Get Updates
Get notified of breaking news, exclusive insights, and must-see stories!

ಕರ್ನಾಟಕ ಸರ್ಕಾರ 80% ಕಮಿಷನ್ ಪಡೆಯುತ್ತಿದೆ: ಸಿಎಂ ರಾಜೀನಾಮೆಗೆ ವಿಪಕ್ಷ ನಾಯಕ ಆಗ್ರಹ

ಬೆಂಗಳೂರು, ಸೆಪ್ಟಂಬರ್ 29: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿರುವುದು ಸಾಬೀತಾಗಿದೆ ಎಂದಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತ ವಿರುದ್ಧ ಅವರು ಕಿರಿ ಕಾರಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ 40% ಕಮಿಶನ್‌ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್‌ ಸರ್ಕಾರ ದುಪ್ಪಟ್ಟು ಕಮಿಶನ್‌ ಪಡೆಯುತ್ತಿದೆ ಎಂದು ಹೇಳಿ ಸಿಎಂಗೆ ಪತ್ರ ಬರೆದಿದ್ದಾರೆ. ಅಂದರೆ ಇದು 80 ಪರ್ಸೆಂಟ್‌ ಸರ್ಕಾರ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

R Ashok Demands CM Siddaramaiah s Resignation Over 80 Percent Commission Allegation

ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನದಾಸ್‌ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್‌ ಅಂಟಿಸಿದ್ದರು. ಇದಕ್ಕೆ ರಾಹುಲ್‌ ಗಾಂಧಿ ಉತ್ತರ ನೀಡಬೇಕು ಎಂದರು.

ಪ್ರವಾಹ ಜಿಲ್ಲೆಗಳ ಪರಿಹಾರ ಬಗ್ಗೆ ತಿಳಿಸಿ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್‌ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು.

ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರ ಅರ್ಧ ಕೆಜೆ ಅಕ್ಕಿಯೂ ಕೊಟ್ಟಿಲ್ಲ. ಬಿಜೆಪಿ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನು ಕೂಡ ಪ್ರವಾಸ ಮಾಡಿ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇನೆ ಎಂದು ಹೇಇದರು.

ರಿಯಲ್‌ ಎಸ್ಟೇಟ್‌ ದುಡ್ಡಿಗಾಗಿ ಯೋಜನೆ ಜಾರಿ

ಬಿಡದಿಯಲ್ಲಿ ಅಭಿವೃದ್ಧಿಗಾಗಿ ಪಡೆದ ಜಮೀನನ್ನು ಎಚ್‌.ಡಿ.ಕುಮಾರಸ್ವಾಮಿ ಕೈ ಬಿಟ್ಟಿದ್ದರು. ನಾವು ಕೂಡ ಆ ಯೋಜನೆ ಕೈ ಬಿಟ್ಟಿದ್ದೆವು. ಈಗ ರಿಯಲ್‌ ಎಸ್ಟೇಟ್‌ ಮೂಲಕ ದುಡ್ಡು ಹೊಡೆಯಲು ಡಿ.ಕೆ.ಶಿವಕುಮಾರ್‌ ಈ ಯೋಜನೆ ಮತ್ತೆ ತಂದಿದ್ದಾರೆ. ಆನೇಕಲ್‌, ಯಲಹಂಕ ಮೊದಲಾದ ಭಾಗಗಳಲ್ಲಿ ನಿವೇಶನ ಮಾಡಿದ ನಂತರ ಬಿಡದಿಗೆ ಏಕೆ ಹೋಗುತ್ತಿದ್ದಾರೆ? ಈಗಾಗಲೇ ಅನೇಕ ನಿವೇಶನಗಳು ಖಾಲಿ ಇದೆ. ಬಿಡದಿಯಲ್ಲಿ ರೈತರ ಜಮೀನುಗಳಿವೆ. ಅಂತಹ ಫಲವತ್ತಾದ ಭೂಮಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಡಬಾರದು.

ಜಾತಿ ಸಮೀಕ್ಷೆಯಲ್ಲಿ ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲು ಪ್ರಯತ್ನ ಮಾಡುತ್ತಿದ್ದಾರೆ. ಈ ಸಮೀಕ್ಷೆಗೆ ಪೂರ್ವ ತಯಾರಿ ಮಾಡಿಲ್ಲ. ಕೇವಲ ಹದಿನೈದು ದಿನಗಳಲ್ಲಿ ಮುಗಿಸಿ ಎಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಸಾಕಷ್ಟು ಸಮಯ ಇಟ್ಟುಕೊಂಡು ಸಮೀಕ್ಷೆ ಮಾಡಬೇಕು. ಇದು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಇಷ್ಟಪಡಿಸಲು ಮಾಡುತ್ತಿರುವ ಸಮೀಕ್ಷೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+