ಬೆಂಗಳೂರಿನ ಎಲ್ಲಾ ರಸ್ತೆಗಳಿಗೆ ಕ್ಯೂಆರ್ ಕೋಡ್, ಉದ್ದೇಶವೇನು ವಿವರ ತಿಳಿಯಿರಿ
ಬೆಂಗಳೂರು, ಅಕ್ಟೋಬರ್ 11: ಇನ್ನು ಬೆಂಗಳೂರು ನಗರದ ಎಲ್ಲಾ ರಸ್ತೆಗಳಲ್ಲಿ ಕ್ಯೂಆರ್ ಕೋಡ್ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ಈ ಕ್ಯೂಆರ್ ಕೋಡ್‌ಗಳು ರಸ್ತೆ, ಮಾರ್ಗದಲ್ಲಿ ನಡೆಸಲಾದ ಸಿವಿಲ್ ಕೆಲಸ ಮತ್ತು ಹತ್ತಿರದ ಪ್ರದೇಶಗಳಲ್ಲಿ ಮಾಹಿತಿಯನ್ನು ನೀಡುತ್ತವೆ. ಈ ಯೋಜನೆಯು ರಸ್ತೆ ಗುಣಮಟ್ಟ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಬಗ್ಗೆ ಎಲ್ಲಾ ಆತಂಕಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಈ ಕ್ಯೂಆರ್ ಕೋಡ್‌ಗಳು ಸದರಿ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಎಲ್ಲಾ ಪ್ರಮುಖ ವಿವರಗಳನ್ನು ಒದಗಿಸುತ್ತವೆ. ಈ ಮಾಹಿತಿಯನ್ನು ಒದಗಿಸುವ ಮೂಲಕ ಸಾರ್ವಜನಿಕರ ಅನುಕೂಲಕ್ಕಾಗಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಬೆಂಗಳೂರಿನ ರಸ್ತೆಗಳ ಗುಣಮಟ್ಟದ ಬಗ್ಗೆ ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸುವ್ಯವಸ್ಥಿತಗೊಳಿಸಲು ಕಟ್ಟಡ ಯೋಜನೆ ಅನುಮೋದನೆಗಾಗಿ ಸ್ವಯಂಚಾಲಿತ ವ್ಯವಸ್ಥೆಯನ್ನು ಹೊರತರಲು ಸರ್ಕಾರ ಯೋಜಿಸುತ್ತಿದೆ. ಸೋಮವಾರ ನಡೆದ 'ಬ್ರಾಂಡ್ ಬೆಂಗಳೂರು' ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಘೋಷಣೆ ಮಾಡಿದ್ದಾರೆ.
ಆಸ್ತಿ ತೆರಿಗೆಯ ಸ್ವಯಂ ಮೌಲ್ಯಮಾಪನದ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿ, ಆಸ್ತಿ ಮಾಲೀಕರು ತಮ್ಮ ಆಸ್ತಿಯನ್ನು ನಿಖರವಾಗಿ ಘೋಷಿಸುತ್ತಾರೆ ಎಂಬ ವಿಶ್ವಾಸದಿಂದ ಈ ಯೋಜನೆಯನ್ನು ಪರಿಚಯಿಸಲಾಗಿದೆ. ಆದರೆ ಇದು ಕೇವಲ 3,000 ಕೋಟಿ ರೂಪಾಯಿ ಆಸ್ತಿ ತೆರಿಗೆ ಆದಾಯವನ್ನು ಗಳಿಸಿದೆ ಎಂದು ಹೇಳಿದರು.
ಪ್ರಸ್ತುತ ವ್ಯವಸ್ಥೆಯಲ್ಲಿ ಸಂಭಾವ್ಯ ಸಂಪನ್ಮೂಲ ಸೋರಿಕೆಯ ಬಗ್ಗೆ ಅವರು ತಮ್ಮ ಆತಂಕವನ್ನು ವ್ಯಕ್ತಪಡಿಸಿದರು. ಈ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನ ನಾಗರಿಕ ಸಂಸ್ಥೆ ಬಿಬಿಎಂಪಿಯು ಸದ್ಯದಲ್ಲಿಯೇ ಆಸ್ತಿ ತೆರಿಗೆ ಸಂಗ್ರಹವನ್ನು ಸುಧಾರಿಸುವತ್ತ ಗಮನ ಹರಿಸಲಿದೆ ಎಂದು ಹೇಳಿದರು.
ರಸ್ತೆ ಗುಂಡಿಗಳ ಸಮಸ್ಯೆಗೆ ಪರಿಹಾರ ಸೂಚಿಸಿದ ಶಿವಕುಮಾರ್, ಬಿಬಿಎಂಪಿ ಹಾಗೂ ಸಂಚಾರ ಪೊಲೀಸರು ಒಟ್ಟಾಗಿ ಸಮಸ್ಯೆ ಬಗೆಹರಿಸಲು ಶ್ರಮಿಸುತ್ತಿದ್ದಾರೆ. ನಗರದ ನಿವಾಸಿಗಳು ರಸ್ತೆ ಗುಂಡಿಗಳ ಬಗ್ಗೆ ಪೌರಕಾರ್ಮಿಕರಿಗೆ ತಿಳಿಸಲು ಮತ್ತು ಅಗತ್ಯ ಕ್ರಮಗಳನ್ನು ತ್ವರಿತವಾಗಿ ತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಅವರು ಹೇಳಿದರು.












Click it and Unblock the Notifications