Get Updates
Get notified of breaking news, exclusive insights, and must-see stories!

ಮಸೂದೆಗೆ ತಡೆ: 'ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು': ಸಿಎಂ ವಿರುದ್ಧ ಆರ್‌.ಅಶೋಕ್ ಹೀಗಂದಿದ್ದೇಕೆ?

ಬೆಂಗಳೂರು, ಜುಲೈ 18: ಕರ್ನಾಟಕದ ಖಾಸಗಿ ರಂಗದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಯನ್ನು ಅನುಮೋದನೆ ನೀಡಿದ ವೇಗದಲ್ಲೇ ರಾಜ್ಯ ಸರ್ಕಾರ ಅದಕ್ಕೆ ತಡೆ ನೀಡಿದೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್ ಅವರು ''ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು" ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಖಾಸಗಿ ಉದ್ಯಮಿಗಳಿಂದ ರಾಜ್ಯ ಸರ್ಕಾರ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಡ್ಡಾಯ ಮೀಸಲು ಮಸೂದೆಗೆ ನಿರ್ಧಾರವನ್ನು ವಿರೋಧಿಸಿದ್ದವು. ಮಸೂದೆ ಇದು ಆರಂಭಿಕ ಹಂತದಲ್ಲಿದ್ದು, ಹೀಗಾಗಿ ತಡೆಗೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತಿರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸಬೂಬು ಹೇಳಿದ್ದರು. ಕೆಲ ಉದ್ಯಮಿಗಳ ವಿರೋಧಕ್ಕೆ ತಕ್ಕ ಸಮರ್ಥನೆ ನೀಡುವಲ್ಲಿ ಸಿದ್ದರಾಮಯ್ಯ ವಿಫಲವಾದಂತೆ ಕಾಣುತ್ತದೆ.

R Ashok Outrage on Siddaramaiah Over govt Clears Bill Mandating reservation of locals in Jobs

ಈ ಕುರಿತು ಟ್ವೀಟ್ ಮಾಡಿರುವ ಆರ್ ಅಶೋಕ್ ಅವರು, ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು" ಎಂಬ ಕನ್ನಡದ ಗಾದೆ ಮಾತು ಕೇಳಿರಬೇಕಲ್ಲವೇ ಸಿಎಂ ಸಿದ್ದರಾಮಯ್ಯನವರೇ?. ಇದು ನಿಮಗೆ ಬಹಳ ಸೂಕ್ತವಾಗಿ ಅನ್ವಯಿಸುತ್ತದೆ. ದಲಿತರ ದೊಡ್ಡು ಹೊಡೆದು ಕಳೆದುಕೊಂಡಿರುವ ಮಾನ ಕನ್ನಡಿಗರ ಮೂಗಿಗೆ ತುಪ್ಪ ಸವರಿದರೆ ವಾಪಸ್ಸು ಬರುತ್ತದೆಯೇ? ಎಂದು ಲೇವಡಿ ಮಾಡಿದ್ದಾರೆ.

ದಲಿತರ ದುಡ್ಡು ಹೊಡೆದಿರುವ ಬಗ್ಗೆ ಉತ್ತರ ಕೋಡಿ ಸ್ವಾಮಿ ಅಂದರೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಹೊಸ ನಾಟಕ ಶುರು ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದರು ಎಂದು ಸಿದ್ದರಾಮಯ್ಯ ಅವರ ಮೇಲೆ ನೇರ ಆರೋಪ ಮಾಡಿದರು. ಕರ್ನಾಟಕದ ಜನತೆ ನಿಮ್ಮ ಕುತಂತ್ರಗಳನ್ನ ಅರಿಯದಷ್ಟು ದಡ್ಡರು, ಅಮಾಯಕರು ಅಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನಿಂದ 'ಗೋಸುಂಬೆ ರಾಜಕೀಯ'

ಚುನಾವಣೆ ಬಂದಾಗಲೆಲ್ಲಾ ಅಥವಾ ನಿಮ್ಮ ಸರ್ಕಾರ/ಪಕ್ಷ ಮುಜುಗರಕ್ಕೆ ಈಡಾದಾಗಲೆಲ್ಲ ಪ್ರತ್ಯೇಕ ಧರ್ಮ, ಪ್ರತ್ಯೇಕ ಧ್ವಜ, ನಂದಿನಿ - ಅಮುಲ್, 'ನನ್ನ ತೆರಿಗೆ ನನ್ನ ಹಕ್ಕು', ಎಂಬ ಇಲ್ಲಸಲ್ಲದ ವಿಚಾರಗಳನ್ನು ಹುಟ್ಟುಹಾಕಿ ಜನರ ಗಮನ ಬೇರೆಡೆ ಸೆಳೆಯುವ ನಿಮ್ಮ 'ಗೋಸುಂಬೆ ರಾಜಕೀಯ' ಕನ್ನಡಿಗರಿಗೆ ಗೊತ್ತಿಲ್ಲ ಎಂಬ ಭ್ರಮೆಯಲ್ಲಿದ್ದೀರಾ? ಎಂದು ಅವರು ಪ್ರಶ್ನಿಸಿದರು.

R Ashok Outrage on Siddaramaiah Over govt Clears Bill Mandating reservation of locals in Jobs

ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ, ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಸಾಧ್ಯವೇ ಇಲ್ಲ. ನಿಮ್ಮ ಪಾಪದ ಕೊಡ ತುಂಬಿದೆ ಸಿದ್ದರಾಮಯ್ಯನವರೇ, ನಿಮ್ಮ ಮುಖವಾಡ ಕಳಚಿದೆ, ಆಟ ಮುಗಿದಿದೆ. ಈ ನಾಟಕವೆಲ್ಲಾ ಬಿಟ್ಟು ತೆಪ್ಪಗೆ ರಾಜೀನಾಮೆ ಕೊಟ್ಟು ನಿಮ್ಮ ಮರ್ಯಾದೆ ಉಳಿಸಿಕೊಳ್ಳಿ, ರಾಜ್ಯದ ಗೌರವವನ್ನೂ ಉಳಿಸಿ ಎಂದು ಅವರು ಆಗ್ರಹಿಸಿದ್ದಾರೆ.

ವಿಧೇಯಕಕ್ಕೆ ತಡೆ ಸೂಕ್ತ ತೀರ್ಮಾನ: ಎಂಬಿ ಪಾಟೀಲ್

ಇನ್ನೂ ಈ ಕುರಿತು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಪ್ರತಿಕ್ರಿಯಿಸಿದ್ದು, ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಉದ್ದೇಶಿತ ಮಸೂದೆಯನ್ನು ತಡೆ ಹಿಡಿದು, ವಿಸ್ತೃತ ಚರ್ಚೆಯವರೆಗೂ ತೀರ್ಮಾನ ಮುಂದೂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೀರ್ಮಾನ ಸೂಕ್ತವಾಗಿದೆ. ಆದ್ದರಿಂದ ಉದ್ಯಮಿಗಳು ಆತಂಕಕ್ಕೆ ಒಳಗಾಗಬೇಕಾಗಿಲ್ಲ ತಿಳಿಸಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಲಾತಾಣದಲ್ಲಿ (ಎಕ್ಸ್) ತಮ್ಮ ಪ್ರತಿಕ್ರಿಯೆ ಪೋಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರವು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿ, ಕನ್ನಡಿಗರಿಗೆ ಉದ್ಯೋಗ ನೀಡಲು ಬದ್ಧವಾಗಿದೆ. ಆದರೆ ಇದರಲ್ಲಿ ಉದ್ಯಮಗಳ ಹಿತಕ್ಕೂ ಧಕ್ಕೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+