡುವೆ ಮಾತಿನ ಚಕಮಕಿ ನಡೆಯುವಾಗ ಪೊಲೀಸರು ಮಧ್ಯಪ್ರವೇಶ ಮಾಡಿದ್ದರು. ಈ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು.
ಪೊಲೀಸರ ಮೇಲೆ ಕೆರೆಹಳ್ಳಿ ಆರೋಪ
ತಪ್ಪು ಮಾಡದೇ ಇದ್ದರೂ ನನ್ನನ್ನು ಉದ್ದೇಶಪೂರ್ವಕವಾಗಿ ಪೊಲೀಸರು ಬಂಧಿಸಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದರು. ಅಲ್ಲದೆ ಎಸಿಪಿ ಚಂದನ್ ಕುಮಾರ್ ದಿನಾಂಕ 26/07/2024 ರಂದು ರಾತ್ರಿ ನನ್ನ ಮೇಲೆ ಹಲ್ಲೆ ಮಾಡಿ ನನ್ನ ಬಟ್ಟೆ ಬಿಚ್ಚಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು.
ACP ಚಂದನ್ ಕುಮಾರ್ ದಿನಾಂಕ 26/07/2024 ರಂದು ರಾತ್ರಿ ನನ್ನ ಮೇಲೆ ಹಲ್ಲೆ ಮಾಡಿ ನನ್ನ ಬಟ್ಟೆ ಬಿಚ್ಚಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಕಾಟನ್ ಪೇಟೆ ಪೊಲೀಸ್ ಠಾಣ ಕೊಠಡಿಯಲ್ಲಿ C C Camara ಇದ್ದು ಅದರ CC TV ದೃಶ್ಯಗಳನ್ನು ಮಾಹಿತಿ ಹಕ್ಕಿನಲ್ಲಿ ಕೇಳಿದರೆ ಬೇಕೆಂದೆ 25 ದಿನಗಳ ವರೆಗೂ ಸಮಯ ವ್ಯರ್ಥ ಮಾಡಿ ಈಗ ಅದು ನಮ್ಮ ವ್ಯಾಪ್ತಿಗೆ… pic.twitter.com/z4Teq4lxL6
— Puneeth Kerehalli (@Puneeth74353549) September 3, 2024
ಕಾಟನ್ ಪೇಟೆ ಪೊಲೀಸ್ ಠಾಣೆಯ ಕೊಠಡಿಯಲ್ಲಿ ಸಿಸಿ ಕ್ಯಾಮೆರಾ ಕೂಡ ಇದ್ದು ಅದರ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಬೇಕು ಎಂದು ಮಾಹಿತಿ ಹಕ್ಕಿನಲ್ಲಿ ಕೇಳಿದರೆ 25 ದಿನಗಳ ಕಾಲ ಕಾಯಿಸಿ ಇದಿಗ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಸಹಾಯಕ ಆಯುಕ್ತರು ಬ್ಯಾಟರಾಯನಪುರ ಅವರ ಕಚೇರಿಗೆ ಆರ್ ಟಿಐ ಅರ್ಜಿ ಹಾಕಿ ಪಡೆಯುವಂತೆ ತಿಳಿಸಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
ಪೊಲೀಸರು ಬೇಕೆಂದ ತಡ ಮಾಡುತ್ತಿದ್ದು ವಿಡಿಯೋ ಡಿಲೀಟ್ ಮಾಡುವ ಕುತಂತ್ರವಾಗಿದೆ. ತಪ್ಪು ಮಾಡಿಲ್ಲ ಎನ್ನುವುದಾದರೆ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ಭಯ ಪಡುತ್ತಿರುವುದೇಕೆ ಎಂದಿರುವ ಅವರು ಸಿಸಿಟಿವಿ ದೃಶ್ಯಗಳನ್ನು ನೀಡುವವರೆಗೂ ಅಹೋರಾತ್ರಿ ಧರಣಿ ಮಾಡಬೇಕು ಎಂದು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.
ಎಸಿಪಿ ಚಂದನ್ ಕುಮಾರ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್‌ರನ್ನು ಬಂಧಿಸಿ ಭಾರಿ ಸುದ್ದಿ ಮಾಡಿದ್ದರು. ಎಂತಹ ರಾಜಕೀಯ ಒತ್ತಡ ಬಂದರೂ ದರ್ಶನ್‌ರನ್ನು ಬಂಧಿಸುವ ಮೂಲಕ ದಕ್ಷ ಪೊಲೀಸ್ ಅಧಿಕಾರಿ ಎನಿಸಿಕೊಂಡಿದ್ದಾರೆ. ಇದೀಗ ಪುನೀತ್ ಕೆರೆಹಳ್ಳಿ ಎಸಿಪಿ ಚಂದನ್ ವಿರುದ್ಧವೇ ಆರೋಪ ಮಾಡುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ.












Click it and Unblock the Notifications