ಕೋವಿಡ್-19: 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್
ಬೆಂಗಳೂರು, ಮಾರ್ಚ್ 31: ಕನ್ನಡ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ಕೊಟ್ಟು, 50 ಲಕ್ಷ ರೂಪಾಯಿ ಚೆಕ್ ಅನ್ನು ಪುನೀತ್ ರಾಜ್ ಕುಮಾರ್ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಪುನೀತ್ ರಾಜ್ ಕುಮಾರ್, ''ಈಗಿರುವ ಪರಿಸ್ಥಿತಿಯಲ್ಲಿ ಸರ್ಕಾರ ಹೇಳುವುದನ್ನು ನಾವು ಕೇಳಲೇಬೇಕು. ಸಾಮಾಜಿಕ ಅಂತರವನ್ನು ನಾವು ಕಾಯ್ದುಕೊಳ್ಳಲೇಬೇಕು. ಮನೆಯಲ್ಲಿರುವುದಕ್ಕೆ ಕಷ್ಟ ಆಗಬಹುದು. ಆದರೆ, ಸ್ವಲ್ಪ ದಿನ ನಾವು ಇದನ್ನು ತಡೆದುಕೊಳ್ಳಬೇಕು. ಕೋವಿಡ್-19 ತಡೆಗಟ್ಟಲು ನಾವೆಲ್ಲರೂ ಕೈಜೋಡಿಸಬೇಕು'' ಎಂದರು.
ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು #ಕೋವಿಡ್19 'ಮುಖ್ಯಮಂತ್ರಿಗಳ ಪರಿಹಾರ ನಿಧಿ' ಗೆ 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು.
— CM of Karnataka (@CMofKarnataka) March 31, 2020
ನಂತರ ಮಾತನಾಡಿ, ಸರ್ಕಾರ ತೆಗೆದುಕೊಂಡಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕೆಂದು ಮನವಿ ಮಾಡಿದರು.@BSYBJP @PuneethRajkumar #KarnatakaFightsCorona #SocialDistancing pic.twitter.com/f2kZPIwGMQ
ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೈಗಾರಿಕೋದ್ಯಮಿಗಳು, ಕಾರ್ಪೊರೇಟ್ ಉದ್ಯಮಿಗಳು ಸರ್ಕಾರದ ಜೊತೆಗೆ ಕೈಜೋಡಿಸಿ, ಧನ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಳಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಪುನೀತ್ ರಾಜ್ ಕುಮಾರ್ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.












Click it and Unblock the Notifications