ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸಾಗಿಸುವ ವಾಹನಕ್ಕೆ ಜಿಪಿಎಸ್

ಬೆಂಗಳೂರು, ಫೆಬ್ರವರಿ 20 : 2018ನೇ ಸಾಲಿನ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಪ್ರಶ್ನೆಪತ್ರಿಕೆ ವಿತರಿಸುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಂಕಿಂಗ್ ಸಿಸ್ಟಂ ಅಳವಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಗೃಹ ಸಚಿವ ರಾಮಲಿಂಗಾರೆಡ್ಡಿ ಜತೆ ಪರೀಕ್ಷಾ ಕಾರ್ಯಗಳ ಭದ್ರತೆ ಕುರಿತ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪರೀಕ್ಷೆಯ ವಿವಿಧ ಹಂತಗಳಲ್ಲಿ ಭದ್ರತೆ ಕಾಪಾಡಲು ಹಾಗೂ ಪರೀಕ್ಷಾ ಗೌಪ್ಯ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವ ಕಾರ್ಯದ ದಾಖಲೀಕರಣದ ಅವಶ್ಯಕತೆ ಇದೆ.

ಈ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲಾಗುವ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Question paper logistic vehicle will have GPS devices

ಡಿಡಿಪಿಯುಗಳಿಗೆ ಸೂಚನೆ: ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ರಚಿಸಲಾಗಿರುವ ಮಾರ್ಗವಾರು ಪ್ರಶ್ನೆಪತ್ರಿಕೆ ವಿತರಕರು ಬಳಸುವ ಎಲ್ಲ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜಿಪಿಎಸ್ ಅಳವಡಿಕೆಗಾಗಿ 1 ಲಕ್ಷ ರೂ ವರೆಗೆ ಅನುದಾನ ಬಳಸಿಕೊಳ್ಳಲು ಮಂಜೂರಾತಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+