ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಆಸ್ಪತ್ರೆಗಳಲ್ಲಿ 2 ಸಾವಿರ ಬೆಡ್ ಇದೆ- ಆರ್ ಅಶೋಕ್

|
Google Oneindia Kannada News

ಬೆಂಗಳೂರು, ಜೂನ್ 23: ಕೊರೊನಾ ವೈರಸ್ ಭೀತಿ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆಯೂ ಕಾಡುತ್ತಿದೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿಕೊಂಡಿರುವ ಪ್ರಮುಖ ಆಸ್ಪತ್ರೆಗಳಲ್ಲಿ ಇತರೆ ಬೇರೆ ರೋಗದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪ ಇದೆ.

Recommended Video

ಸುಶಾಂತ್ ಸಿಂಗ್ ರಾಜಪೂತ್ : ಮಧ್ಯಮ ವರ್ಗದ ಹುಡಗ , ಬಾಲಿವುಡ್ ಸ್ಟಾರ್ ಆಗಿದ್ದು ಹೇಗೆ | Sushanth Singh Rajput

ಹಾಸಿಗೆ ಇಲ್ಲದ ಕಾರಣ ರೋಗಿಗಳನ್ನು ಸೇರಿಸಿಕೊಳ್ಳುತ್ತಿಲ್ಲ. ಕೊವಿಡ್ ಕೇಂದ್ರವಾಗಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ಹೇಳಲಾಗಿತ್ತು. ಬೆಡ್ ಇಲ್ಲ ಎಂಬ ಕಾರಣಕ್ಕೆ ರೋಗಿಯನ್ನ ನಡು ರಸ್ತೆಯಲ್ಲಿ ನಿಲ್ಲಿಸಿದ್ದರು ಎಂದು ವಿಷಯವೂ ವರದಿಯಾಗಿತ್ತು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಚಿಕಿತ್ಸೆಗೆ ದರ ನಿಗದಿಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಚಿಕಿತ್ಸೆಗೆ ದರ ನಿಗದಿ

ಈ ಸಂಬಂಧ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್'' ಬೆಡ್ ಇಲ್ಲ ಅಂತಾ ಹೇಳುವ ಸಮಸ್ಯೆ ಬರಬಾರದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಬೆಂಗಳೂರಲ್ಲಿ 2 ಸಾವಿರ ಬೆಡ್ ಇವೆ'' ಎಂದು ತಿಳಿಸಿದ್ದಾರೆ.

 R Ashok Reaction about bed problem in victoria hospital

''ಸರ್ಕಾರದಿಂದ ರೆಫರ್ ಆಗಿ ಹೋಗುವ ರೋಗಿಗಳಿಗೆ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ನಿಗದಿತ ದರದೊಂದಿಗೆ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ ಆದೇಶ ಹೊರಡಿಸಿದ್ದೇವೆ'' ಎಂದು ಹೇಳಿದ್ದಾರೆ.

''ಖಾಸಗಿ ಆಸ್ಪತ್ರೆಗಳ ಕೋವಿಡ್ ರೋಗಿಗಳ ಚಿಕಿತ್ಸೆಗೆ ಸರ್ಕಾರದಿಂದಲೇ ಹಣ ಬಿಡುಗಡೆ ಮಾಡುತ್ತೇವೆ. ಆದರೆ ಸಾರ್ವಜನಿಕ ಆರೋಗ್ಯ ಇಲಾಖೆಯ ಶಿಫಾರಸು ಅಗತ್ಯ'' ಎಂದು ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ ಕೆ.ಸಿ.ಜನರಲ್ ಆಸ್ಪತ್ರೆ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಆಸ್ಪತ್ರೆಯಲ್ಲಿ ಸಿದ್ದಪಡಿಸಲಾಗಿರುವ ನೂರು ಬೆಡ್ ಗಳ ಕೋವಿಡ್ ವಾರ್ಡ್ ಪರಿಶೀಲನೆ ನಡೆಸಿದರು.

English summary
Karnataka Minister R Ashok said 2 thousand beds available in bangalore hospitals. no bed problem at hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X