ಸಿಟಿ ರವಿಗೆ ಹೈಕೋರ್ಟ್ ರಿಲೀಫ್: ಸಿಎಂ-ಡಿಸಿಎಂ ಇನ್ನಾದರೂ ಹಿಟ್ಲರ್ ಧೋರಣೆ ಬಿಡಬೇಕು

ಬೆಂಗಳೂರು, ಡಿಸೆಂಬರ್ 20: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಪೊಲೀಸರು ಬಂಧಿಸಿದ್ದ ಬಿಜೆಪಿ ನಾಯಕರಿಗೆ ಸಿಟಿ ರವಿ ಅವರಿಗೆ ಶುಕ್ರವಾರ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇದರ ಬೆನ್ನಲ್ಲೆ ಹೈಕೋರ್ಟ್ ಆದೇಶ ಸ್ವಾಗತಿಸಿದ ವಿಪಕ್ಷ ಆರ್‌.ಅಶೋಕ್ ಅವರು ಸಿಎಂ ಮತ್ತು ಡಿಸಿಎಂ ಗೆ ಟಾಂಗ್ ನೀಡಿದ್ದಾರೆ.

'ಸತ್ಯಮೇವ ಜಯತೇ' ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಹೈಕೋಟ್‌ ಆದೇಶ ಸ್ವಾಗತಿಸಿದ್ದಾರೆ. ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

R Ashok Response to The High Court s Gig relief to CT Ravi

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಅಕ್ರಮವಾಗಿ ಬಂಧಿಸಿದ್ದು ಅತ್ಯಂತ ತಪ್ಪು ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರಂಕುಶವಾದಿ ಧೋರಣೆಗೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ತತಕ್ಷಣವಾಗಿ ಸಿಟಿ ರವಿ ಅವರನ್ನು ಬಿಡುಗಡೆಗೊಳಿಸಿ ಎಂದು ಆದೇಶ ನೀಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಅವರು ಹೇಳಿದರು.

ಹಿಟ್ಲರ್ ಧೋರಣೆ ಬಿಡಬೇಕು

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇನ್ನಾದರೂ ತಮ್ಮ ಹಿಟ್ಲರ್ ಧೋರಣೆ ಬಿಡಬೇಕು. ಒಂದು ಜವಾಬ್ದಾರಿಯುತ ಸರ್ಕಾರದ ರೀತಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದನ್ನು ಕಲಿಯಬೇಕು ಎಂದು ಆರ್.ಅಶೋಕ್ ಟಾಂಗ್ ನೀಡಿದ್ದಾರೆ.

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಅವರ ಬೆಂಬಲಿಗರು ಸಿಟಿ ರವಿ ಅವರ ಮೇಲೆ ಹಲ್ಲೆ ಮಾಡಿದ್ದರು. ಅವರ ತಲೆಗೆ ಗಾಯವಾಗಿತ್ತು.

ಇದೇ ವಿಚಾರವಾಗಿ ಸಿಟಿ ರವಿ ವಿರುದ್ಧ ಖಾನಾಪುರ ಠಾಣೆಯಲ್ಲಿ ದೂರು ದಾಖಲಾಗಿ ಎರಡೇ ಗಂಟೆಗಳಲ್ಲಿ ಪ್ರತಿಭಟನೆ ಮಾಡುದ್ದ ಬಿಜೆಪಿ ನಾಯಕರ ಪೈಕಿ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಇದನ್ನು ಖಂಡಿಸಿ ಬಿಜೆಪಿ ನಾಯಕರು ಇಂದು ಸಹ ಪ್ರತಿಭಟನೆ ಮಾಡಿದ್ದರು.

ರಾಜ್ಯ ಸರ್ಕಾರ ಸರ್ವಾಧಿಕಾರ ಧೋರಣೆ ತೋರುತ್ತಿದೆ. ರಾಜ್ಯ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷ ನಾಯಕರ ಮೇಲೆ ಹಲ್ಲೆ ಮುಂದಾಗಿದೆ ಎಂದೆಲ್ಲ ಬಿಜೆಪಿ ನಾಯಕರು ಆರೋಪಿಸಿದ್ದರು. ಸರ್ಕಾರದ ನಡೆ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಸಿಟಿ ರವಿಗೆ ಹೈಕೋರ್ಟ್ ರಿಲೀಫ್

ಬಂಧನ ಬಳಿಕ ಒಂದು ರಾತ್ರಿ ಸುತ್ತಾಡಿಸಿದ ಪೊಲೀಸರು ಇಂದು ಬೆಳಗ್ಗೆ ಹೈಕೋರ್ಟ್ ಗೆ ಸಿಟಿ ರವಿ ಅವರನ್ನು ಹಾಜರುಪಡಿಸಿದರು. ಈ ವೇಳೆ ನಿಯಮ ಪಾಲನೆ ಮಾಡದೇ ಏಕಾಎಕಿ ಬಂಧಿಸಿದ್ದನ್ನು ಪ್ರಶ್ನಿಸಿದ ನ್ಯಾಯಾಲಯ, ಸರ್ಕಾರ ನಡೆಗೆ ತರಾಟೆಗೆ ತೆಗೆದುಕೊಂಡಿತು. ಬಳಿಕ ತಕ್ಷಣವೇ ಸಿಟಿ ರವಿ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+