ಕಾಂಗ್ರೆಸ್‌-ಜೆಡಿಎಸ್‌ ದುರಾಡಳಿತಕ್ಕೆ ಪೌರ ಕಾರ್ಮಿಕರು ಬಲಿ: ಅಶೋಕ್‌ ಆಕ್ರೋಶ

ಬೆಂಗಳೂರು, ಜು.10: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಸಾವಿರಾರು ಗುತ್ತಿಗೆ ಪೌರಕಾರ್ಮಿಕರಿಗೆ ವೇತನ ಕೊಡದೆ ಅವರನ್ನು ಸಂಕಷ್ಟಕ್ಕೆ ದೂಡಿರುವ ಹಿಂದಿನ ಸಿದ್ದರಾಮಯ್ಯ ಹಾಗೂ ಇಂದಿನ ಎಚ್‌ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್‌ ಅಶೋಕ್‌ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಅಭಿಪ್ರಾಯ ನೀಡಿರುವ ಅವರು ಕೇಂದ್ರ ಸರ್ಕಾರ ಮಹಾನಗರಗಳ ಸ್ವಚ್ಛತೆಗಾಗಿ ಸ್ವಚ್ಛಭಾರತ ಅಭಿಯಾನದಡಿ ಬಿಡುಗಡೆ ಮಾಡಿದ, ನೂರಾರು ಕೋಟಿ ರೂಪಾಯಿಗಳನ್ನು ಕೊಳ್ಳೆ ಹೊಡೆದಿರುವ ರಾಜ್ಯ ಸರ್ಕಾರ ಪೌರಕಾರ್ಮಿಕರಿಗೆ ವೇತನವನ್ನೂ ನೀಡದೆ ಮೋದ ಮಾಡಿದೆ.

ನಗರದ ಸ್ವಚ್ಛತೆ ಕಾಪಾಡುವಲ್ಲಿ ಹಗಲಿರುಳೂ ದುಡಿದ ಪೌರಕಾರ್ಮಿಕರಿಗೆ ನೀಡಬೇಕಾದ ಏಳು ತಿಂಗಳ ಸಂಬಳವನ್ನೂ ಹಿಡಿದಿಟ್ಟುಕೊಂಡಿರುವ ಹಿಂದಿನ ಸಿದ್ದರಾಮಯ್ಯ ಹಾಗೂ ಇಂದಿನ ಎಚ್‌ಡಿ ಕುಮಾರಸ್ವಾಮಿ ಅವರ ಸರ್ಕಾರ ಬಡವರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಕಳೆದ ಏಳು ತಿಂಗಳಿಂದ ವೇತನ ನೀಡದಿರುವುದಕ್ಕೆ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿರುವುದು ಹಾಗೂ ಬಿಬಿಎಂಪಿ ಆಡಳಿತ ವ್ಯವಸ್ಥೆಯೇ ಕೈಜೋಡಿಸಿರುವುದೇ ಮಾಧ್ಯಮಗಳ ವರದಿಯನ್ನು ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

R.Ashok accuses Siddaramaiah and Kumaraswamy administration for PKs issue

ಸಂಬಳ ನೀಡದ ಹಿನ್ನೆಲೆಯಲ್ಲಿ ವೈಯಾಲಿಕಾವಲ್‌ನ ಸುಬ್ರಮಣಿ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿರುವ ಕಾರಣ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ್‌, ಆದಷ್ಟು ಬೇಗ ಅವರಿಗೆ ನೀಡಬೇಕಾದ ಬಾಕಿ ಹಣವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+